Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 36:3 - ಕನ್ನಡ ಸತ್ಯವೇದವು J.V. (BSI)

3 ದೂರದಿಂದ ಸಂಪಾದಿಸಿದ ನನ್ನ ತಿಳುವಳಿಕೆಯ ಪ್ರಕಾರ ನನ್ನ ಸೃಷ್ಟಿಕರ್ತನನ್ನು ಧರ್ಮಸ್ವರೂಪನೆಂದು ಹೊಗಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ದೂರದಿಂದ ಸಂಪಾದಿಸಿದ ನನ್ನ ತಿಳಿವಳಿಕೆಯ ಪ್ರಕಾರ, ನನ್ನ ಸೃಷ್ಟಿಕರ್ತನನ್ನು ಧರ್ಮಸ್ವರೂಪನೆಂದು ಹೊಗಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ನನ್ನ ಸೃಷ್ಟಿಕರ್ತನು ಸತ್ಯಸ್ವರೂಪನೆಂದು ತೋರಲು ನನ್ನ ವಾದಗಳನ್ನು ಸವಿಸ್ತಾರಗೊಳಿಸುವೆನು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನಾನು ಜ್ಞಾನವನ್ನು ಬಹುದೂರದಿಂದ ಪಡೆದುಕೊಂಡಿದ್ದೇನೆ. ನನ್ನ ಸೃಷ್ಟಿಕರ್ತನಾದ ದೇವರು ನ್ಯಾಯವಂತನೆಂದು ನಿರೂಪಿಸುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನಾನು ನನ್ನ ತಿಳುವಳಿಕೆಯನ್ನು ದೂರದಿಂದ ಪಡೆದುಕೊಳ್ಳುತ್ತೇನೆ. ನನ್ನ ಸೃಷ್ಟಿಕರ್ತ ನ್ಯಾಯವಂತರು ಎಂದು ನಿರೂಪಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 36:3
27 ತಿಳಿವುಗಳ ಹೋಲಿಕೆ  

ಆದರೆ ಮೇಲಣಿಂದ ಬರುವ ಜ್ಞಾನವು ಮೊದಲು ಪರಿಶುದ್ಧವಾದದ್ದು, ಆಮೇಲೆ ಸಮಾಧಾನಕರವಾದದ್ದು, ವಿನಯವುಳ್ಳದ್ದು, ಸಂತೋಷವಾಗಿ ಒಪ್ಪಿಕೊಳ್ಳುವಂಥದು, ಕರುಣೆ ಮುಂತಾದ ಒಳ್ಳೇ ಫಲಗಳಿಂದ ತುಂಬಿರುವಂಥದು ಆಗಿದೆ; ಅದರಲ್ಲಿ ಚಂಚಲವೂ ಕಪಟವೂ ಇಲ್ಲ.


ಎಲ್ಲಾ ಒಳ್ಳೇ ದಾನಗಳೂ ಕುಂದಿಲ್ಲದ ಎಲ್ಲಾ ವರಗಳೂ ಮೇಲಣಿಂದ ಸಕಲವಿಧವಾದ ಬೆಳಕಿಗೂ ಮೂಲಕಾರಣನಾದವನಿಂದ ಇಳಿದುಬರುತ್ತವೆ. ಆತನಲ್ಲಿ ಚಂಚಲತ್ವವೇನೂ ಇಲ್ಲ, ವ್ಯತ್ಯಾಸದ ಸೂಚನೆಯೂ ಇಲ್ಲ.


ದೇವರ ದಾಸನಾದ ಮೋಶೆಯ ಹಾಡನ್ನೂ ಯಜ್ಞದ ಕುರಿಯಾದಾತನ ಹಾಡನ್ನೂ ಹಾಡುತ್ತಾ - ದೇವರಾದ ಕರ್ತನೇ, ಸರ್ವಶಕ್ತನೇ, ನಿನ್ನ ಕೃತ್ಯಗಳು ಮಹತ್ತಾದವುಗಳೂ ಆಶ್ಚರ್ಯಕರವಾದವುಗಳೂ ಆಗಿವೆ; ಸರ್ವಜನಾಂಗಗಳ ಅರಸನೇ, ನಿನ್ನ ಮಾರ್ಗಗಳು ನ್ಯಾಯವೂ ಸತ್ಯವೂ ಆಗಿವೆ;


ಆದಕಾರಣ ಯೆಹೋವನು ಆ ಕೇಡನ್ನು ನೋಡಿಕೊಂಡಿದ್ದು ನಮ್ಮ ಮೇಲೆ ಬರಮಾಡಿದ್ದಾನೆ; ನಮ್ಮ ದೇವರಾದ ಯೆಹೋವನು ತಾನು ಮಾಡುವ ಸಕಲ ಕಾರ್ಯಗಳಲ್ಲಿ ಧರ್ಮಸ್ವರೂಪನೇ; ನಾವೋ ಆತನ ಮಾತನ್ನು ಕೇಳಲಿಲ್ಲ.


ಕರ್ತನೇ, ನೀನು ಧರ್ಮಸ್ವರೂಪ, ನಾವೋ ನಾಚಿಕೆಗೀಡಾದವರು; ಹೌದು, ಈಗಲೇ ಯೆಹೂದ್ಯರೂ ಯೆರೂಸಲೇವಿುನ ನಿವಾಸಿಗಳೂ ನಿನಗೆ ವಿರುದ್ಧವಾಗಿ ಮಾಡಿದ ದ್ರೋಹದ ನಿವಿುತ್ತ ನಿನ್ನಿಂದ ದೇಶದೇಶಗಳಿಗೆ ತಳ್ಳಲ್ಪಟ್ಟು ದೂರದಲ್ಲಿಯೂ ಸಮೀಪದಲ್ಲಿಯೂ ಚದರಿರುವ ಎಲ್ಲಾ ಇಸ್ರಾಯೇಲ್ಯರೂ ನಾಚಿಕೆಗೆ ಈಡಾಗಿದ್ದಾರೆ.


ಯೆಹೋವನ ಮಾರ್ಗಗಳೆಲ್ಲಾ ನೀತಿಯುಳ್ಳವುಗಳು; ಆತನು ಎಲ್ಲಾ ಕಾರ್ಯಗಳಲ್ಲಿ ಕೃಪೆತೋರಿಸುವವನು.


ಯಾಕಂದರೆ ನೀತಿಸ್ವರೂಪನಾದ ಯೆಹೋವನು ನೀತಿಯನ್ನು ಮೆಚ್ಚುವವನಾಗಿದ್ದಾನೆ. ಸಜ್ಜನರು ಆತನ ಸಾನ್ನಿಧ್ಯದಲ್ಲಿ ಇರುವರು.


ಆದರೆ ಮನುಷ್ಯರಲ್ಲಿ ಆತ್ಮವೊಂದುಂಟು, ಸರ್ವಶಕ್ತನ ಶ್ವಾಸದಿಂದ ಅವರಿಗೆ ವಿವೇಕ ದೊರೆಯುತ್ತದೆ.


ದೇವರು ಅನ್ಯಾಯವಾದ ತೀರ್ಪನ್ನು ಕೊಡುವನೋ? ಸರ್ವಶಕ್ತನು ನೀತಿಯನ್ನು ಡೊಂಕುಮಾಡುವನೋ?


ನಮಗೆ ಶರಣನಾದ ದೇವರು ಮಾಡುವ ಕಾರ್ಯದಲ್ಲಿ ಯಾವ ಕುಂದೂ ಇಲ್ಲ; ಆತನು ನಡಿಸುವದೆಲ್ಲಾ ನ್ಯಾಯ; ಆತನು ನಿರ್ವಂಚಕನಾದ ನಂಬಿಗಸ್ತ ದೇವರು, ನೀತಿಯುಳ್ಳವನೂ ಯಥಾರ್ಥನೂ ಆಗಿದ್ದಾನೆ.


ನಿಮ್ಮಲ್ಲಿ ಯಾವನಿಗಾದರೂ ಜ್ಞಾನ ಕಡಿಮೆಯಾಗಿದ್ದರೆ ಅವನು ದೇವರನ್ನು ಕೇಳಿಕೊಳ್ಳಲಿ, ಅದು ಅವನಿಗೆ ದೊರಕುವದು; ದೇವರು ಹಂಗಿಸದೆ ಎಲ್ಲರಿಗೂ ಉದಾರ ಮನಸ್ಸಿನಿಂದ ಕೊಡುವವನಾಗಿದ್ದಾನೆ.


ಹಾಗಾದರೆ ಏನು ಹೇಳೋಣ? ದೇವರಲ್ಲಿ ಅನ್ಯಾಯ ಉಂಟೋ? ಎಂದಿಗೂ ಇಲ್ಲ.


ದಕ್ಷಿಣದೇಶದ ರಾಣಿಯು ನ್ಯಾಯವಿಚಾರಣೆಯಲ್ಲಿ ಈ ಸಂತತಿಯವರೊಂದಿಗೆ ಎದ್ದುನಿಂತು ಇವರನ್ನು ಅಪರಾಧಿಗಳೆಂದು ಹೇಳುವಳು; ಆಕೆಯು ಸೊಲೊಮೋನನ ಜ್ಞಾನವನ್ನು ತಿಳುಕೊಳ್ಳುವದಕ್ಕೆ ಭೂವಿುಯ ಕಟ್ಟಕಡೆಯಿಂದ ಬಂದಳು; ಆದರೆ ಇಲ್ಲಿ ಸೊಲೊಮೋನನಿಗಿಂತಲೂ ಹೆಚ್ಚಿನವನಿದ್ದಾನೆ.


ಯೆಹೋವನೇ, ನೀನು ಧರ್ಮಸ್ವರೂಪನಾಗಿರುವದರಿಂದ ನಾನು ನಿನ್ನೊಡನೆ ವ್ಯಾಜ್ಯವಾಡಲಾರೆನು, ಆದರೂ ನಿನ್ನ ಸಂಗಡ ನ್ಯಾಯವನ್ನು ಚರ್ಚಿಸುವೆನು. ದುಷ್ಟರ ನಡತೆಗೆ ಏಕೆ ಸುಫಲವಾಗುತ್ತದೆ? ದ್ರೋಹಿಗಳೆಲ್ಲರೂ ನೆಮ್ಮದಿಯಾಗಿರುವದೇಕೆ?


ಇಂಥ ಸರ್ವಶಕ್ತನನ್ನು ನಾವು ಕಂಡುಹಿಡಿಯಲಾರೆವು; ಆತನ ಪರಾಕ್ರಮವು ಬಹಳ; ಆತನು ನ್ಯಾಯವನ್ನಾಗಲಿ ಪರಿಪೂರ್ಣಧರ್ಮವನ್ನಾಗಲಿ ಕುಂದಿಸುವದಿಲ್ಲ.


ಯೋಬನು - ನಾನು ನೀತಿವಂತನು, ದೇವರು ನನ್ನ ನ್ಯಾಯವನ್ನು ತಪ್ಪಿಸಿದ್ದಾನೆ.


ಆಮೇಲೆ ಬೂಜ್ ಕುಲಕ್ಕೂ ರಾಮ್ ಗೋತ್ರಕ್ಕೂ ಸೇರಿದ ಬರಕೇಲನ ಮಗನಾದ ಎಲೀಹುವಿಗೆ ಸಿಟ್ಟೇರಿತು; ಯೋಬನು ದೇವರಿಗಿಂತಲೂ ತಾನೇ ನ್ಯಾಯವಂತನೆಂದು ಎಣಿಸಿಕೊಂಡದರಿಂದ ಅವನ ಮೇಲೆ ಎಲೀಹುವಿಗೆ ಸಿಟ್ಟು ಹತ್ತಿತು.


ಅದೇನಂದರೆ - ಮನುಷ್ಯನು ದೇವರ ದೃಷ್ಟಿಯಲ್ಲಿ ನೀತಿವಂತನಾದಾನೇ? ಮಾನವನು ಸೃಷ್ಟಿಕರ್ತನ ಸನ್ನಿಧಿಯಲ್ಲಿ ಪರಿಶುದ್ಧನಾಗಿರಬಹುದೇ?


ಸ್ವಲ್ಪ ತಾಳು, ನಾನು ತಿಳಿಸುತ್ತೇನೆ, ದೇವರ ಪಕ್ಷವಾಗಿ ಹೇಳತಕ್ಕ ಮಾತುಗಳು ಇನ್ನೂ ಕೆಲವುಂಟು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು