Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 37:1 - ಕನ್ನಡ ಸತ್ಯವೇದವು J.V. (BSI)

1 ಇದಲ್ಲದೆ ನನ್ನ ಎದೆಯು ಅದಕ್ಕೆ ತತ್ತರಗೊಂಡು ತನ್ನ ಸ್ಥಳದಿಂದ ಹಾರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 “ಇದಲ್ಲದೆ ನನ್ನ ಎದೆಯು ಅದಕ್ಕೆ ತತ್ತರಗೊಂಡು, ಮಿಡಿಯುತ್ತ ತನ್ನ ಸ್ಥಳದಿಂದ ಕದಲುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 “ಇದನ್ನು ನೋಡಿದಾಗ ನನ್ನ ಎದೆ ತತ್ತರಗೊಳ್ಳುತ್ತದೆ. ನನ್ನ ಗುಂಡಿಗೆ ಎದೆಬಿಟ್ಟು ಮಿಡಿಯುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 “ಗುಡುಗು ಮಿಂಚುಗಳು ನನ್ನನ್ನು ಭಯಗೊಳಿಸಿವೆ. ನನ್ನ ಹೃದಯವು ಢವಢವನೆ ಬಡಿದುಕೊಳ್ಳುತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 “ಇದನ್ನು ನೋಡಿದಾಗ ನನ್ನ ಹೃದಯವು ನಡುಗಿ, ಅದರ ಸ್ಥಳದಿಂದ ಜಿಗಿಯುವಂತಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 37:1
15 ತಿಳಿವುಗಳ ಹೋಲಿಕೆ  

ಅಕಸ್ಮಾತ್ತಾಗಿ ಮಹಾಭೂಕಂಪವುಂಟಾಯಿತು; ಸೆರೆಮನೆಯ ಅಸ್ತಿವಾರಗಳು ಕದಲಿದವು. ಅದೇ ಕ್ಷಣದಲ್ಲಿ ಕದಗಳೆಲ್ಲಾ ತೆರೆದವು, ಎಲ್ಲರ ಬೇಡಿಗಳು ಕಳಚಿಬಿದ್ದವು.


ಅವನು - ದೀಪ ತರಬೇಕೆಂದು ಕೂಗಿ ಒಳಕ್ಕೆ ಹಾರಿ ನಡುಗುತ್ತಾ ಪೌಲ ಸೀಲರ ಮುಂದೆ ಬಿದ್ದನು.


ಅದು ನನಗೆ ಕೇಳಿಸಲು ನನ್ನ ಹೊಟ್ಟೆಯು ತಳಮಳಗೊಂಡಿತು, ಆ ಶಬ್ದಕ್ಕೆ ನನ್ನ ತುಟಿಗಳು ಅದರಿದವು. ವಿಪತ್ಕಾಲವು ಜನರನ್ನು ಎದುರಾಯಿಸಿ ಅವರ ಮೇಲೆ ಬೀಳುವಾಗ ನಾನು ಅದನ್ನು ತಾಳ್ಮೆಯಿಂದ ಕಾದಿರಬೇಕೆಂದು ನನಗೆ ತಿಳಿಯಲು ಕ್ಷಯವು ನನ್ನ ಎಲುಬುಗಳಲ್ಲಿ ಸೇರಿತು, ನಾನು ನಿಂತ ಹಾಗೆಯೇ ನಡುಗಿದೆನು.


ನೀವು ನನಗೆ ಅಂಜುವದಿಲ್ಲವೋ, ನನ್ನೆದುರಿಗೆ ನಡುಗುವದಿಲ್ಲವೋ? ಸಮುದ್ರವು ದಾಟದ ಹಾಗೆ ಅದಕ್ಕೆ ಮರಳನ್ನು ನಿತ್ಯನಿಬಂಧನೆಯಿಂದ ಮೇರೆಯನ್ನಾಗಿ ನೇವಿುಸಿದ್ದೇನಷ್ಟೆ. ತೆರೆಗಳು ಅಲ್ಲಕಲ್ಲೋಲವಾದರೂ ಮೀರಲಾರವು, ಭೋರ್ಗರೆದರೂ ಹಾಯಲಾರವು.


ನಿನ್ನ ಭಯದಿಂದ ನನ್ನ ಮಾಂಸವು ಕಂಪಿಸುತ್ತದೆ; ನಿನ್ನ ವಿಧಿಗಳಿಗೆ ಅಂಜಿಕೊಂಡಿದ್ದೇನೆ.


ಆತನು ಪರಿಶುದ್ಧರ ಸಭೆಯಲ್ಲಿ ಭಯಂಕರನಾದ ದೇವರು; ತನ್ನ ಎಲ್ಲಾ ಪರಿವಾರದವರಿಗಿಂತ ಭೀಕರನು.


ಆಗ ಯೆಹೋವನು ಬಿರುಗಾಳಿಯೊಳಗಿಂದ ಯೋಬನಿಗೆ ಪ್ರತ್ಯುತ್ತರವಾಗಿ ಹೀಗೆಂದನು -


ಈ ವಿಷಯವನ್ನು ನೆನಪಿಗೆ ತಂದುಕೊಂಡ ಹಾಗೆಲ್ಲಾ ನಡುಕವು ನನ್ನ ಮಾಂಸವನ್ನು ಹಿಡಿಯುತ್ತದೆ.


ಎಲುಬುಗಳೆಲ್ಲಾ ನಡುಗುವಷ್ಟು ಭಯಂಕರವಾದ ದಿಗಿಲು ಉಂಟಾಯಿತು.


ಮೂರನೆಯ ದಿನದಲ್ಲಿ ಸೂರ್ಯೋದಯವಾಗುವಾಗ ಆ ಬೆಟ್ಟದ ಮೇಲೆ ಗುಡುಗೂ ವಿುಂಚೂ ಕಾರ್ಮುಗಿಲೂ ತುತೂರಿಯ ಮಹಾಧ್ವನಿಯೂ ಉಂಟಾಗಲು ಪಾಳೆಯದಲ್ಲಿದ್ದ ಜನರೆಲ್ಲರೂ ನಡುಗಿದರು.


ದಾನ್‍ಕುಲದ ವಿಷಯದಲ್ಲಿ ಹೀಗಂದನು - ದಾನ್‍ಕುಲವು ಬಾಷಾನ್ ಸೀಮೆಯಿಂದ ಹೊರಟು ಹಾರಿಬರುವ ಪ್ರಾಯದ ಸಿಂಹದಂತಿದೆ.


ಅದರ ಆರ್ಭಟವು ಆತನ ವಿಷಯವಾಗಿ ಪ್ರಕಟಿಸುವದು, ದನಗಳು ಸಹ ಆತನ ಆಗಮನವನ್ನು ತಿಳಿಸುವವು.


ಗುಡುಗುಟ್ಟುವ ಆತನ ಧ್ವನಿಗೆ ಕಿವಿಗೊಡಿರಿ, ಆತನ ಬಾಯಿಂದ ಹೊರಡುವ ಮೊಳಗನ್ನು ಕೇಳಿರಿ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು