Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 37:24 - ಕನ್ನಡ ಸತ್ಯವೇದವು J.V. (BSI)

24 ಆದಕಾರಣ ಮನುಷ್ಯರು ಆತನಿಗೆ ಭಯಪಡುವರು, ಜ್ಞಾನಿಗಳೆಂದು ಎಣಿಸಿಕೊಳ್ಳುವವರನ್ನು ಆತನು ಲಕ್ಷಿಸುವದೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಆದಕಾರಣ ಮನುಷ್ಯರು ಆತನಿಗೆ ಭಯಪಡುವರು, ಜ್ಞಾನಿಗಳೆಂದು ಎಣಿಸಿಕೊಳ್ಳುವವರನ್ನು ಆತನು ಲಕ್ಷಿಸುವುದೇ ಇಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಎಂತಲೇ ಜನರಿಗೆ ಆತನಲ್ಲಿದೆ ಭಯಭಕ್ತಿ ತಾವೇ ಜ್ಞಾನಿಗಳೆಂದುಕೊಳ್ಳುವವರಲಿ ದೇವರಿಗಿಲ್ಲ ಲಕ್ಷ್ಯ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಆದಕಾರಣವೇ ಜನರು ದೇವರಲ್ಲಿ ಭಯಭಕ್ತಿಯಿಂದಿರುವರು. ದೇವರಾದರೋ ತಮ್ಮನ್ನು ಜ್ಞಾನಿಗಳೆಂದು ಭಾವಿಸಿಕೊಂಡಿರುವ ಗರ್ವಿಷ್ಠರನ್ನು ಗೌರವಿಸುವುದಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಆದ್ದರಿಂದ ಮನುಷ್ಯರು ದೇವರಿಗೆ ಭಯಪಡುತ್ತಾರೆ; ಆದರೆ ತಾವೇ ಜ್ಞಾನಿಗಳೆಂದು ತಿಳಿದಿರುವವರು ದೇವರು ಲಕ್ಷಿಸುವುದಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 37:24
19 ತಿಳಿವುಗಳ ಹೋಲಿಕೆ  

ಇದಲ್ಲದೆ ದೇಹವನ್ನು ಕೊಂದು ಆತ್ಮವನ್ನು ಕೊಲ್ಲಲಾರದವರಿಗೆ ಹೆದರಬೇಡಿರಿ, ಆತ್ಮ ದೇಹ ಎರಡನ್ನೂ ಕೂಡ ನರಕದಲ್ಲಿ ಹಾಕಿ ನಾಶಮಾಡಬಲ್ಲಾತನಿಗೇ ಹೆದರಿರಿ.


ಸಹೋದರರೇ, ದೇವರು ನಿಮ್ಮನ್ನು ಕರೆದಾಗ ಎಂಥವರನ್ನು ಕರೆದನೆಂದು ಆಲೋಚಿಸಿರಿ. ನಿಮ್ಮೊಳಗೆ ಲೌಕಿಕ ದೃಷ್ಟಿಯಲ್ಲಿ ಜ್ಞಾನಿಗಳೂ ಅನೇಕರಿಲ್ಲ, ಅಧಿಕಾರಿಗಳೂ ಅನೇಕರಿಲ್ಲ, ಕುಲೀನರೂ ಅನೇಕರಿಲ್ಲ.


ಆತನ ಅಪಾರವಾದ ದಯಾ ಸಹನ ದೀರ್ಘಶಾಂತಿಗಳನ್ನು ಅಸಡ್ಡೆಮಾಡುತ್ತೀಯಾ? ಮನಸ್ಸನ್ನು ಬೇರೆಮಾಡಿಕೊಳ್ಳುವದಕ್ಕೆ ದೇವರ ಉಪಕಾರವು ನಿನ್ನನ್ನು ಪ್ರೇರಿಸುತ್ತದೆಂಬದು ನಿನಗೆ ಗೊತ್ತಿಲ್ಲವೇ?


ಅಯ್ಯೋ, ತಮ್ಮಲ್ಲಿ ತಾವೇ ಜ್ಞಾನಿಗಳೆಂದೂ ಸ್ವಂತ ಗಣನೆಯಲ್ಲಿ ವಿವೇಕಿಗಳೆಂದೂ ಭಾವಿಸಿಕೊಳ್ಳುವವರ ಪಾಡು ಏನು ಹೇಳಲಿ!


ನೀನು ಪಾಪವನ್ನು ಕ್ಷವಿುಸುವವನಾದ್ದರಿಂದ ಮನುಷ್ಯರ ಭಯಭಕ್ತಿಗೆ ನೀನೇ ಪಾತ್ರನು.


ಜ್ಞಾನಿಗಳನ್ನು ಅವರ ತಂತ್ರಗಳಲ್ಲಿಯೇ ಹಿಡುಕೊಂಡು ವಕ್ರಬುದ್ಧಿಯುಳ್ಳವರ ಆಲೋಚನೆಯನ್ನು ನಿರರ್ಥಕ ಮಾಡುತ್ತಾನೆ.


ಯಾಕಂದರೆ ಇಹಲೋಕ ಜ್ಞಾನವು ದೇವರ ಮುಂದೆ ಹುಚ್ಚುತನವಾಗಿದೆ. ಆತನು ಜ್ಞಾನಿಗಳನ್ನು ಅವರ ತಂತ್ರಗಳಲ್ಲಿಯೇ ಹಿಡುಕೊಳ್ಳುತ್ತಾನೆಂತಲೂ


ಅದೇ ಗಳಿಗೆಯಲ್ಲಿ ಆತನು ಪವಿತ್ರಾತ್ಮನ ಪ್ರೇರಣೆಯಿಂದ ಉಲ್ಲಾಸಗೊಂಡು ಹೇಳಿದ್ದೇನಂದರೆ - ತಂದೆಯೇ, ಪರಲೋಕ ಭೂಲೋಕಗಳ ಒಡೆಯನೇ, ನೀನು ಜ್ಞಾನಿಗಳಿಗೂ ಬುದ್ಧಿವಂತರಿಗೂ ಈ ಮಾತುಗಳನ್ನು ಮರೆಮಾಡಿ ಬಾಲಕರಿಗೆ ಪ್ರಕಟಮಾಡಿದ್ದೀ ಎಂದು ನಿನ್ನನ್ನು ಕೊಂಡಾಡುತ್ತೇನೆ. ಹೌದು, ತಂದೆಯೇ, ಹೀಗೆ ಮಾಡುವದೇ ಒಳ್ಳೇದೆಂದು ನಿನ್ನ ದೃಷ್ಟಿಗೆ ತೋರಿದ್ದರಿಂದ ನಿನ್ನನ್ನು ಕೊಂಡಾಡುತ್ತೇನೆ.


ಅನಂತರ ಅವರು ತಮ್ಮ ದೇವರಾದ ಯೆಹೋವನನ್ನೂ ತಮ್ಮ ರಾಜನಾದ ದಾವೀದನನ್ನೂ ಪುನಃ ಆಶ್ರಯಿಸುವರು; ಹೌದು, ಅಂತ್ಯಕಾಲದಲ್ಲಿ ಯೆಹೋವನನ್ನೂ ಆತನ ದಯೆಯನ್ನೂ ಭಯಭಕ್ತಿಯಿಂದ ಮರೆಹೊಗುವರು.


ನಾನು ಈ ಜನರಿಗೆ ಅನುಗ್ರಹಿಸುವ ಎಲ್ಲಾ ಮೇಲುಗಳ ಸುದ್ದಿಯನ್ನು ಕೇಳಿ ನಾನು ಈ ಪಟ್ಟಣಕ್ಕೆ ಉಂಟುಮಾಡುವ ಸುಖಸಮಾಧಾನಗಳನ್ನು ನೋಡಿ ಹೆದರಿ ನಡುಗುವ ಸಕಲ ಭೂರಾಜ್ಯಗಳ ಮುಂದೆ ಈ ಪಟ್ಟಣವು ನನ್ನ ಕೀರ್ತಿಯೂ ಮಹಿಮೆಯೂ ಆನಂದದ ಬಿರುದೂ ಆಗುವದು.


ನಾನು ಅವರ ಹಿತವನ್ನೂ ಅವರ ತರುವಾಯ ಅವರ ಮಕ್ಕಳ ಹಿತವನ್ನೂ ಬಯಸುತ್ತಾ ಅವರು ಸದಾ ನನ್ನಲ್ಲಿ ಭಯಭಕ್ತಿಯುಳ್ಳವರಾಗಿರುವಂತೆ ಎಲ್ಲರಿಗೂ ಒಂದೇ ಮನಸ್ಸನ್ನೂ ಒಂದೇ ಮಾರ್ಗವನ್ನೂ ಅನುಗ್ರಹಿಸುವೆನು.


ನಾನು ಲೋಕದಲ್ಲಿ ತಿರಿಗಿ ದೃಷ್ಟಿಸಲು ವೇಗಿಗಳಿಗೆ ಓಟದಲ್ಲಿ ಗೆಲವಿಲ್ಲ, ಬಲಿಷ್ಠರಿಗೆ ಯುದ್ಧದಲ್ಲಿ ಜಯವಾಗದು, ಜ್ಞಾನಿಗಳಿಗೆ ಅನ್ನ ಸಿಕ್ಕದು, ವಿವೇಕಿಗಳಿಗೆ ಧನ ಲಭಿಸದು, ಪ್ರವೀಣರಿಗೆ ದಯೆ ದೊರೆಯದು; ಕಾಲವೂ ಪ್ರಾಪ್ತಿಯೂ ಯಾರಿಗೂ ತಪ್ಪಿದ್ದಲ್ಲ ಎಂದು ತಿಳಿದುಕೊಂಡೆನು.


ಯಾವನು ಅಹಂಕಾರಿಗಳಲ್ಲಿಯೂ ಸುಳ್ಳನ್ನು ಹಿಂಬಾಲಿಸುವವರಲ್ಲಿಯೂ ಸೇರದೆ ಯೆಹೋವನನ್ನೇ ನಂಬುತ್ತಾನೋ ಅವನೇ ಧನ್ಯನು.


ಭೂಲೋಕದವರೆಲ್ಲರೂ ಯೆಹೋವನಿಗೆ ಭಯಪಡಲಿ; ಭೂನಿವಾಸಿಗಳೆಲ್ಲರೂ ಆತನಿಗೆ ಹೆದರಲಿ.


ನೀವು ನನಗೆ ಅಂಜುವದಿಲ್ಲವೋ, ನನ್ನೆದುರಿಗೆ ನಡುಗುವದಿಲ್ಲವೋ? ಸಮುದ್ರವು ದಾಟದ ಹಾಗೆ ಅದಕ್ಕೆ ಮರಳನ್ನು ನಿತ್ಯನಿಬಂಧನೆಯಿಂದ ಮೇರೆಯನ್ನಾಗಿ ನೇವಿುಸಿದ್ದೇನಷ್ಟೆ. ತೆರೆಗಳು ಅಲ್ಲಕಲ್ಲೋಲವಾದರೂ ಮೀರಲಾರವು, ಭೋರ್ಗರೆದರೂ ಹಾಯಲಾರವು.


ಇದನ್ನು ನೋಡಿ ಆ ಜನರು ಯೆಹೋವನಿಗೆ ಬಹಳ ಭಯಪಟ್ಟು ಆತನಿಗೆ ಯಜ್ಞವನ್ನರ್ಪಿಸಿ ಹರಕೆಗಳನ್ನು ಮಾಡಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು