Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 36:15 - ಕನ್ನಡ ಸತ್ಯವೇದವು J.V. (BSI)

15 ಬಾಧೆಪಡುವವರನ್ನು ಅವರ ಬಾಧೆಗಳ ಮೂಲಕವೇ ರಕ್ಷಿಸುವನು, ಅವರು ಅನುಭವಿಸುವ ಹಿಂಸೆಯಿಂದಲೇ ಅವರ ಕಿವಿಯನ್ನು ತೆರೆಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಬಾಧೆಪಡುವವರನ್ನು ಅವರ ಬಾಧೆಗಳ ಮೂಲಕವೇ ರಕ್ಷಿಸುವನು, ಅವರು ಅನುಭವಿಸುವ ಹಿಂಸೆಯಿಂದಲೇ ಅವರ ಕಿವಿಯನ್ನು ತೆರೆಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಬಾಧೆಪಡುವವರನ್ನು ಅವರ ಬಾಧೆಗಳ ಮೂಲಕವೇ ರಕ್ಷಿಸುವನು ಕಷ್ಟಾನುಭವಗಳ ಮೂಲಕವೆ ದೇವರು ಅವರ ಕಿವಿಯನ್ನು ತೆರೆಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಆದರೆ ದೇವರು ದೀನರನ್ನು ವಿಪತ್ತುಗಳಿಂದ ಬಿಡಿಸುವನು. ಆ ವಿಪತ್ತುಗಳಿಂದ ದೇವರು ಜನರನ್ನು ಎಚ್ಚರಗೊಳಿಸಿ ತನಗೆ ಕಿವಿಗೊಡುವಂತೆ ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಶ್ರಮೆ ಪಡುವವರನ್ನು ದೇವರು ಅವರ ಶ್ರಮೆಯ ಮೂಲಕವೇ ಬಿಡುಗಡೆ ಮಾಡುವರು; ದೇವರು ಅವರ ಹಿಂಸೆಯ ಮೂಲಕವೇ ಅವರೊಂದಿಗೆ ಮಾತನಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 36:15
10 ತಿಳಿವುಗಳ ಹೋಲಿಕೆ  

ಇದಲ್ಲದೆ ಶಿಕ್ಷಣವನ್ನು ಕೇಳುವಂತೆ ಅವರ ಕಿವಿಯನ್ನು ತೆರೆದು ಅಧರ್ಮವನ್ನು ಬಿಟ್ಟುಬಿಡಬೇಕೆಂದು ಅವರಿಗೆ ಆಜ್ಞಾಪಿಸುವನು.


ಆದರೂ ನನ್ನ ಸೇವೆಗೂ ಅನ್ಯರಾಜ್ಯಗಳ ಸೇವೆಗೂ ಇರುವ ವ್ಯತ್ಯಾಸವು ಇವರಿಗೆ ಗೊತ್ತಾಗುವಂತೆ ಇವರು ಶೀಶಕನಿಗೆ ದಾಸರಾಗಬೇಕು ಎಂದು ಹೇಳಿದನು.


ಇಂಥವರ ಬಾಯೆಂಬ ಕತ್ತಿಯಿಂದಲೂ ಬಲಿಷ್ಠರ ಕೈಯಿಂದಲೂ ದಿಕ್ಕಿಲ್ಲದವರನ್ನು ರಕ್ಷಿಸುತ್ತಾನೆ.


ಇಗೋ, ದೇವರು ಯಾವನನ್ನು ಶಿಕ್ಷಿಸುವನೋ ಅವನು ಧನ್ಯನು; ಸರ್ವಶಕ್ತನ ದಂಡನೆಯನ್ನು ತಾತ್ಸಾರಮಾಡಬೇಡ.


ದೇವರ ಆದರಣೆಗಳೂ ನಿನಗೆ ದೊರೆತ ಶಾಂತಿಯ ಮಾತುಗಳೂ ಸಾಲವೋ?


ಅವರ ಕಿವಿಗಳನ್ನು ತೆರೆದು ಅವರಿಗೆ ಶಿಕ್ಷಾವಚನವನ್ನು ಉಪದೇಶಿಸಿ ಅದಕ್ಕೆ ಮುದ್ರೆಹಾಕುವನು.


ಅವರು ಒಂದು ವೇಳೆ ಬಂಧಕ್ಕೆ ಸಿಕ್ಕಿ ಬಾಧೆಗಳೆಂಬ ಹಗ್ಗಗಳಿಂದ ಕಟ್ಟಲ್ಪಟ್ಟಿದ್ದರೆ,


ಎಚ್ಚರಿಕೆಯಾಗಿರು, ಅಧರ್ಮದ ಕಡೆಗೆ ಕಾಲಿಕ್ಕಬೇಡ. ಕಷ್ಟವನ್ನು ಅನುಭವಿಸಲೊಲ್ಲದೆ ಅಧರ್ಮವನ್ನೇ ಆರಿಸಿಕೊಂಡಿದ್ದೀ.


ಯಾಕಂದರೆ ಅವನು ಮೊರೆಯಿಡುವ ಬಡವರನ್ನೂ ದಿಕ್ಕಿಲ್ಲದೆ ಕುಗ್ಗಿದವರನ್ನೂ ಉದ್ಧರಿಸುವನು.


ಕಷ್ಟದಲ್ಲಿದ್ದ ದೀನರನ್ನು ಉನ್ನತಸ್ಥಿತಿಗೇರಿಸಿ ಕುರಿಹಿಂಡಿನಂತೆ ಹೆಚ್ಚಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು