Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 38:16 - ಕನ್ನಡ ಸತ್ಯವೇದವು J.V. (BSI)

16 ಎಂದಾದರೂ ಸಮುದ್ರದ ಬುಗ್ಗೆಗಳೊಳಗೆ ಸೇರಿದ್ದೆಯೋ? ಭೂವಿುಯ ಕೆಳಗಣ ಸಾಗರದ ಗುಪ್ತಪ್ರದೇಶಗಳಲ್ಲಿ ತಿರುಗಾಡಿದ್ದೀಯೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಎಂದಾದರೂ ಸಮುದ್ರದ ಬುಗ್ಗೆಗಳೊಳಗೆ ಸೇರಿದ್ದೆಯೋ? ಭೂಮಿಯ ಕೆಳಗಣ ಸಾಗರದ ಗುಪ್ತ ಪ್ರದೇಶಗಳಲ್ಲಿ ತಿರುಗಾಡಿದ್ದೀಯೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ನೀನೆಂದಾದರು ಸಮುದ್ರದ ಬುಗ್ಗೆಗಳೊಳಗೆ ಸೇರಿದ್ದೆಯೋ? ಸಾಗರದ ತಳಹದಿಯಲ್ಲಿ ತಿರುಗಾಡಿರುವೆಯೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 “ಯೋಬನೇ, ಸಮುದ್ರವು ಆರಂಭವಾಗುವ ಅತ್ಯಂತ ಆಳವಾದ ಭಾಗಗಳಿಗೆ ನೀನು ಎಂದಾದರೂ ಹೋಗಿರುವಿಯಾ? ಸಾಗರದ ತಳದ ಮೇಲೆ ನೀನು ಎಂದಾದರೂ ನಡೆದಿರುವಿಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 “ನೀನು ಎಂದಾದರೂ ಸಮುದ್ರದ ಬುಗ್ಗೆಗಳಲ್ಲಿ ನಡೆದಿರುವೆಯೋ? ಸಾಗರದ ತಳಹದಿಯಲ್ಲಿ ತಿರುಗಾಡಿರುವೆಯೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 38:16
9 ತಿಳಿವುಗಳ ಹೋಲಿಕೆ  

ಜಲನಿಧಿಗಳಾಗಲಿ ನೀರುತುಂಬಿದ ಬುಗ್ಗೆಗಳಾಗಲಿ ಇಲ್ಲದಿರುವಾಗ ನಾನು ಹುಟ್ಟಿದೆನು.


ನೀನು ಸಮುದ್ರದಲ್ಲಿ ಮಾರ್ಗಮಾಡಿದಿ; ಮಹಾಜಲರಾಶಿಗಳನ್ನು ದಾಟಿದಿ; ನಿನ್ನ ಹೆಜ್ಜೆಯ ಗುರುತು ಕಾಣಲಿಲ್ಲ.


ಆದದರಿಂದ ಯೆಹೋವನು ಇಂತೆನ್ನುತ್ತಾನೆ - ಆಹಾ, ನಾನು ನಿನ್ನ ಪಕ್ಷವಾಗಿ ವ್ಯಾಜ್ಯವಾಡಿ ನಿನ್ನನ್ನು ಹಿಂಸಿಸಿದ ರಾಜ್ಯಕ್ಕೆ ಮುಯ್ಯಿತೀರಿಸುವೆನು; ಅದರ ಸರೋವರವು ಬತ್ತುವಂತೆಯೂ ಅದರ ಪ್ರವಾಹವು ಒಣಗುವಂತೆಯೂ ಮಾಡುವೆನು.


ನೋಹನ ಜೀವಮಾನದ ಆರುನೂರನೆಯ ವರುಷದ ಎರಡನೆಯ ತಿಂಗಳಿನ ಹದಿನೇಳನೆಯ ದಿನದಲ್ಲಿ ಭೂವಿುಯ ಕೆಳಗಿರುವ ಸಾಗರದ ಸೆಲೆಗಳು ಒಡೆದವು; ಆಕಾಶದ ತೂಬುಗಳು ತೆರೆದವು.


ಭೂವಿುಯ ಕೆಳಗಿರುವ ಸಾಗರದ ಸೆಲೆಗಳೂ ಆಕಾಶದ ತೂಬುಗಳೂ ಮುಚ್ಚಿಹೋದವು. ಆಕಾಶದಿಂದ ಸುರಿಯುತ್ತಿದ್ದ ಮಳೆ ನಿಂತುಹೋಯಿತು. ಆಗ ಭೂವಿುಯ ಮೇಲಿದ್ದ ನೀರು ಕ್ರಮವಾಗಿ ತಗ್ಗುತ್ತಾ ಬಂತು.


ಆಕಾಶಮಂಡಲವನ್ನು ವಿಶಾಲಪಡಿಸಿದವನು ಆತನೊಬ್ಬನೇ. ಅಲ್ಲೋಲಕಲ್ಲೋಲವಾದ ಸಮುದ್ರದ ಮೇಲೆ ನಡೆಯುತ್ತಾನೆ.


ಆತನು ಗಗನವನ್ನು ಮೇಲೆ ಸ್ಥಿರಪಡಿಸಿ ಸಾಗರದ ಸೆಲೆಗಳನ್ನು ನೆಲೆಗೊಳಿಸಿ


ಸಾಗರಕ್ಕೆ ನರೆ ಬಂತೋ ಎಂದು ಊಹಿಸುವ ಹಾಗೆ ತಾನು ಬಂದ ದಾರಿಯನ್ನು ಶುಭ್ರಪಡಿಸುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು