Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 35:5 - ಕನ್ನಡ ಸತ್ಯವೇದವು J.V. (BSI)

5 ಕಣ್ಣೆತ್ತಿ ಗಗನಮಂಡಲವನ್ನು ನೋಡು, ಮೇಘಮಾರ್ಗವನ್ನು ದೃಷ್ಟಿಸು, ಅವು ನಿನಗಿಂತ ಎಷ್ಟೋ ಎತ್ತರವಾಗಿವೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಕಣ್ಣೆತ್ತಿ ಗಗನಮಂಡಲವನ್ನು ನೋಡು, ಮೇಘಮಾರ್ಗವನ್ನು ದೃಷ್ಟಿಸು, ಅವು ನಿನಗಿಂತ ಎಷ್ಟೋ ಎತ್ತರವಾಗಿವೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಗಗನ ಮಂಡಲವನು ಕಣ್ಣೆತ್ತಿ ನೋಡು ನಿನಗೂ ಎಷ್ಟೋ ಎತ್ತರವಾದ ಮೇಘ ಮಾರ್ಗವನು ದಿಟ್ಟಿಸಿ ನೋಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಕಣ್ಣೆತ್ತಿ ಆಕಾಶವನ್ನು ನೋಡು. ಮೋಡಗಳನ್ನು ದೃಷ್ಟಿಸು, ಅವು ನಿನಗಿಂತ ಎಷ್ಟೋ ಎತ್ತರವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆಕಾಶಗಳನ್ನು ದೃಷ್ಟಿಸಿ ನೋಡು; ನಿನಗಿಂತಲೂ ಎತ್ತರವಾಗಿರುವ ಮೇಘಗಳನ್ನು ದೃಷ್ಟಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 35:5
16 ತಿಳಿವುಗಳ ಹೋಲಿಕೆ  

ದೇವರು ಉನ್ನತಾಕಾಶದಲ್ಲಿಲ್ಲವೋ? ನಕ್ಷತ್ರಮಂಡಲದ ತುದಿಯು ಎಷ್ಟೋ ಎತ್ತರ, ನೋಡು!


ಯೆಹೋವನು ದೀರ್ಘಶಾಂತನಾಗಿದ್ದರೂ ಆತನ ಶಕ್ತಿಯು ಅಪಾರ, ಅಪರಾಧಿಗಳನ್ನು ಶಿಕ್ಷಿಸದೆ ಬಿಡನು; ಯೆಹೋವನು ಬಿರುಗಾಳಿಯಲ್ಲಿಯೂ ತುಫಾನಿನಲ್ಲಿಯೂ ನಡೆಯುತ್ತಾನೆ; ಮೋಡಗಳು ಆತನ ಹೆಜ್ಜೆಯಿಂದೇಳುವ ದೂಳು.


ಭೂವಿುಯ ಮೇಲೆ ಆಕಾಶವು ಎಷ್ಟು ಉನ್ನತವೋ ನಿಮ್ಮ ಮಾರ್ಗಗಳಿಗಿಂತ ನನ್ನ ಮಾರ್ಗಗಳೂ ನಿಮ್ಮ ಆಲೋಚನೆಗಳಿಗಿಂತ ನನ್ನ ಆಲೋಚನೆಗಳೂ ಅಷ್ಟು ಉನ್ನತವಾಗಿವೆ.


ಮೋಡಗಳ ತೂಗಾಟವನ್ನೂ ಜ್ಞಾನಪೂರ್ಣನ ಅದ್ಭುತಕಾರ್ಯಗಳನ್ನೂ ತಿಳಿದುಕೊಂಡಿದ್ದೀಯಾ?


ಆಹಾ, ದೇವರು ಮಹೋನ್ನತನಾಗಿದ್ದಾನೆ, ನಾವು ಆತನನ್ನು ಅರಿಯಲಾರೆವು; ಆತನ ವರುಷಗಳು ಅಸಂಖ್ಯಾತವಾಗಿವೆ.


ದೇವರು ನಿಜವಾಗಿ ಭೂಲೋಕದಲ್ಲಿ ವಾಸಿಸುವನೋ? ಆಕಾಶವೂ ಉನ್ನತೋನ್ನತವಾದ ಆಕಾಶವೂ ನಿನ್ನ ವಾಸಕ್ಕೆ ಸಾಲವು; ಹೀಗಿರುವಲ್ಲಿ ನಾನು ಕಟ್ಟಿಸಿದ ಈ ಮಂದಿರವು ಹೇಗೆ ಸಾಕಾದೀತು!


ಅವನನ್ನು ಹೊರಗೆ ಕರತಂದು - ಆಕಾಶದ ಕಡೆಗೆ ನೋಡು, ನಕ್ಷತ್ರಗಳನ್ನು ಲೆಕ್ಕಿಸುವದು ನಿನ್ನಿಂದಾದರೆ ಲೆಕ್ಕಿಸು; ನಿನ್ನ ಸಂತಾನವು ಅಷ್ಟಾಗುವದು ಅಂದನು.


ಆಹಾ, [ಆತನ ಜ್ಞಾನವು] ಆಕಾಶದ ಹಾಗೆ ಉನ್ನತವಾಗಿದೆ; ನೀನು ಮಾಡುವದೇನು? ಪಾತಾಳಕ್ಕಿಂತ ಆಳವಾಗಿದೆ; ನೀನು ತಿಳಿದುಕೊಳ್ಳುವದೇನು?


ನಾನು ನಿನಗೂ ನಿನ್ನ ಜೊತೆಗಾರರಿಗೂ ಕೂಡ ಉತ್ತರಕೊಡುವೆನು.


ಆದರೆ ಯೆಹೋವನು ಸಮುವೇಲನಿಗೆ - ನೀನು ಅವನ ಚೆಲುವಿಕೆಯನ್ನೂ ನೀಳವನ್ನೂ ನೋಡಬೇಡ; ನಾನು ಅವನನ್ನು ತಳ್ಳಿಬಿಟ್ಟಿದ್ದೇನೆ. ಯೆಹೋವನು ಮನುಷ್ಯರಂತೆ ಹೊರಗಿನ ತೋರಿಕೆಯನ್ನು ನೋಡದೆ ಹೃದಯವನ್ನೇ ನೋಡುವವನಾಗಿದ್ದಾನೆ ಅಂದನು.


ದೇವರ ಅಗಾಧಗಳನ್ನು ಕಂಡುಕೊಳ್ಳಬಲ್ಲಿಯಾ? ಸರ್ವಶಕ್ತನನ್ನು ಸಂಪೂರ್ಣವಾಗಿ ಗ್ರಹಿಸಿಕೊಳ್ಳಬಹುದೋ?


ಯೆಹೋವನು ಹೀಗನ್ನುತ್ತಾನೆ - ನನ್ನ ಆಲೋಚನೆಗಳು ನಿಮ್ಮ ಆಲೋಚನೆಗಳಲ್ಲ, ನಿಮ್ಮ ಮಾರ್ಗಗಳು ನನ್ನ ಮಾರ್ಗಗಳಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು