Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 37:7 - ಕನ್ನಡ ಸತ್ಯವೇದವು J.V. (BSI)

7 ಆತನು ತನ್ನ ಕೆಲಸವನ್ನು ಎಲ್ಲರೂ ತಿಳಿದುಕೊಳ್ಳಬೇಕೆಂದು ಪ್ರತಿಯೊಬ್ಬನ ಕೈಯನ್ನು ಮುದ್ರಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆತನು ತನ್ನ ಕೆಲಸವನ್ನು ಎಲ್ಲರೂ ತಿಳಿದುಕೊಳ್ಳಬೇಕೆಂದು, ಪ್ರತಿಯೊಬ್ಬನ ಕೈಗಳನ್ನು ಬಲಪಡಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಹೀಗೆ ಜನರೆಲ್ಲರು ಕೆಲಸ ನಿಲ್ಲಿಸುವಂತೆ ಮಾಡುತ್ತಾನೆ ತನ್ನ ಕಾರ್ಯವನು ಅರಿಯುವಂತೆ ಮಾಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ದೇವರು ತನ್ನ ಕಾರ್ಯವನ್ನು ಎಲ್ಲರೂ ತಿಳಿದುಕೊಳ್ಳಬೇಕೆಂದು ಪ್ರತಿಯೊಬ್ಬರನ್ನು ಮನೆಯೊಳಗೆ ಕೂಡಿಹಾಕುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಹೀಗೆ ದೇವರು ತಮ್ಮ ಕೃತ್ಯವನ್ನು ಜನರೆಲ್ಲರೂ ತಿಳುಕೊಳ್ಳುವಂತೆ ಮಾಡುತ್ತಾರೆ. ಸ್ವಲ್ಪಕಾಲ ಮನುಷ್ಯರ ದುಡಿಮೆಯನ್ನು ನಿಲ್ಲಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 37:7
12 ತಿಳಿವುಗಳ ಹೋಲಿಕೆ  

ಯೆಹೋವನ ಕೃತ್ಯಗಳು ಮಹತ್ತಾದವುಗಳು; ಅವುಗಳಲ್ಲಿ ಸಂತೋಷಿಸುವವರು ಅವುಗಳನ್ನೇ ಧ್ಯಾನಿಸುವರು.


ಆಗ ಅವರು ಇದು ನಿನ್ನ ಕೈಕೆಲಸವೆಂದೂ ಯೆಹೋವನಾದ ನೀನೇ ಮಾಡಿದ್ದೆಂದೂ ತಿಳಿದುಕೊಳ್ಳುವರು.


ಯೆಹೋವನೇ, ನೀನು ಕೈಯೆತ್ತಿದ್ದರೂ ಅವರು ಲಕ್ಷಿಸರು. ಆದರೆ ನಿನ್ನ ಸ್ವಜನಾಭಿಮಾನವನ್ನು ನೋಡಿ ನಾಚಿಕೆಪಡುವರು; ಹೌದು, ಆ ನಿನ್ನ ವಿರೋಧಿಗಳನ್ನು ಅಗ್ನಿಯು ದಹಿಸಿಬಿಡುವದು.


ಕಿನ್ನರಿ, ವೀಣೆ, ದಮ್ಮಡಿ, ಕೊಳಲು, ದ್ರಾಕ್ಷಾರಸ ಇವುಗಳೇ ಅವರ ಔತಣಗಳ ಸೊಬಗು; ಯೆಹೋವನ ಕೆಲಸವನ್ನೋ ಅವರು ಲಕ್ಷಿಸರು, ಆತನ ಹಸ್ತಕಾರ್ಯವನ್ನು ಆಲೋಚಿಸರು.


ಲೋಕದಲ್ಲಿ ನಡೆಯುವದನ್ನು ಮನುಷ್ಯನು ಗ್ರಹಿಸಲಾರನು, ಎಷ್ಟು ಪ್ರಯಾಸಪಟ್ಟು ವಿಚಾರಿಸಿದರೂ ಗ್ರಹಿಸಲಾರನು; ಹೌದು, ಜ್ಞಾನಿಯು ಗ್ರಹಿಸಬಹುದೆಂದರೂ ಗ್ರಹಿಸಲಾರನು ಎಂಬದಾಗಿ ನಾನು ದೇವರ ಕೆಲಸವನ್ನೆಲ್ಲಾ ದೃಷ್ಟಿಸಿ ತಿಳಿದುಕೊಂಡೆನು.


ಯೆಹೋವನೇ, ನಿನ್ನ ಕ್ರಿಯೆಗಳಿಂದ ನನ್ನನ್ನು ಸಂತೋಷಪಡಿಸಿದ್ದೀ; ನಿನ್ನ ಕೆಲಸಗಳ ದೆಸೆಯಿಂದ ಉತ್ಸಾಹಧ್ವನಿ ಮಾಡುತ್ತೇನೆ.


ಎಲ್ಲಾ ಮನುಷ್ಯರು ಭಯಪಟ್ಟು ದೇವರ ಕೆಲಸವೆಂದು ಹೇಳಿ ಆತನ ಕೃತ್ಯಗಳನ್ನು ಆಲೋಚಿಸಿಕೊಳ್ಳುವರು.


ಬನ್ನಿರಿ, ಯೆಹೋವನ ಕಾರ್ಯವನ್ನು ನೋಡಿರಿ; ಆತನು ಭೂಲೋಕದಲ್ಲಿ ಎಂಥಾ ಪ್ರಳಯವನ್ನು ನಡಿಸಿದ್ದಾನೆ.


ಮನುಷ್ಯರು ಕೀರ್ತಿಸಿರುವ ಆತನ ಕೆಲಸವನ್ನು ಹೊಗಳಲು ಮರೆಯಬೇಡ.


ಇಗೋ, ಯಾರೂ ಕಟ್ಟದಹಾಗೆ ಕೆಡವಿಬಿಡುವನು, ಯಾರೂ ಬಿಡಿಸದಂತೆ ಸೆರೆಹಾಕುವನು.


ಹುಟ್ಟಬೇಡವೆಂದು ಆತನು ಅಪ್ಪಣೆಕೊಟ್ಟರೆ ಸೂರ್ಯನು ಹುಟ್ಟುವದಿಲ್ಲ; ನಕ್ಷತ್ರಗಳನ್ನು ಮುಚ್ಚಿಟ್ಟು ಮುದ್ರೆಹಾಕುತ್ತಾನೆ.


ಯುಕ್ತಿವಂತರ ಕೈಯಿಂದ ಏನೂ ಆಗದಂತೆ ಅವರ ಉಪಾಯಗಳನ್ನು ಭಂಗಪಡಿಸುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು