Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 38:11 - ಕನ್ನಡ ಸತ್ಯವೇದವು J.V. (BSI)

11 ಇಲ್ಲಿಯ ತನಕ ಬರಬಹುದು; ಮೀರಿ ಬರಬೇಡ, ನಿನ್ನ ತೆರೆಗಳ ಹೆಮ್ಮೆಗೆ ಇಲ್ಲೇ ತಡೆಯಾಗುವದು ಎಂದು ಅಪ್ಪಣೆಕೊಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ‘ಇಲ್ಲಿಯ ತನಕ ಬರಬಹುದು; ಮೀರಿ ಬರಬೇಡ, ನಿನ್ನ ತೆರೆಗಳ ಹೆಮ್ಮೆಗೆ ಇಲ್ಲೇ ತಡೆಯಾಗುವುದು’ ಎಂದು ಅಪ್ಪಣೆಕೊಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ‘ಇಲ್ಲಿಯತನಕ ಬರಬಹುದು, ಇದನು ಮೀರಿ ಬರಕೂಡದು’ ‘ಮೊರೆವ ನಿನ್ನ ತೆರೆಗೆ ಇಲ್ಲಿಗೇ ತಡೆ’ ಎಂದು ವಿಧಿಸಿದವನು ನಾನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ನಾನು ಸಮುದ್ರಕ್ಕೆ, ‘ನೀನು ಇಲ್ಲಿಯವರೆಗೆ ಬರಬಹುದು, ಆದರೆ ಇದಕ್ಕಿಂತ ಹೆಚ್ಚಿಗೆ ಬರಕೂಡದು. ನಿನ್ನ ಹೆಮ್ಮೆಯ ಅಲೆಗಳು ಇಲ್ಲೇ ನಿಲ್ಲಬೇಕು’ ಎಂದು ಅಪ್ಪಣೆಕೊಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ‘ಇಲ್ಲಿಯ ತನಕ ಬರಬಹುದು, ಇದನ್ನು ಮೀರಿ ಬರಕೂಡದು; ಇಲ್ಲಿಗೇ ನಿನ್ನ ತೆರೆಗಳ ಹೆಮ್ಮೆ ನಿಲ್ಲಲಿ,’ ಎಂದು ಆಜ್ಞಾಪಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 38:11
19 ತಿಳಿವುಗಳ ಹೋಲಿಕೆ  

ಸಮುದ್ರದ ಅಲ್ಲಕಲ್ಲೋಲಗಳನ್ನು ಅಂಕೆಯಲ್ಲಿಟ್ಟುಕೊಂಡಿರುವವನು ನೀನು; ತೆರೆಗಳು ಏಳುವಾಗ ಅವುಗಳನ್ನು ತಡೆಯುವವನು ನೀನು.


ಪ್ರವಾಹಗಳು ತನ್ನ ಅಪ್ಪಣೆಯನ್ನು ಮೀರದ ಹಾಗೆ ಸಮುದ್ರಕ್ಕೆ ಎಲ್ಲೆಕಟ್ಟನ್ನು ನೇವಿುಸಿ ಭೂವಿುಯ ಅಸ್ತಿವಾರಗಳನ್ನು ಗೊತ್ತುಮಾಡುವಾಗ


ನಿನ್ನ ಪ್ರಜೆಯನ್ನು ಕಳುಹಿಸಿಬಿಡುವದರ ಮೂಲಕ ಅದರೊಡನೆ ವಿುತಿಮೀರದೆ ಹೋರಾಡುತ್ತಿದ್ದೀ; ಮೂಡಣ ಗಾಳಿಯು ಬೀಸಿದ ದಿನದಲ್ಲಿ ಅದರ ಕ್ರೂರವಾದ ಬಡಿತದಿಂದ ನಿನ್ನ ಜನವನ್ನು ತೊಲಗಿಸಿದಿ.


ಯೆಹೋವನು ಸೈತಾನನಿಗೆ - ಅವನು ನಿನ್ನ ಕೈಯಲ್ಲಿದ್ದಾನೆ, ನೋಡು; ಅವನ ಪ್ರಾಣವನ್ನಾದರೋ ಉಳಿಸಲೇಬೇಕು ಎಂದು ಅಪ್ಪಣೆಕೊಟ್ಟನು.


ಮನುಷ್ಯರ ಕೋಪವೂ ನಿನ್ನ ಘನಕ್ಕೇ ಸಾಧಕವಾಗುವದು; ಕೋಪಶೇಷವನ್ನು ನಡುಕಟ್ಟಿನಂತೆ ಬಿಗಿದುಕೊಳ್ಳುವಿ.


ಇದೆಲ್ಲದರಲ್ಲಿಯೂ ಯೋಬನು ಪಾಪಮಾಡಲಿಲ್ಲ, ದೇವರ ಮೇಲೆ ತಪ್ಪುಹೊರಿಸಲೂ ಇಲ್ಲ.


ಇದಲ್ಲದೆ ಸಮುದ್ರಕ್ಕೆ ನನ್ನ ಇಷ್ಟದ ಎಲ್ಲೆಯನ್ನು ಕಟ್ಟಿ ಅಗುಳಿ ಕದಗಳನ್ನು ಹಾಕಿ


ನಿನ್ನ ಜೀವಮಾನದಲ್ಲಿ ಬೆಳಗಿಗೆ ಇರತಕ್ಕ ಸ್ಥಳವನ್ನು ಗೊತ್ತುಮಾಡಿದಿಯಾ? ಭೂವಿುಯ ಅಂಚುಗಳನ್ನು ಹಿಡಿದು


ಜಲರಾಶಿಗಳು ಬಂದು ಪುನಃ ಭೂವಿುಯನ್ನು ಮುಚ್ಚಿಕೊಳ್ಳದ ಹಾಗೆ ನೀನು ಮೇರೆಯನ್ನು ಗೊತ್ತುಮಾಡಿದಿ.


ಮೀರಿದ ಪ್ರವಾಹವು ನಮ್ಮನ್ನು ಮುಣುಗಿಸಿಬಿಡುತ್ತಿತ್ತು.


ಅವನು ಹೋಗಿ ಶವವು ದಾರಿಯಲ್ಲಿ ಬಿದ್ದಿರುವದನ್ನೂ ಕತ್ತೆಯೂ ಸಿಂಹವೂ ಅದರ ಬಳಿಯಲ್ಲಿ ನಿಂತಿರುವದನ್ನೂ ಕಂಡನು. ಸಿಂಹವು ಶವವನ್ನು ತಿನ್ನಲಿಲ್ಲ, ಕತ್ತೆಯನ್ನು ಕೊಲ್ಲಲೂ ಇಲ್ಲ.


ಬೆಳಕುಕತ್ತಲುಗಳ ಸಂಧಿಸ್ಥಾನದಲ್ಲಿ ಸಮುದ್ರದ ಮೇಲೆ ಸುತ್ತಲೂ ಮೇರೆಯನ್ನು ಹಾಕಿದ್ದಾನೆ.


ನೀವು ನನಗೆ ಅಂಜುವದಿಲ್ಲವೋ, ನನ್ನೆದುರಿಗೆ ನಡುಗುವದಿಲ್ಲವೋ? ಸಮುದ್ರವು ದಾಟದ ಹಾಗೆ ಅದಕ್ಕೆ ಮರಳನ್ನು ನಿತ್ಯನಿಬಂಧನೆಯಿಂದ ಮೇರೆಯನ್ನಾಗಿ ನೇವಿುಸಿದ್ದೇನಷ್ಟೆ. ತೆರೆಗಳು ಅಲ್ಲಕಲ್ಲೋಲವಾದರೂ ಮೀರಲಾರವು, ಭೋರ್ಗರೆದರೂ ಹಾಯಲಾರವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು