Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 39:5 - ಕನ್ನಡ ಸತ್ಯವೇದವು J.V. (BSI)

5 ಕಾಡುಕತ್ತೆಯನ್ನು ಸ್ವತಂತ್ರವಾಗಿರುವಂತೆ ಯಾರು ಕಳುಹಿಸಿಬಿಟ್ಟರು? ಅದರ ಕಟ್ಟನ್ನು ಬಿಚ್ಚಿದವರು ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಕಾಡುಕತ್ತೆಯನ್ನು ಸ್ವತಂತ್ರವಾಗಿರುವಂತೆ ಯಾರು ಕಳುಹಿಸಿಬಿಟ್ಟರು? ಅದರ ಕಟ್ಟನ್ನು ಬಿಚ್ಚಿದವರು ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಕಾಡುಕತ್ತೆಗೆ ಸ್ವಾತಂತ್ರ್ಯವನು ಕೊಟ್ಟವರಾರು? ಅದರ ಕಟ್ಟನು ಬಿಚ್ಚಿದವರಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 “ಯೋಬನೇ, ಸ್ವತಂತ್ರವಾಗಿರುವಂತೆ ಕಾಡುಕತ್ತೆಗಳನ್ನು ಕಳುಹಿಸಿದವರು ಯಾರು? ಅವುಗಳ ಹಗ್ಗಗಳನ್ನು ಬಿಚ್ಚಿ, ಅವುಗಳನ್ನು ಬಿಟ್ಟುಬಿಟ್ಟವರು ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 “ಕಾಡುಕತ್ತೆಗೆ ಸ್ವತಂತ್ರವನ್ನು ಕೊಟ್ಟವರು ಯಾರು? ಕಾಡುಕತ್ತೆಯ ಕಟ್ಟನ್ನು ಬಿಚ್ಚಿದವರು ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 39:5
13 ತಿಳಿವುಗಳ ಹೋಲಿಕೆ  

ಇಗೋ, ಅಡವಿಯಲ್ಲಿ ಕಾಡುಕತ್ತೆಗಳು ಹೇಗೋ ಹಾಗೆಯೇ ಇವರು ತಮ್ಮ ಹೊಟ್ಟೇಪಾಡಿಗಾಗಿ ಹೊರಟು ಕೂಳನ್ನು ಆತುರವಾಗಿ ಹುಡುಕುವರು; ಅರಣ್ಯವೇ ಇವರ ಮಕ್ಕಳಿಗಾಗಿ ಕೂಳನ್ನು ಒದಗಿಸುವದು.


ಕಾಡುಕತ್ತೆಯ ಮರಿಗೆ ನರಜನ್ಮವಾದರೆ ಜಳ್ಳುಮನುಷ್ಯನು ಬುದ್ಧಿಯನ್ನು ಪಡೆದಾನು.


ಕಾಡುಕತ್ತೆಗೆ ಹುಲ್ಲಿರಲು ಅರಚೀತೇ, ಎತ್ತಿಗೆ ಮೇವಿರಲು ಕೂಗೀತೇ?


ಅವು ಅಡವಿಯ ಮೃಗಗಳಿಗೆ ನೀರು ಕೊಡುತ್ತವೆ; ಕಾಡುಕತ್ತೆಗಳು ದಾಹತೀರಿಸಿಕೊಳ್ಳುತ್ತವೆ.


ಅದು ಒಂಟಿಯಾದ ಕಾಡುಕತ್ತೆಯಂತೆ ಮನಸ್ಸು ಬಂದ ಹಾಗೆ ನಡೆದು ಅಶ್ಶೂರಕ್ಕೆ ಹೋಗಿದೆ; ಎಫ್ರಾಯೀಮು ಹಣತೆತ್ತು ವಿುಂಡರನ್ನು ಸಂಪಾದಿಸಿಕೊಂಡಿದೆ.


ಅವನು ನರಜಾತಿಯವರೊಳಗಿಂದ ನೂಕಲ್ಪಟ್ಟನು, ಅವನ ಬುದ್ಧಿಯು ಮೃಗಬುದ್ಧಿಯಂತಾಯಿತು, ಕಾಡುಕತ್ತೆಗಳೊಂದಿಗೆ ವಾಸಿಸಿದನು; ಪರಾತ್ಪರನಾದ ದೇವರು ಮನುಷ್ಯರ ರಾಜ್ಯದಲ್ಲಿ ರಾಜನಾಗಿ ಅವರ ಮೇಲೆ ತನಗೆ ಬೇಕಾದವರನ್ನು ನೇವಿುಸುತ್ತಾನೆ ಎಂಬುದು ಅವನಿಗೆ ತಿಳಿದುಬರುವ ತನಕ ದನಗಳಂತೆ ಹುಲ್ಲು ಮೇಯುವದೇ ಅವನ ಗತಿಯಾಯಿತು, ಆಕಾಶದ ಇಬ್ಬನಿಯು ಅವನ ಮೈಯನ್ನು ತೋಯಿಸುತ್ತಿತ್ತು.


ಕಾಡುಕತ್ತೆಗಳು ಬೋಳುಗುಡ್ಡಗಳಲ್ಲಿ ನಿಂತುಕೊಂಡು ನರಿಗಳಂತೆ ಅಸುರುಸುರಾಗುತ್ತಾ ಗಾಳಿಯನ್ನು ಹಾರೈಸುತ್ತವೆ, ಸೊಪ್ಪುಸದೆಯಿಲ್ಲದೆ ಕಂಗೆಡುತ್ತವೆ.


ಅಡವಿಯಲ್ಲಿ ಪಳಗಿದ್ದು ಮದದಿಂದ ಗಾಳಿಯನ್ನು ಬುಸುಬುಸನೆ ಮೂಸಿನೋಡುವ ಹೆಣ್ಣು ಕಾಡುಕತ್ತೆಯ ಹಾಗಿದ್ದೀ; ಅದಕ್ಕೆ ಬೆದೆ ಏರಿದಾಗ ಯಾವ ಗಂಡುಕತ್ತೆಯು ನೂಕಿಬಿಟ್ಟೀತು? ಆಯಾ ತಿಂಗಳಿನಲ್ಲಿ ಅದನ್ನು ಹುಡುಕುವವುಗಳೆಲ್ಲಾ ಆಯಾಸಗೊಳ್ಳದೆ ಅದನ್ನು ದೊರಕಿಸಿಕೊಳ್ಳುವವು.


ಅರಮನೆಯು ಬಿಕೋ ಎನ್ನುವದು, ಗಿಜಿಗುಟ್ಟುವ ಪಟ್ಟಣವು ನಿರ್ಜನವಾಗುವದು, ಓಫೆಲ್ ಗುಡ್ಡವೂ ಕೋವರವೂ ಯಾವಾಗಲೂ ಗುಹೆಗಳಾಗಿಯೂ ಕಾಡುಕತ್ತೆಗಳಿಗೆ ಉಲ್ಲಾಸಕರವಾಗಿಯೂ ದನಕುರಿಗಳಿಗೆ ಕಾವಲಾಗಿಯೂ ಇರುವವು.


ಇಸ್ಸಾಕಾರನು ಕುರೀಹಟ್ಟಿಗಳ ನಡುವೆ ಮಲಗಿಕೊಂಡಿರುವ ಬಲವುಳ್ಳ ಕತ್ತೆಯಂತಿರುವನು.


ಅವನು ಕಾಡುಗತ್ತೆಯಂತೆ ಇರುವನು. ಅವನು ಎಲ್ಲರ ಮೇಲೆ ಕೈಯೆತ್ತುವನು; ಹಾಗೆಯೇ ಅವನ ಮೇಲೆ ಎಲ್ಲರೂ ಕೈಯೆತ್ತುವರು. ತನ್ನ ಅಣ್ಣತಮ್ಮಂದಿರ ಎದುರುಗಡೆಯೇ ವಾಸವಾಗಿರುವನು ಎಂದು ಹೇಳಿ ಹೋದನು.


ಅವುಗಳ ಮರಿಗಳು ಪುಷ್ಟಿಯಾಗಿ ಬಯಲಿನಲ್ಲಿ ಬೆಳೆದು ಅಗಲಿದ ಮೇಲೆ ತಾಯಿಯ ಬಳಿಗೆ ಪುನಃ ಸೇರುವದೇ ಇಲ್ಲ.


ನೇಗಿಲಸಾಲಿಗೆ ತಪ್ಪದಂತೆ ಅದನ್ನು ಹಗ್ಗದಿಂದ ಕಟ್ಟುವಿಯಾ? ಅದು ತಗ್ಗಿನ ಭೂವಿುಯಲ್ಲಿ ನಿನ್ನನ್ನು ಹಿಂಬಾಲಿಸಿ ಕುಂಟೆ ಎಳೆಯುವದೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು