Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 35:9 - ಕನ್ನಡ ಸತ್ಯವೇದವು J.V. (BSI)

9 ಅಪಾರವಾದ ಹಿಂಸೆಗಳಿಗೆ ಒಳಪಟ್ಟವರು ಮೊರೆಯಿಡುತ್ತಾ ಬಲಿಷ್ಠರ ಭುಜಬಲದಿಂದ ಪೀಡಿತರಾಗಿ ಕೂಗಿಕೊಳ್ಳುವರೇ ಹೊರತು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅಪಾರವಾದ ಹಿಂಸೆಗಳಿಗೆ ಒಳಪಟ್ಟವರು ಮೊರೆಯಿಡುತ್ತಾ, ಬಲಿಷ್ಠರ ಭುಜಬಲದಿಂದ ಪೀಡಿತರಾಗಿ ಕೂಗಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಅಪಾರ ಹಿಂಸೆಗಳಿಗೆ ಒಳಪಟ್ಟವರು ಮೊರೆಯಿಡುತ್ತಾರೆ. ಬಲಿಷ್ಠರ ಭುಜಬಲದಿಂದ ಪೀಡಿತರು ಕಿರಿಚಿಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 “ಹಿಂಸೆಗೂ ಅನ್ಯಾಯಕ್ಕೂ ಒಳಗಾಗಿರುವವರು ತಮ್ಮನ್ನು ಬಲಿಷ್ಠರಿಂದ ಬಿಡಿಸಬಲ್ಲ ಯಾರಿಗಾದರೂ ಮೊರೆಯಿಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 “ಅಪಾರ ಹಿಂಸೆಗಳಿಗೆ ಒಳಪಟ್ಟವರು ಮೊರೆಯಿಡುತ್ತಾರೆ; ಬಲಿಷ್ಠರ ಭುಜಬಲದಿಂದ ಪೀಡಿತರು ಕಿರಿಚಿಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 35:9
20 ತಿಳಿವುಗಳ ಹೋಲಿಕೆ  

ಈ ಮೇರೆಗೆ ಬಹಳ ದಿನಗಳು ಕಳೆದ ಮೇಲೆ ಐಗುಪ್ತ ದೇಶದ ಅರಸನು ಸತ್ತನು. ಇಸ್ರಾಯೇಲ್ಯರು ತಾವು ಮಾಡಬೇಕಾದ ಬಿಟ್ಟೀ ಕೆಲಸಕ್ಕಾಗಿ ನಿಟ್ಟುಸುರು ಬಿಟ್ಟು ಗೋಳಾಡುತ್ತಾ ಇದ್ದರು. ಆ ಗೋಳು ದೇವರಿಗೆ ಮುಟ್ಟಿತು.


ಹೀಗೆ ಬಡವರ ಗೋಳಾಟವು ದೇವರಿಗೆ ಮುಟ್ಟುವಂತೆ ಮಾಡಿದ್ದರು, ಆತನು ದಿಕ್ಕಿಲ್ಲದವರ ಮೊರೆಯನ್ನು ಆಲೈಸಿದ್ದನು.


ದೇವರೇ, ನೀನು ನನಗೆ ದುರ್ಗಸ್ಥಾನವಲ್ಲವೇ; ಯಾಕೆ ನನ್ನನ್ನು ತಳ್ಳಿಬಿಟ್ಟಿ? ನಾನು ಯಾಕೆ ಶತ್ರುಬಾಧೆಯಿಂದ ದುಃಖಿಸುತ್ತಾ ವಿಕಾರಿಯಾಗಿ ಅಲೆಯಬೇಕು?


ಯೆಹೋವನು - ಕುಗ್ಗಿದವರ ಬಾಧೆಯನ್ನು ನೋಡಿದ್ದೇನೆ; ಗತಿಯಿಲ್ಲದವರ ನರಳುವಿಕೆಯು ನನಗೆ ಕೇಳಿಸಿತು. ಈಗ ಎದ್ದು ಬಂದು ಅವರ ಇಷ್ಟಾರ್ಥವನ್ನು ನೆರವೇರಿಸಿ ಅವರನ್ನು ಸುರಕ್ಷಿತವಾಗಿ ಇರಿಸುವೆನು ಎಂದು ಹೇಳುತ್ತಾನೆ.


ದುಷ್ಟನ ಭುಜಬಲವನ್ನು ಮುರಿದುಹಾಕು; ಕೆಡುಕನ ದುಷ್ಟತ್ವವನ್ನು ಶೋಧಿಸಿ ನಿರ್ಮೂಲ ಮಾಡಿಬಿಡು.


ನಿನ್ನ ಕೈಯೂ ದೇವರ ಕೈಯೂ ಸಮವೋ? ದೇವರ ಧ್ವನಿಯಂತೆ ಗುಡುಗಬಲ್ಲಿಯಾ?


ತುಂಬಿದ ಪಟ್ಟಣದಲ್ಲಿ ನರಳುವರು, ಗಾಯಪಟ್ಟವರು ಮೊರೆಯಿಡುವರು. ದೇವರಾದರೋ ಅದನ್ನು ಅಯುಕ್ತವೆಂದೆಣಿಸುವದಿಲ್ಲ.


ಯಾಜಕರನ್ನು ಸುಲಿಗೆಮಾಡಿ ಸಾಗಿಸಿಕೊಂಡು ಹೋಗುವನು, ಪ್ರಧಾನರನ್ನು ದೊಬ್ಬಿಬಿಡುವನು.


ಈಗ ಕೇಳು, ಇಸ್ರಾಯೇಲ್ಯರ ಕೂಗು ನನಗೆ ಮುಟ್ಟಿತು; ಐಗುಪ್ತ್ಯರು ಅವರಿಗೆ ಕೊಡುವ ಉಪದ್ರವವನ್ನು ನಾನು ನೋಡಿದ್ದೇನೆ.


ಆಗ ಯೆಹೋವನು - ಐಗುಪ್ತ ದೇಶದಲ್ಲಿರುವ ನನ್ನ ಜನರ ದುರವಸ್ಥೆಯನ್ನು ನೋಡೇ ನೋಡಿದ್ದೇನೆ. ಬಿಟ್ಟೀಮಾಡಿಸುವವರ ವಿಷಯದಲ್ಲಿ ಅವರು ಇಟ್ಟ ಮೊರೆಯು ನನಗೆ ಕೇಳಿಸಿತು; ಅವರ ದುಃಖವನ್ನೆಲ್ಲಾ ನಾನು ಬಲ್ಲೆನು.


ನೀವು ಇಂಥವರನ್ನು ಬಾಧಿಸಿದರೆ ಅವರು ನನಗೆ ಮೊರೆಯಿಡುವರು; ಆ ಮೊರೆಗೆ ನಾನು ಕಿವಿಗೊಡುವೆನೆಂದು ತಿಳಿದುಕೊಳ್ಳಿರಿ.


ದಿನದ ಕೂಲಿಯನ್ನು ಆ ದಿನದಲ್ಲೇ ಹೊತ್ತು ಮುಣುಗುವದಕ್ಕೆ ಮುಂಚಿತವಾಗಿ ಅವನಿಗೆ ಕೊಡಬೇಕು. ಅವನಿಗೆ ಬೇರೆ ಗತಿಯಿಲ್ಲದ್ದರಿಂದ ಅದನ್ನೇ ಎದುರು ನೋಡುತ್ತಾನಲ್ಲಾ. ನೀವು ಕೊಡದಿದ್ದರೆ ಅವನು ಯೆಹೋವನಿಗೆ ಮೊರೆಯಿಟ್ಟಾನು; ಆಗ ನೀವು ದೋಷಿಗಳಾಗಿ ಕಂಡುಬಂದೀರಿ.


ಅವನು ಬಡವರನ್ನು ಜಜ್ಜಿ ತ್ಯಜಿಸಿಬಿಟ್ಟಿದ್ದಾನಲ್ಲಾ; ಸುಲಿಗೆಯಿಂದ ಕಿತ್ತುಕೊಂಡ ಮನೆಯನ್ನು ಭದ್ರಪಡಿಸಿಕೊಳ್ಳದೆ ಹೋಗುವನು.


ನಿನ್ನ ಕೆಟ್ಟತನದಿಂದ ನಿನ್ನಂಥವನಿಗೇ [ನಷ್ಟವಾದೀತು], ನಿನ್ನ ನೀತಿಯಿಂದ ನರಜನ್ಮದವನಿಗೇ [ಲಾಭ ಸಿಕ್ಕೀತು].


ಆಮೇಲೆ ತಿರಿಗಿ ದೃಷ್ಟಿಸಿ ಲೋಕದಲ್ಲಿನ ಹಿಂಸೆಗಳನ್ನೆಲ್ಲಾ ನೋಡಿದೆನು; ಆಹಾ, ಹಿಂಸೆಗೊಂಡವರ ಕಣ್ಣೀರು ಏನೆಂದು ಹೇಳಲಿ! ಸಂತಯಿಸುವವರು ಯಾರೂ ಇರಲಿಲ್ಲ; ಹಿಂಸಕರಿಗೆ ಬಹು ಬಲ; ಸಂತಯಿಸುವವರೋ ಒಬ್ಬರೂ ಇರಲಿಲ್ಲ.


ಅವರು ಹಾಸಿಗೆಯ ಮೇಲೆ ಬಿದ್ದುಕೊಂಡು ಧಾನ್ಯದ್ರಾಕ್ಷಾರಸಗಳಿಗೆ ಅರಚಿಕೊಳ್ಳುತ್ತಾರೆಯೇ ಹೊರತು ನನ್ನನ್ನು ಮನಃಪೂರ್ವಕವಾಗಿ ಎಂದೂ ಪ್ರಾರ್ಥಿಸಲಿಲ್ಲ; ನನ್ನನ್ನು ತೊರೆದುಬಿಟ್ಟು ತಮ್ಮ ದೇಹಗಳನ್ನು ಗಾಯಮಾಡಿಕೊಳ್ಳುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು