Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 34:7 - ಕನ್ನಡ ಸತ್ಯವೇದವು J.V. (BSI)

7 ಯೋಬನಿಗೆ ಸಮಾನನು ಯಾರು? ದೇವದೂಷಣೆಯನ್ನು ನೀರಿನಂತೆ ಕುಡಿಯುತ್ತಾನಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಯೋಬನಿಗೆ ಸಮಾನನು ಯಾರು? ದೇವದೂಷಣೆಯನ್ನು ನೀರಿನಂತೆ ಕುಡಿಯುತ್ತಾನಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಈ ಯೋಬನಂಥ ಮನುಜನು ಯಾರಿದ್ದಾನೆ? ಇಗೋ, ದೇವದೂಷಣೆಯನು ನೀರಿನಂತೆ ಕುಡಿಯುತ್ತಾನೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 “ಯೋಬನಿಗೆ ಸಮಾನನು ಯಾರು? ಅವನು ನೀರು ಕುಡಿದಂತೆ ದೇವರನ್ನು ದೂಷಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಯೋಬನಿಗೆ ಸಮಾನನು ಯಾರು? ಅವನು ನೀರು ಕುಡಿಯುವಂತೆ ಅಪಹಾಸ್ಯ ಮಾಡುತ್ತಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 34:7
8 ತಿಳಿವುಗಳ ಹೋಲಿಕೆ  

ಹೀಗಿರಲು ಅಧರ್ಮವನ್ನು ನೀರಿನಂತೆ ಕುಡಿಯುತ್ತಾ ಅಸಹ್ಯನೂ ಕೆಟ್ಟವನೂ ಆದ ನರಜನ್ಮದವನು ಮತ್ತೂ ಅಶುದ್ಧನಲ್ಲವೇ!


ಮೂಢರೇ, ಮೂಢತನವನ್ನು ಎಂದಿನ ತನಕ ಪ್ರೀತಿಸುವಿರಿ? ಧರ್ಮನಿಂದಕರು ನಿಂದಿಸುವದಕ್ಕೆ ಎಷ್ಟು ಕಾಲ ಇಷ್ಟಪಡುವರು? ಜ್ಞಾನಹೀನರು ತಿಳುವಳಿಕೆಯನ್ನು ಎಷ್ಟರವರೆಗೆ ಹಗೆಮಾಡುವರು?


ಶಾಪದಿಂದ ಕೂಡಿರುವ ಈ ಪ್ರತಿಜ್ಞೆಯನ್ನು ಕೇಳಿದ ಯಾವನಾದರೂ ತನ್ನೊಳಗೆ - ನಾನು ಹಟವನ್ನು ಹಿಡಿದು ಅವಿಧೇಯನಾದರೂ ನನಗೆ ಕ್ಷೇಮವಾಗಿಯೇ ಇರುವದು ಅಂದುಕೊಂಡು ಹಿಗ್ಗಬಾರದು. ಹಾಗೆ ಮಾಡುವವನು ದೋಷಿಗಳಿಗೂ ನಿರ್ದೋಷಿಗಳಿಗೂ ನಾಶನವನ್ನುಂಟುಮಾಡಾನು.


ದುಷ್ಟತನವೇ ಅವರ ಅನ್ನ; ಬಲಾತ್ಕಾರವೇ ಅವರ ದ್ರಾಕ್ಷಾರಸಪಾನ.


ನಾನು ಗೆಳೆಯನ ಗೇಲಿಗೆ ಗುರಿಯಾಗಿದ್ದೇನೆ! ದೇವರನ್ನು ಪ್ರಾರ್ಥಿಸಿದೆನಲ್ಲಾ, ಆತನು ಲಾಲಿಸಿದನಲ್ಲಾ, ನೀತಿವಂತನೂ ನಿರ್ದೋಷಿಯೂ ಆದವನು ಹಾಸ್ಯಾಸ್ಪದನಾಗಿದ್ದಾನೆ.


ನೀಚ ಸಾಕ್ಷಿಯು ನ್ಯಾಯವನ್ನು ಗೇಲಿಮಾಡುವನು; ದುಷ್ಟರ ಬಾಯಿ ದ್ರೋಹವನ್ನು ಆತುರದಿಂದ ನುಂಗುವದು.


ನೀನು ಬಡಾಯಿಕೊಚ್ಚಿದರೆ ಮನುಷ್ಯರು ಸುಮ್ಮನಿರಬೇಕೋ? ನೀನು ಕುಚೋದ್ಯವಾಗಿ ಮಾತಾಡುವಾಗ ನಿನ್ನನ್ನು ಯಾರೂ ನಾಚಿಕೆಪಡಿಸಕೂಡದೋ?


ನೀನಾದರೋ ದುಷ್ಟನಿರ್ಣಯಗಳಿಂದ ತುಂಬಿದವನಾಗಿ ನ್ಯಾಯವಿಚಾರಣೆಗೂ ನ್ಯಾಯತೀರ್ಪಿಗೂ ಒಳಗಾಗಿದ್ದೀ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು