Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 35:14 - ಕನ್ನಡ ಸತ್ಯವೇದವು J.V. (BSI)

14 ಹೀಗಿರಲು ಆತನು ಕಾಣುವದಿಲ್ಲ, ನನ್ನ ವ್ಯಾಜ್ಯವು ಆತನ ಮುಂದೆ ಬಿದ್ದೇ ಇದೆ, ಆತನನ್ನು ಕಾದಿರುತ್ತೇನೆ ಎಂದು ನೀನು ಹೇಳಿದರೆ ಆತನು ಕೇಳಾನೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಹೀಗಿರಲು ಆತನು ಕಾಣುವುದಿಲ್ಲ, ನನ್ನ ವ್ಯಾಜ್ಯವು ಆತನ ಮುಂದೆ ಇದೆ, ಆತನನ್ನು ಕಾದಿರುತ್ತೇನೆ ಎಂದು ನೀನು ಹೇಳಿದರೆ ಆತನು ಕೇಳುತ್ತಾನೆಯೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಇಂತಿರಲು ನೀನು, ‘ಆತ ಕಾಣನು, ನನ್ನ ವ್ಯಾಜ್ಯ ಆತನ ಮುಂದಿದೆ ಆತನಿಗಾಗಿ ಕಾದಿರುವೆ’ ಎಂದುಕೊಂಡರೂ ಆತ ಕೇಳಿಯಾನೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಯೋಬನೇ, ನೀನು, ‘ದೇವರನ್ನು ಕಾಣಲಾರೆನು’ ಎಂದು ಹೇಳುವಾಗ ಆತನು ನಿನಗೆ ಕಿವಿಗೊಡುವುದಿಲ್ಲ. ನಿನ್ನ ವ್ಯಾಜ್ಯವು ಆತನ ಮುಂದೆ ಇರುವುದರಿಂದ ನೀನು ಆತನಿಗಾಗಿ ಕಾದುಕೊಂಡಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಹೀಗಿರಲು, ‘ದೇವರು ಕಾಣುವುದಿಲ್ಲ, ನನ್ನ ವ್ಯಾಜ್ಯವು ದೇವರ ಮುಂದೆ ಇದೆ; ದೇವರಿಗಾಗಿ ಕಾದಿರುತ್ತೇನೆ,’ ಎಂದು ನೀನು ಹೇಳಿದರೆ, ದೇವರು ನಿನಗೆ ಕಿವಿಗೊಡುವರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 35:14
21 ತಿಳಿವುಗಳ ಹೋಲಿಕೆ  

ಆಹಾ, ಆತನು ನನ್ನ ಪಕ್ಕದಲ್ಲಿ ದಾಟಿಹೋದರೂ ನಾನು ಕಾಣೆನು; ಮುಂದಕ್ಕೆ ಹಾದುಹೋದರೂ ನನಗೆ ತಿಳಿಯುವದಿಲ್ಲ.


ನಿನ್ನನ್ನು ಎದುರಿಸಲು ಕಲ್ಪಿಸಿದ ಯಾವ ಆಯುಧವೂ ಜಯಿಸದು; ನ್ಯಾಯವಿಚಾರಣೆಯಲ್ಲಿ ನಿನಗೆ ವಿರುದ್ಧವಾಗಿ ಏಳುವ ಪ್ರತಿಯೊಂದು ನಾಲಿಗೆಯನ್ನು ದೋಷಿಯೆಂದು ನೀನು ಖಂಡಿಸುವಿ. ಈ ಸ್ಥಿತಿಯೇ ಯೆಹೋವನ ಸೇವಕರ ಸ್ವಾಸ್ತ್ಯವೂ ನಾನು ದಯಪಾಲಿಸುವ ಸದ್ಧರ್ಮಫಲವೂ ಆಗಿದೆ ಎಂದು ಯೆಹೋವನು ಅನ್ನುತ್ತಾನೆ.


ನಿಮ್ಮೊಳಗೆ ಯಾವನು ಯೆಹೋವನಲ್ಲಿ ಭಯಭಕ್ತಿಯಿಟ್ಟು ಆತನ ಸೇವಕನ ಮಾತನ್ನು ಕೇಳುವನು? ಕತ್ತಲಲ್ಲಿ ನಡೆಯುತ್ತಾ ಬೆಳಕಿಲ್ಲದವನು ಯೆಹೋವನ ನಾಮದಲ್ಲಿ ಭರವಸವಿಟ್ಟು ತನ್ನ ದೇವರನ್ನು ಆಧಾರಮಾಡಿಕೊಳ್ಳಲಿ.


ಹೀಗಿರಲು ಯೆಹೋವನು ನಿಮಗೆ ಕೃಪೆತೋರಿಸಬೇಕೆಂದು ಕಾದಿರುವನು; ನಿಮ್ಮನ್ನು ಕರುಣಿಸಬೇಕೆಂದು ಉನ್ನತೋನ್ನತನಾಗಿ ಕಾಣಿಸಿಕೊಳ್ಳುವನು; ಯೆಹೋವನು ನ್ಯಾಯಸ್ವರೂಪನಾದ ದೇವರು; ಆತನಿಗಾಗಿ ಕಾದಿರುವವರೆಲ್ಲರೂ ಧನ್ಯರು.


ಮುಗಿಲೂ ಕಾರ್ಗತ್ತಲೆಯೂ ಆತನ ಸುತ್ತಲೂ ಇರುತ್ತವೆ; ನೀತಿನ್ಯಾಯಗಳು ಆತನ ಸಿಂಹಾಸನದ ಅಸ್ತಿವಾರ.


ಜನರೇ, ಯಾವಾಗಲೂ ಆತನನ್ನೇ ನಂಬಿ ನಿಮ್ಮ ಹೃದಯವನ್ನು ಆತನ ಮುಂದೆ ಬಿಚ್ಚಿರಿ; ದೇವರು ನಮ್ಮ ಆಶ್ರಯವು. ಸೆಲಾ.


ನನ್ನ ಮನವೇ, ದೇವರನ್ನೇ ನಂಬಿ ಶಾಂತವಾಗಿರು. ನನ್ನ ನಿರೀಕ್ಷೆಯು ನೆರವೇರುವದು ಆತನಿಂದಲೇ.


ಆಹಾ, ಆತನ ದರ್ಶನವು ಎಲ್ಲಿ ಆದೀತು, ನನಗೆ ಗೊತ್ತಾಗಿದ್ದರೆ ಎಷ್ಟೋ ಸಂತೋಷ! ಆತನ ಸನ್ನಿಧಿಯನ್ನು ಸೇರೇನು.


ಇಗೋ, ಬಲಾತ್ಕಾರವೆಂದು ನಾನು ಕೂಗಿಕೊಂಡರೂ ಯಾವ ಉತ್ತರವೂ ಇಲ್ಲ. ನಾನು ಮೊರೆಯಿಟ್ಟರೂ ನ್ಯಾಯವು ನೆರವೇರದು.


ನಾನು ಬಲಿಷ್ಠನ ಶಕ್ತಿಯನ್ನು ಮರೆಹೊಗುವೆನೆಂದರೆ [ದೇವರು] - ಇಗೋ, [ಇದ್ದೇನೆ; ಅನ್ನುವನು] ನ್ಯಾಯವಿಚಾರಣೆಯು [ಆಗಲಿ ಎಂದರೆ ಆತನು] ನನಗೆ ಕಾಲನಿಯಾಮಕರು ಯಾರು [ಅನ್ನುವನು].


ಅಯ್ಯೋ, ನನ್ನ ಕಡೆಗೆ ಕಿವಿಗೊಡತಕ್ಕವನು ಇದ್ದರೆ ಎಷ್ಟೋ ಲೇಸು! ಇದೇ ನನ್ನ ಕೈಗುರುತು, ನೋಡಿರಿ, ಸರ್ವಶಕ್ತನು ನನಗೆ ಉತ್ತರಕೊಡಲಿ! ನನ್ನ ವಿರೋಧಿಯು ಬರೆದುಕೊಂಡ ಆಪಾದನಪತ್ರವು ನನಗೆ ಸಿಕ್ಕಿದರೆ ಎಷ್ಟೋ ಸಂತೋಷ!


ಆತನು [ದುಷ್ಟರ ಮೇಲೆ] ತನ್ನ ಕೋಪವನ್ನು ತೀರಿಸದೆ ಇರುವ ಕಾರಣ ಆಹಾ, ಆತನು ದ್ರೋಹವನ್ನು ವಿಶೇಷವಾಗಿ ಗಮನಿಸುವದಿಲ್ಲವೆಂದು


ಯೆಹೋವನ ಸನ್ನಿಧಿಯಲ್ಲಿ ಶಾಂತನಾಗಿ ಆತನಿಗೋಸ್ಕರ ಕಾದಿರು; ಕುಯುಕ್ತಿಗಳನ್ನು ನೆರವೇರಿಸಿಕೊಂಡು ಅಭಿವೃದ್ಧಿ ಹೊಂದುವವನನ್ನು ನೋಡಿ ಉರಿಗೊಳ್ಳಬೇಡ.


ಯಾಕೋಬನ ಮನೆತನದವರಿಗೆ ಮುಖವನ್ನು ಮರೆಮಾಡಿಕೊಂಡಿರುವ ಯೆಹೋವನಿಗಾಗಿ ನಾನು ಕಾದುಕೊಂಡು ಎದುರುನೋಡುತ್ತಿರುವೆನು.


ಕರ್ತನೇ, ನೀನು ನನ್ನ ವ್ಯಾಜ್ಯಗಳನ್ನು ನಡಿಸಿ ನನ್ನ ಪ್ರಾಣವನ್ನು ಉಳಿಸಿದ್ದೀ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು