Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 38:4 - ಕನ್ನಡ ಸತ್ಯವೇದವು J.V. (BSI)

4 ನಾನು ಲೋಕಕ್ಕೆ ಅಸ್ತಿವಾರಹಾಕಿದಾಗ ನೀನು ಎಲ್ಲಿದ್ದಿ? ನೀನು ಜ್ಞಾನಿಯಾಗಿದ್ದರೆ ಹೇಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನಾನು ಲೋಕಕ್ಕೆ ಅಸ್ತಿವಾರ ಹಾಕಿದಾಗ ನೀನು ಎಲ್ಲಿದ್ದಿ? ನೀನು ಜ್ಞಾನಿಯಾಗಿದ್ದರೆ ಹೇಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ನಾನು ಭೂಮಿಗೆ ಅಸ್ತಿವಾರ ಹಾಕಿದಾಗ ನೀನೆಲ್ಲಿದ್ದೆ? ಉತ್ತರಕೊಡು, ನೀನು ಅಷ್ಟು ಜ್ಞಾನಿಯಾಗಿದ್ದರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 “ಯೋಬನೇ, ನಾನು ಭೂಮಿಗೆ ಅಸ್ತಿವಾರ ಹಾಕಿದಾಗ ನೀನು ಎಲ್ಲಿದ್ದೆ? ನೀನು ಬಹು ಜಾಣನಾಗಿದ್ದರೆ ನನಗೆ ಉತ್ತರಕೊಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 “ನಾನು ಭೂಮಿಗೆ ಅಸ್ತಿವಾರ ಹಾಕಿದಾಗ, ನೀನು ಎಲ್ಲಿ ಇದ್ದೀ? ನಿನಗೆ ತಿಳುವಳಿಕೆ ಇದ್ದರೆ ನನಗೆ ಹೇಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 38:4
18 ತಿಳಿವುಗಳ ಹೋಲಿಕೆ  

ಭೂವಿುಯು ಯುಗಯುಗಾಂತರಕ್ಕೂ ಕದಲದ ಹಾಗೆ ಅದನ್ನು ದೃಢವಾದ ಅಸ್ತಿವಾರದ ಮೇಲೆ ಸ್ಥಾಪಿಸಿದ್ದೀ.


ಕರ್ತನೇ, ಆದಿಯಲ್ಲಿ ನೀನು ಭೂವಿುಗೆ ಅಸ್ತಿವಾರವನ್ನು ಹಾಕಿದಿ, ಗಗನಮಂಡಲವು ನಿನ್ನ ಕೈಕೆಲಸವಾಗಿದೆ;


ಆಕಾಶಕ್ಕೆ ಏರಿ ಇಳಿದಿರುವವನಾರು? ಮುಷ್ಟಿಯಲ್ಲಿ ಗಾಳಿಯನ್ನು ಕೂಡಿಸಿರುವವರು ಯಾರು? ತನ್ನ ಬಟ್ಟೆಯಲ್ಲಿ ನೀರನ್ನು ಮೂಟೆಕಟ್ಟಿರುವವರು ಯಾರು? ಭೂವಿುಯ ಎಲ್ಲೆಗಳನ್ನೆಲ್ಲಾ ಸ್ಥಾಪಿಸಿರುವವರು ಯಾರು? ಅವನ ಹೆಸರೇನು? ಅವನ ಮಗನ ಹೆಸರೇನು? ನೀನೇ ಬಲ್ಲವನು.


ಈ ಅಂತ್ಯದಿನಗಳಲ್ಲಿ ನಮ್ಮ ಸಂಗಡ ಮಗನ ಮುಖಾಂತರ ಮಾತಾಡಿದ್ದಾನೆ. ಈತನನ್ನು ಎಲ್ಲಕ್ಕೂ ಬಾಧ್ಯನನ್ನಾಗಿ ನೇವಿುಸಿದನು. ಈತನ ಮೂಲಕವೇ ಜಗತ್ತನ್ನು ಉಂಟುಮಾಡಿದನು.


ಆದಿಯಲ್ಲಿ ನೀನು ಭೂವಿುಗೆ ಅಸ್ತಿವಾರವನ್ನು ಹಾಕಿದಿ; ಗಗನಮಂಡಲವು ನಿನ್ನ ಕೈಕೆಲಸವಾಗಿದೆ.


ಆದಿಯಲ್ಲಿ ದೇವರು ಆಕಾಶವನ್ನೂ ಭೂವಿುಯನ್ನೂ ಉಂಟುಮಾಡಿದನು.


ಯೆಹೋವನು ತನ್ನ ಸೃಷ್ಟಿಕ್ರಮದಲ್ಲಿ ಮೊದಲು ನನ್ನನ್ನು ನಿರ್ಮಿಸಿದನು; ಆತನ ಪುರಾತನ ಕಾರ್ಯಗಳಲ್ಲಿ ನಾನೇ ಪ್ರಥಮ.


ಇದೇ ಭೂಮ್ಯಾಕಾಶಗಳ ನಿರ್ಮಾಣ ಚರಿತ್ರೆ.


ಆತನು ದೀನನನ್ನು ಧೂಳಿಯಿಂದ ಎತ್ತಿ ದರಿದ್ರನನ್ನು ತಿಪ್ಪೆಯಿಂದ ಎಬ್ಬಿಸಿ ಪ್ರಭುಗಳೊಂದಿಗೆ ಕುಳ್ಳಿರಿಸಿ ಅವನಿಗೆ ಮಹಿಮಾಸನವನ್ನು ಬಾಧ್ಯತೆಯಾಗಿ ಅನುಗ್ರಹಿಸುವವನಾಗಿದ್ದಾನೆ. ಭೂವಿುಯ ಆಧಾರಸ್ತಂಭಗಳು ಯೆಹೋವನವೇ; ಆತನೇ ಅವುಗಳ ಮೇಲೆ ಭೂಮಂಡಲವನ್ನು ಸ್ಥಾಪಿಸಿದ್ದಾನೆ.


ನೀನು ಆದಿಪುರುಷನೋ? ಬೆಟ್ಟಗಳಿಗಿಂತ ಮುಂಚೆ ಹುಟ್ಟಿದಿಯಾ?


ಭೂಲೋಕವನ್ನು ಆತನ ವಶಕ್ಕೆ ಕೊಟ್ಟವನು ಯಾವನು? ಯಾವನು ಭೂಮಂಡಲವನ್ನೆಲ್ಲಾ ಕ್ರಮಪಡಿಸಿದನು?


ಆತನು ಯಾವನ ಆಲೋಚನೆಯನ್ನು ಕೇಳಿದನು? ಯಾವನು ಆತನಿಗೆ ಬುದ್ಧಿಕಲಿಸಿ ಆತನನ್ನು ನ್ಯಾಯಮಾರ್ಗದಲ್ಲಿ ನಡೆಯಿಸಿದನು? ಯಾವನು ಆತನಿಗೆ ಜ್ಞಾನವನ್ನು ಬೋಧಿಸಿ ವಿವೇಕಮಾರ್ಗವನ್ನು ತೋರಿಸಿದನು?


ಆತನು ತನ್ನ ಶಕ್ತಿಯಿಂದ ಭೂವಿುಯನ್ನು ನಿರ್ಮಿಸಿ ತನ್ನ ಜ್ಞಾನದಿಂದ ಲೋಕವನ್ನು ಸ್ಥಾಪಿಸಿ ತನ್ನ ವಿವೇಕದಿಂದ ಆಕಾಶಮಂಡಲವನ್ನು ಹರಡಿದ್ದಾನೆ;


ಇಗೋ, ಪರ್ವತಗಳನ್ನು ರೂಪಿಸಿ ವಾಯುವನ್ನು ಸೃಷ್ಟಿಸಿ ತನ್ನ ಸಂಕಲ್ಪವನ್ನು ಮನುಷ್ಯರಿಗೆ ವ್ಯಕ್ತಗೊಳಿಸಿ ಉದಯವನ್ನು ಅಂಧಕಾರವನ್ನಾಗಿ ಮಾಡಿ ಭೂವಿುಯ ಉನ್ನತಪ್ರದೇಶಗಳಲ್ಲಿ ನಡೆಯುವಾತನಿಗೆ ಸೇನಾಧೀಶ್ವರದೇವರಾದ ಯೆಹೋವನೆಂಬದೇ ನಾಮಧೇಯ.


ಆತನು ಗಾಳಿಗೆ ತಕ್ಕಷ್ಟು ತೂಕವನ್ನು ನೇವಿುಸಿ ನೀರುಗಳನ್ನು ತಕ್ಕ ಪರಿಮಾಣಗಳಿಂದ ಅಳತೆಮಾಡಿ


ಅವು ನಾಶವಾಗುವವು; ಆದರೆ ನೀನು ಶಾಶ್ವತವಾಗಿರುತ್ತೀ. ಅವೆಲ್ಲವೂ ವಸ್ತ್ರದಂತೆ ಹಳೆಯವಾಗುವವು. ಉಡುಪಿನಂತೆ ಅವುಗಳನ್ನು ಬದಲಿಸುತ್ತೀ; ಅವು ಮಾರ್ಪಡುವವು.


ಯೆಹೋವನು ಜ್ಞಾನದ ಮೂಲಕ ಭೂವಿುಯನ್ನು ಸ್ಥಾಪಿಸಿ ವಿವೇಕದ ಮುಖಾಂತರ ಆಕಾಶಮಂಡಲವನ್ನು ಸ್ಥಿರಪಡಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು