ಯೋಬ 37:23 - ಕನ್ನಡ ಸತ್ಯವೇದವು J.V. (BSI)23 ಇಂಥ ಸರ್ವಶಕ್ತನನ್ನು ನಾವು ಕಂಡುಹಿಡಿಯಲಾರೆವು; ಆತನ ಪರಾಕ್ರಮವು ಬಹಳ; ಆತನು ನ್ಯಾಯವನ್ನಾಗಲಿ ಪರಿಪೂರ್ಣಧರ್ಮವನ್ನಾಗಲಿ ಕುಂದಿಸುವದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಇಂಥ ಸರ್ವಶಕ್ತನಾದ ದೇವರನ್ನು ನಾವು ಕಂಡುಹಿಡಿಯಲಾರೆವು; ಆತನ ಪರಾಕ್ರಮವು ಬಹಳ; ಆತನು ನ್ಯಾಯವನ್ನಾಗಲಿ, ಪರಿಪೂರ್ಣ ಧರ್ಮವನ್ನಾಗಲಿ ಕುಂದಿಸುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಕಂಡುಹಿಡಿಯಲಾಗದು ಇಂಥ ಸರ್ವಶಕ್ತನನು ನಮ್ಮಿಂದ ಶಕ್ತಿಯಲೂ ಸತ್ಯದಲೂ ಪರಮ ಪರಾಕ್ರಮಿ ಆತ ನ್ಯಾಯಪೂರ್ಣನಾದ ಆತ ದಬ್ಬಾಳಿಕೆ ನಡೆಸುವವನಲ್ಲ ನ್ಯಾಯಕ್ಕಾಗಲೀ ಧರ್ಮಕ್ಕಾಗಲೀ ಆತ ಧಕ್ಕೆ ತರುವವನಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 “ಸರ್ವಶಕ್ತನಾದ ದೇವರು ಮಹೋನ್ನತನೇ ಸರಿ! ನಾವು ಆತನನ್ನು ಅರ್ಥಮಾಡಿಕೊಳ್ಳಲು ನಮಗೆ ಸಾಧ್ಯವಿಲ್ಲ. ದೇವರು ಮಹಾ ಬಲಿಷ್ಠನಾಗಿದ್ದರೂ ನಮಗೆ ಒಳ್ಳೆಯವನೂ ನ್ಯಾಯವಂತನೂ ಆಗಿದ್ದಾನೆ; ಆತನು ನಮ್ಮನ್ನು ಹಿಂಸಿಸಲು ಇಷ್ಟಪಡುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಇಂಥಾ ಸರ್ವಶಕ್ತರನ್ನು ನಾವು ಕಂಡುಹಿಡಿಯಲಾಗದು; ದೇವರು ಶಕ್ತಿಯಲ್ಲಿ ಉನ್ನತರಾಗಿದ್ದಾರೆ; ನ್ಯಾಯತೀರ್ಪಿನಲ್ಲಿಯೂ, ಮಹಾ ನೀತಿಯಲ್ಲಿಯೂ ದೇವರು ದಬ್ಬಾಳಿಕೆ ನಡೆಸುವವರಲ್ಲ. ಅಧ್ಯಾಯವನ್ನು ನೋಡಿ |