Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 36:27 - ಕನ್ನಡ ಸತ್ಯವೇದವು J.V. (BSI)

27 ನೀರಿನ ಹನಿಗಳನ್ನು ಎಳೆದುಕೊಳ್ಳುವನು, ಅವು ತಿಳಿಮಳೆಯಾಗಿ ಆತನ ಮಂಜಿನಿಂದ ಉದುರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ನೀರಿನ ಹನಿಗಳನ್ನು ಎಳೆದುಕೊಳ್ಳುವನು, ಅವು ತಿಳಿಮಳೆಯಾಗಿ ಆತನ ಮಂಜಿನಿಂದ ಉದುರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ನೀರಿನ ಹನಿಗಳನು ಹೀರಿಕೊಳ್ಳುತ್ತಾನೆ ಮಂಜಿನಿಂದ ತಿಳಿಮಳೆಯನು ಸುರಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 “ದೇವರು ಭೂಮಿಯ ನೀರನ್ನು ಹಬೆಯ ರೂಪದಲ್ಲಿ ಮೇಲಕ್ಕೆ ಕೊಂಡೊಯ್ದು ಅದನ್ನು ಮಂಜನ್ನಾಗಿಯೂ ಮಳೆಯನ್ನಾಗಿಯೂ ಪರಿವರ್ತಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 “ದೇವರು ನೀರಿನ ಹನಿಗಳನ್ನು ಕೂಡಿಸಿದಾಗ, ಮಂಜಿನಿಂದ ತಿಳಿಮಳೆ ಸುರಿಯುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 36:27
19 ತಿಳಿವುಗಳ ಹೋಲಿಕೆ  

ಆತನು ಆಕಾಶದಲ್ಲಿ ಮೋಡಗಳನ್ನು ಕವಿಸುತ್ತಾನೆ; ಭೂವಿುಗೋಸ್ಕರ ಮಳೆಯನ್ನು ಸಿದ್ಧಮಾಡುತ್ತಾನೆ; ಬೆಟ್ಟಗಳಲ್ಲಿ ಹುಲ್ಲನ್ನು ಬೆಳಸುತ್ತಾನೆ.


ಜನಾಂಗಗಳ ವ್ಯರ್ಥವಿಗ್ರಹಗಳೊಳಗೆ ಮಳೆಯನ್ನು ಸುರಿಸಬಲ್ಲವುಗಳುಂಟೇ? ಆಕಾಶವು ತಾನಾಗಿ ಹದಮಳೆಗಳನ್ನು ಕೊಟ್ಟೀತೇ? ನಮ್ಮ ದೇವರಾದ ಯೆಹೋವಾ, ನೀನೇ ವೃಷ್ಟಿಪ್ರದನು; ನಾವು ನಿನ್ನನ್ನೇ ನಿರೀಕ್ಷಿಸುವೆವು; ನೀನು ಇವುಗಳನ್ನೆಲ್ಲಾ ನಡಿಸುವವನಾಗಿದ್ದೀಯಷ್ಟೆ.


ಅದನ್ನು ಹಾಳುಮಾಡುವೆನು, ಯಾರೂ ಕುಡಿಕತ್ತರಿಸಿ ಅಗತೆಮಾಡುವದಿಲ್ಲ; ಅದರಲ್ಲಿ ಮುಳ್ಳುಗಿಳ್ಳು ಬೆಳೆದುಹೋಗುವದು; ಮತ್ತು ಅದರ ಮೇಲೆ ಮಳೆಸುರಿಸಬಾರದೆಂದು ಮೇಘಗಳಿಗೆ ಅಪ್ಪಣೆಮಾಡುವೆನು.


ಬೆಂಕಿ, ಕಲ್ಮಳೆ, ಹಿಮ, ಹಬೆ ಇವುಗಳೂ ಆತನ ಅಪ್ಪಣೆಯನ್ನು ನೆರವೇರಿಸುವ ಬಿರುಗಾಳಿಯೂ


ಮೋಡಗಳನ್ನು ಮುಟ್ಟುವಂತೆ ನೀನು ಧ್ವನಿಯೆತ್ತಿದ ಮಾತ್ರಕ್ಕೆ ಹೇರಳವಾದ ನೀರು ನಿನ್ನನ್ನು ಆವರಿಸುವದೋ?


ಅದರ ಆರ್ಭಟವು ಆತನ ವಿಷಯವಾಗಿ ಪ್ರಕಟಿಸುವದು, ದನಗಳು ಸಹ ಆತನ ಆಗಮನವನ್ನು ತಿಳಿಸುವವು.


ಆತನು ಅಪ್ರಮೇಯ ಮಹಾಕಾರ್ಯಗಳನ್ನೂ ಅಸಂಖ್ಯವಾದ ಅದ್ಭುತಕೃತ್ಯಗಳನ್ನೂ ಮಾಡುತ್ತಾನೆ;


ಭೂವಿುಯ ಮೇಲೆ ಮಳೆಸುರಿಸಿ ಹೊಲಗದ್ದೆಗಳಿಗೆ ನೀರನ್ನು ಒದಗಿಸುತ್ತಾನೆ.


ಆಹಾ, ದೇವರು ಮಹೋನ್ನತನಾಗಿದ್ದಾನೆ, ನಾವು ಆತನನ್ನು ಅರಿಯಲಾರೆವು; ಆತನ ವರುಷಗಳು ಅಸಂಖ್ಯಾತವಾಗಿವೆ.


ಮೋಡಗಳು ಅದನ್ನು ಸುರಿಸಿ ಬಹುಜನರ ಮೇಲೆ ಚಿಮಕಿಸುವವು.


ಆತನು ಹಿಮಕ್ಕೂ ಹದಮಳೆಗೂ ತನ್ನ ಶಕ್ತಿಯ ದೊಡ್ಡ ಮಳೆಗೂ ಭೂವಿುಯ ಮೇಲೆ ಬೀಳು ಎಂದು ಅಪ್ಪಣೆಮಾಡುವನು.


ಇದಲ್ಲದೆ ಮೋಡಗಳ ಮೇಲೆ ಮಂಜಿನ ಭಾರವನ್ನು ಹೇರಿ ತನ್ನ ವಿುಂಚಿನ ಮೇಘಮಂಡಲವನ್ನು ಹರಡುವನು.


ಆತನ ಗರ್ಜನೆಗೆ ಆಕಾಶದಲ್ಲಿ ನೀರು ಮೊರೋ ಎನ್ನುತ್ತದೆ; ಆತನು ಭೂವಿುಯ ಕಟ್ಟಕಡೆಯಿಂದ ಮೋಡಗಳನ್ನು ಏರಮಾಡುತ್ತಾನೆ; ಮಳೆಗೋಸ್ಕರ ವಿುಂಚನ್ನು ಹೊಳೆಯಮಾಡುತ್ತಾನೆ; ತನ್ನ ಭಂಡಾರದಿಂದ ಗಾಳಿಯನ್ನು ಬೀಸಮಾಡುತ್ತಾನೆ.


ಮಳೆಗೆ ಕಟ್ಟಳೆಯನ್ನೂ ಗರ್ಜಿಸುವ ಸಿಡಿಲಿಗೆ ದಾರಿಯನ್ನೂ ಏರ್ಪಡಿಸಿದಾಗಲೇ


ಭೂವಿುಯ ಕೆಳಗಣ ಸಾಗರವು ಒಡೆದದ್ದಕ್ಕೂ ಆಕಾಶವು ಇಬ್ಬನಿಯನ್ನು ಸುರಿಸುವದಕ್ಕೂ ಆತನ ತಿಳುವಳಿಕೆಯೇ ಸಾಧನವು.


ಮಳೆಯಾಗುವಂತೆ ಹಿಂಗಾರಿನಲ್ಲಿ ಯೆಹೋವನನ್ನು ಬೇಡಿಕೊಳ್ಳಿರಿ; ಯೆಹೋವನೇ ವಿುಂಚುಗಳನ್ನು ಉಂಟುಮಾಡುತ್ತಾನೆ, ಮನುಷ್ಯರಿಗೆ ಸಮೃದ್ಧಿಯಾದ ಮಳೆಯನ್ನು ದಯಪಾಲಿಸುತ್ತಾನೆ, ಎಲ್ಲರಿಗೂ ಹೊಲದ ಪೈರನ್ನು ಅನುಗ್ರಹಿಸುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು