Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 37:3 - ಕನ್ನಡ ಸತ್ಯವೇದವು J.V. (BSI)

3 ಆತನು ಅದನ್ನು ಆಕಾಶಮಂಡಲದಲ್ಲೆಲ್ಲಾ ಹಬ್ಬಿಸಿ ತನ್ನ ಸಿಡಿಲನ್ನು ಭೂವಿುಯ ಅಂಚುಗಳವರೆಗೂ ಬಿಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆತನು ಅದನ್ನು ಆಕಾಶಮಂಡಲದಲ್ಲೆಲ್ಲಾ ಹಬ್ಬಿಸಿ, ತನ್ನ ಸಿಡಿಲನ್ನು ಭೂಮಿಯ ಅಂಚುಗಳವರೆಗೂ ಬಿಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಅದನ್ನು ಗಗನಮಂಡಲದೊಳು ಹರಡುತ್ತಾನೆ ಜಗದ ಅಂಚಿನ ತನಕ ಮಿಂಚು ಹೊಳೆಯುವಂತೆ ಮಾಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಇಡೀ ಆಕಾಶಮಂಡಲದಲ್ಲೆಲ್ಲಾ ಪ್ರಕಾಶಿಸಲೆಂದು ದೇವರು ತನ್ನ ಸಿಡಿಲನ್ನು ಕಳುಹಿಸುವನು. ಅದು ಭೂಮಿಯ ಮೇಲೆಲ್ಲಾ ಪ್ರಕಾಶಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ತಮ್ಮ ಮಿಂಚನ್ನು ದೇವರು ಆಕಾಶಮಂಡಲದಲ್ಲಿ ಹರಡುತ್ತಾರೆ; ಅದನ್ನು ಭೂಮಿಯ ಅಂಚುಗಳವರೆಗೆ ಕಳುಹಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 37:3
12 ತಿಳಿವುಗಳ ಹೋಲಿಕೆ  

ಹೇಗೆ ವಿುಂಚು ಮೂಡಣದಲ್ಲಿ ಹುಟ್ಟಿ ಪಡುವಣದವರೆಗೂ ಕಾಣಿಸುತ್ತದೋ ಹಾಗೆಯೇ ಮನುಷ್ಯಕುಮಾರನ ಪ್ರತ್ಯಕ್ಷತೆಯು ಇರುವದು.


ದುಷ್ಟರನ್ನು ಅದರೊಳಗಿಂದ ಒದರಿಬಿಡು ಎಂದು ಉದಯಕ್ಕೆ ಅಪ್ಪಣೆಕೊಟ್ಟಿಯಾ?


ಅವನು ಜನಾಂಗಗಳಿಗೆ ಧ್ವಜವನ್ನೆತ್ತಿ ಇಸ್ರಾಯೇಲ್ಯರಲ್ಲಿ ಸೆರೆಗೆ ಒಯ್ಯಲ್ಪಟ್ಟವರನ್ನೂ ಯೆಹೂದದಿಂದ ಚದರಿದವರನ್ನೂ ಭೂವಿುಯ ಚತುರ್ದಿಕ್ಕುಗಳಿಂದಲೂ ಕೂಡಿಸಿಕೊಳ್ಳುವನು.


ಆಗ ಪರಲೋಕದಲ್ಲಿರುವ ದೇವಾಲಯವು ತೆರೆಯಿತು; ಆತನ ಆಲಯದಲ್ಲಿ ಆತನ ಒಡಂಬಡಿಕೆಯ ಮಂಜೂಷವು ಕಾಣಿಸಿತು; ಇದಲ್ಲದೆ ವಿುಂಚುಗಳೂ ವಾಣಿಗಳೂ ಗುಡುಗುಗಳೂ ಭೂಕಂಪವೂ ದೊಡ್ಡ ಆನೆಕಲ್ಲಿನ ಮಳೆಯೂ ಉಂಟಾದವು.


ಆತನ ವಿುಂಚುಗಳು ಲೋಕವನ್ನು ಬೆಳಗಿಸಿದವು; ಭೂವಿುಯು ಅದನ್ನು ಕಂಡು ನಡುಗಿತು.


ದೇವರೇ, ನಿನ್ನ ಮಾರ್ಗವು ಪರಿಶುದ್ಧವಾದದ್ದು. ನಮ್ಮ ದೇವರಂತೆ ಮಹತ್ವವುಳ್ಳ ದೇವರು ಯಾರು?


ಆತನೊಬ್ಬನೇ ಭೂವಿುಯ ಕಟ್ಟಕಡೆಯ ತನಕ ದೃಷ್ಟಿಸಿ ಆಕಾಶದ ಕೆಳಗಿನ ಸಮಸ್ತವನ್ನೂ ನೋಡುವವನಾಗಿದ್ದಾನೆ.


ಮಳೆಗೆ ಕಟ್ಟಳೆಯನ್ನೂ ಗರ್ಜಿಸುವ ಸಿಡಿಲಿಗೆ ದಾರಿಯನ್ನೂ ಏರ್ಪಡಿಸಿದಾಗಲೇ


ಸಿಡಿಲಿನ ತರುವಾಯ ಗರ್ಜನೆಯುಂಟಾಗುವದು, ಆತನು ತನ್ನ ಮಹಿಮೆಯ ಶಬ್ದದಿಂದ ಗುಡುಗುವನು. ಈ ಶಬ್ದವು ಕೇಳಿಸಿದ ಮೇಲೆಯೂ ಆತನು ಸಿಡಿಲುಗಳನ್ನು ತಡೆಯುವದಿಲ್ಲ.


ಇದಲ್ಲದೆ ಮೋಡಗಳ ಮೇಲೆ ಮಂಜಿನ ಭಾರವನ್ನು ಹೇರಿ ತನ್ನ ವಿುಂಚಿನ ಮೇಘಮಂಡಲವನ್ನು ಹರಡುವನು.


ಸಿಡಿಲುಗಳು ಭೂಮಂಡಲದಲ್ಲೆಲ್ಲಾ ತಾನು ವಿಧಿಸುವದನ್ನೇ ಮಾಡಲಿ ಎಂದು ಅವುಗಳನ್ನು ನಡೆಯಿಸಿ ಸುತ್ತಮುತ್ತಲು ತಿರುಗಿಸುವನು.


ಸಿಡಿಲುಗಳು ನಿನ್ನ ಅಪ್ಪಣೆಯಂತೆ ಹೋಗಿ ಬಂದು - ಇಗೋ, ಬಂದಿದ್ದೇವೆ ಎನ್ನುವವೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು