Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 34:4 - ಕನ್ನಡ ಸತ್ಯವೇದವು J.V. (BSI)

4 ನ್ಯಾಯವನ್ನೇ ಆರಿಸಿಕೊಳ್ಳೋಣ, ಒಳ್ಳೇದು ಇಂಥದೆಂದು ನಮ್ಮನಮ್ಮೊಳಗೆ ನಿಶ್ಚಯಿಸಿಕೊಳ್ಳೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನ್ಯಾಯವನ್ನೇ ಆರಿಸಿಕೊಳ್ಳೋಣ, ಒಳ್ಳೆಯದು ಇಂಥದೆಂದು ನಮ್ಮನಮ್ಮೊಳಗೆ ನಿಶ್ಚಯಿಸಿಕೊಳ್ಳೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಸರಿಯಾದುದನ್ನೇ ಆಯ್ದುಕೊಳ್ಳೋಣ ಒಳಿತಾದುದನ್ನು ನಮ್ಮ ನಮ್ಮಲ್ಲೇ ನಿಶ್ಚಯಿಸಿಕೊಳ್ಳೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಅಂತೆಯೇ ನಾವು ಈ ವಾದಗಳನ್ನು ಪರೀಕ್ಷಿಸಿ ನ್ಯಾಯವಾದದ್ದನ್ನೇ ಆರಿಸಿಕೊಳ್ಳೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ನಾವು ಸರಿಯಾದುದನ್ನೇ ಆಯ್ದುಕೊಳ್ಳೋಣ; ಒಳ್ಳೆಯದು ಏನೆಂದು ನಮ್ಮೊಳಗೆ ನಾವೇ ತಿಳಿದುಕೊಳ್ಳೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 34:4
11 ತಿಳಿವುಗಳ ಹೋಲಿಕೆ  

ಆದರೆ ಎಲ್ಲವನ್ನೂ ಪರಿಶೋಧಿಸಿ ಒಳ್ಳೇದನ್ನೇ ಭದ್ರವಾಗಿ ಹಿಡಿದುಕೊಳ್ಳಿರಿ;


ಇಹಲೋಕದ ನಡವಳಿಕೆಯನ್ನು ಅನುಸರಿಸದೆ ನೂತನಮನಸ್ಸನ್ನು ಹೊಂದಿಕೊಂಡು ಪರಲೋಕಭಾವದವರಾಗಿರಿ. ಹೀಗಾದರೆ ದೇವರ ಚಿತ್ತಕ್ಕನುಸಾರವಾದದ್ದು ಅಂದರೆ ಉತ್ತಮವಾದದ್ದೂ ಮೆಚ್ಚಿಕೆಯಾದದ್ದೂ ದೋಷವಿಲ್ಲದ್ದೂ ಯಾವ ಯಾವದೆಂದು ವಿವೇಚಿಸಿ ತಿಳುಕೊಳ್ಳುವಿರಿ.


ಕಣ್ಣಿಗೆ ತೋರಿದ್ದರ ಮೇಲೆ ತೀರ್ಪುಮಾಡಬೇಡಿರಿ; ನ್ಯಾಯವಾದ ತೀರ್ಪುಮಾಡಿರಿ ಎಂದು ಹೇಳಿದನು.


ಯೋಬನ ಪರಿಶೋಧನೆಯು ನಿರಂತರವಾಗಿದ್ದರೆ ಸಂತೋಷ! ದುಷ್ಟರ ಹಾಗೆ ಉತ್ತರಕೊಡುತ್ತಾನಲ್ಲವೆ;


ಇಲ್ಲಿ ಕೂಡಿದ ಎಲ್ಲಾ ಇಸ್ರಾಯೇಲ್ಯರೇ, ಈಗ ನಿಮ್ಮ ಆಲೋಚನಾಭಿಪ್ರಾಯಗಳನ್ನು ಹೇಳಿರಿ ಅಂದನು.


ಅವುಗಳನ್ನು ಕಂಡವರೆಲ್ಲರೂ - ಇಸ್ರಾಯೇಲ್ಯರು ಐಗುಪ್ತವನ್ನು ಬಿಟ್ಟು ಬಂದ ದಿವಸ ಮೊದಲುಗೊಂಡು ಈ ದಿವಸದವರೆಗೆ ಇಂಥ ಕೃತ್ಯವು ನಡೆಯಲೂ ಇಲ್ಲ. ನಾವು ಅದನ್ನು ನೋಡಿಯೂ ಇಲ್ಲ. ಈ ಸಂಗತಿಯನ್ನು ಮನಸ್ಸಿಗೆ ತಂದು ವಿಚಾರಿಸತಕ್ಕದ್ದು ಅಂದುಕೊಂಡರು.


ಅಂಗುಳವು ಆಹಾರವನ್ನು ರುಚಿನೋಡುವಂತೆ ಕಿವಿಯು ಮಾತುಗಳನ್ನು ವಿವೇಚಿಸುತ್ತದಲ್ಲಾ.


ಯೋಬನು - ನಾನು ನೀತಿವಂತನು, ದೇವರು ನನ್ನ ನ್ಯಾಯವನ್ನು ತಪ್ಪಿಸಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು