Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 34:37 - ಕನ್ನಡ ಸತ್ಯವೇದವು J.V. (BSI)

37 ಅವನು ಅಪರಾಧವನ್ನಲ್ಲದೆ ದೇವದ್ರೋಹವನ್ನೂ ಮಾಡಿದ್ದಾನೆ; ನಮ್ಮ ಮಧ್ಯದಲ್ಲಿ ಚಪ್ಪಾಳೆಹೊಡೆದು ದೇವರಿಗೆ ವಿರುದ್ಧವಾಗಿ ಅಧಿಕಪ್ರಸಂಗ ಮಾಡುತ್ತಾನೆ ಎಂದು ನನಗೆ ಹೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 ಅವನು ಅಪರಾಧವನ್ನಲ್ಲದೆ ದೈವದ್ರೋಹವನ್ನೂ ಮಾಡಿದ್ದಾನೆ; ನಮ್ಮ ಮಧ್ಯದಲ್ಲಿ ಚಪ್ಪಾಳೆಹೊಡೆದು, ದೇವರಿಗೆ ವಿರುದ್ಧವಾಗಿ ಅಧಿಕ ಮಾತುಗಳನ್ನು ಆಡುತ್ತಾನೆ” ಎಂದು ನನಗೆ ಹೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

37 ಅವನು ಅಪರಾಧಿ ಮಾತ್ರವಲ್ಲ, ದೇವದ್ರೋಹವೆಸಗಿದ್ದಾನೆ ನಮ್ಮ ಮಧ್ಯೆ ಸಂದೇಹವನು ಎಬ್ಬಿಸಿದ್ದಾನೆ ದೇವರಿಗೆ ವಿರುದ್ಧವಾಗಿ ಅಧಿಕ ಪ್ರಸಂಗಮಾಡುತ್ತಾನೆ’.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

37 ಅವನು ತನ್ನ ಪಾಪಕ್ಕೆ ಇನ್ನೂ ಕೂಡಿಸಿಕೊಳ್ಳುತ್ತಿದ್ದಾನೆ; ನಮ್ಮ ಮಧ್ಯದಲ್ಲಿ ತನ್ನ ದುಷ್ಟತನವನ್ನು ಅಧಿಕಮಾಡಿಕೊಳ್ಳುತ್ತಿದ್ದಾನೆ; ದೇವದ್ರೋಹವನ್ನು ಹೆಚ್ಚಿಸಿಕೊಳ್ಳುತ್ತಿದ್ದಾನೆ” ಎಂದು ನನಗೆ ಹೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

37 ಯೋಬನು ತನ್ನ ಪಾಪಕ್ಕೆ ದೇವರಿಗೆ ಎದುರಾಗಿ ಪ್ರತಿಭಟನೆಯನ್ನು ಸಹ ಕೂಡಿಸುತ್ತಿದ್ದಾನೆ; ಅಪಹಾಸ್ಯದಿಂದ ನಮ್ಮ ಮಧ್ಯದಲ್ಲಿ ಚಪ್ಪಾಳೆ ತಟ್ಟುತ್ತಾನೆ; ದೇವರಿಗೆ ವಿರುದ್ಧ ಹೆಚ್ಚು ಮಾತುಗಳನ್ನಾಡುತ್ತಾನೆ,’ ಎಂದು ನನಗೆ ಹೇಳುತ್ತಿದ್ದಾರೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 34:37
11 ತಿಳಿವುಗಳ ಹೋಲಿಕೆ  

ಜನರು ಅವನನ್ನು ನೋಡಿ ಚಪ್ಪಾಳೆಹೊಡೆದು ಛೀ ಹಾಕಿ ಆಚೆಗೆ ಹೊರಡಿಸುವರು.


ಅವಿಧೇಯತ್ವವು ಮಂತ್ರತಂತ್ರಗಳಷ್ಟೇ ಕೆಟ್ಟದ್ದಾಗಿರುವದು; ಹಟವು ವಿುಥ್ಯಾಭಕ್ತಿಗೂ ವಿಗ್ರಹಾರಾಧನೆಗೂ ಸಮಾನವಾಗಿರುವದು. ನೀನು ಯೆಹೋವನ ಮಾತನ್ನು ತಳ್ಳಿಬಿಟ್ಟದ್ದರಿಂದ ಆತನು ನಿನ್ನನ್ನು ಅರಸುತನದಿಂದ ತಳ್ಳಿಬಿಟ್ಟಿದ್ದಾನೆ ಎಂದು ನುಡಿದನು.


ಯೆಹೋವನು ಈ ಮಾತುಗಳನ್ನು ಯೋಬನಿಗೆ ಹೇಳಿದ ಮೇಲೆ ತೇಮಾನ್ಯನಾದ ಎಲೀಫಜನನ್ನು ಕುರಿತು - ನಿನ್ನ ಮೇಲೆಯೂ ನಿನ್ನ ಇಬ್ಬರು ಸ್ನೇಹಿತರ ಮೇಲೆಯೂ ಕೋಪಗೊಂಡಿದ್ದೇನೆ; ನನ್ನ ದಾಸನಾದ ಯೋಬನು ನನ್ನ ವಿಷಯವಾಗಿ ಯಥಾರ್ಥವನ್ನಾಡಿದಂತೆ ನೀವು ಆಡಲಿಲ್ಲ.


ಈಗ ಯೋಬನು ಸುಮ್ಮನೆ ಬಾಯಿಬಿಟ್ಟುಕೊಂಡು ಯಾವ ತಿಳುವಳಿಕೆಯೂ ಇಲ್ಲದೆ ಬಹಳ ಮಾತಾಡುತ್ತಾನೆ.


ನಾನು ನನ್ನ ನರಳಾಟವನ್ನು ಎಷ್ಟು ಬಿಗಿಹಿಡಿದರೂ ಆ ನನ್ನ ಮೂಲುಗುವಿಕೆಯು ದೇವದ್ರೋಹವೆಂದು ಈಗಲೂ ಎಣಿಸುತ್ತೀರಾ?


ಆಮೇಲೆ ಎಲೀಹು ಮತ್ತೆ ಇಂತೆಂದನು -


ನಿನ್ನವರು ದೊಡ್ಡ ಬಾಯಿಮಾಡಿ ನನ್ನ ಮೇಲೆ ಆಡಿದ ಹೆಚ್ಚು ಹರಟೆಗಳನ್ನು ಕೇಳಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು