Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 4:19 - ಕನ್ನಡ ಸತ್ಯವೇದವು J.V. (BSI)

19 ದೂಳಿನಲ್ಲಿರುವ ಅಸ್ತಿವಾರದ ಮೇಲೆ ಮಣ್ಣಿನಿಂದಾದ [ಶರೀರಗಳೆಂಬ] ಮನೆಗಳೊಳಗೆ ವಾಸಿಸುವವರಲ್ಲಿ ಇನ್ನೆಷ್ಟೋ ಹೆಚ್ಚಾಗಿ ತಪ್ಪುಕಂಡುಹಿಡಿಯಬೇಕಲ್ಲವೇ. ಅವರು ದೀಪದ ಹುಳದಂತೆ ಅಳಿದು ಹೋಗುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಧೂಳಿನಲ್ಲಿರುವ ಅಸ್ತಿವಾರದ ಮೇಲೆ, ಮಣ್ಣಿನಿಂದಾದ ಶರೀರಗಳೆಂಬ ಮನೆಗಳೊಳಗೆ ವಾಸಿಸುವವರಲ್ಲಿ ಇನ್ನೆಷ್ಟೋ ಹೆಚ್ಚಾಗಿ ತಪ್ಪು ಕಂಡುಹಿಡಿಯಬಹುದು. ಅವರು ದೀಪದ ಹುಳದಂತೆ ಅಳಿದು ಹೋಗುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಇಂತಿರಲು ದೂಳಿನಲ್ಲಿ ತಳವೂರಿ, ಮಣ್ಣಿನೊಡಲ ಹೊಕ್ಕು ಬಾಳಿ ಹುಳುವಿನಷ್ಟು ಸುಲಭವಾಗಿ ಅಳಿದುಹೋಗುವವರಲ್ಲಿ ಮತ್ತೆಷ್ಟು ತಪ್ಪೆಣಿಸಲಾರನಾತ ಅಂಥ ನರಮಾನವರಲ್ಲಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಹೀಗಿರಲು ದೇವರು ಮನುಷ್ಯರಲ್ಲಿ ಎಷ್ಟೋ ತಪ್ಪುಗಳನ್ನು ಕಂಡುಹಿಡಿಯುವನು; ಮನುಷ್ಯರು ಮಣ್ಣಿನ ಮನೆಗಳಲ್ಲಿ ವಾಸಿಸುತ್ತಾರೆ. ಈ ಮಣ್ಣಿನ ಮನೆಗಳ ಅಸ್ತಿವಾರಗಳು ಧೂಳಿನಲ್ಲಿವೆ. ಅವರು ಹುಳಕ್ಕಿಂತಲೂ ಸುಲಭವಾಗಿ ಸಾವಿಗೀಡಾಗುವರು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಧೂಳಿನಲ್ಲಿರುವ ಅಸ್ತಿವಾರದ ಮೇಲೆ ಮಣ್ಣಿನ ಮನೆಗಳ ನಿವಾಸಿಗಳು, ನುಸಿಗಿಂತಲೂ ಹೆಚ್ಚಾಗಿ ಜಜ್ಜಿಹೋದವರು, ಇನ್ನೂ ಹೆಚ್ಚಾಗಿ ದಂಡನೆಗೆ ಒಳಪಡುವರಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 4:19
18 ತಿಳಿವುಗಳ ಹೋಲಿಕೆ  

ನೀನು ನನ್ನನ್ನು ಜೇಡಿಮಣ್ಣಿನಿಂದಲೋ ಎಂಬಂತೆ ರೂಪಿಸಿದ್ದೀಯೆಂದು ಕೃಪೆಮಾಡಿ ನೆನಸಿಕೋ. ನನ್ನನ್ನು ತಿರಿಗಿ ಮಣ್ಣಾಗುವಂತೆ ಮಾಡುವಿಯಾ?


ಹೀಗಿರಲು ಯೆಹೋವದೇವರು ನೆಲದ ಮಣ್ಣಿನಿಂದ ಮನುಷ್ಯನನ್ನು ರೂಪಿಸಿ ಅವನ ಮೂಗಿನಲ್ಲಿ ಜೀವಶ್ವಾಸವನ್ನು ಊದಿದನು; ಆಗ ಮನುಷ್ಯನು ಬದುಕುವ ಪ್ರಾಣಿಯಾದನು.


ನೋಡು, ನಾನೂ ಜೇಡಿಮಣ್ಣಿನಿಂದ ರೂಪಿಸಲ್ಪಟ್ಟು ದೇವರ ದೃಷ್ಟಿಯಲ್ಲಿ ನಿನ್ನ ಹಾಗೆಯೇ ಇದ್ದೇನೆ.


ನೀನು ತಿರಿಗಿ ಮಣ್ಣಿಗೆ ಸೇರುವತನಕ ಬೆವರಿಡುತ್ತಾ ಬೇಕಾದ ಆಹಾರವನ್ನು ಸಂಪಾದಿಸಬೇಕು. ನೀನು ಮಣ್ಣಿನಿಂದ ತೆಗೆಯಲ್ಪಟ್ಟವನಲ್ಲವೋ; ನೀನು ಮಣ್ಣೇ; ಪುನಃ ಮಣ್ಣಿಗೆ ಸೇರತಕ್ಕವನಾಗಿದ್ದೀ ಎಂದು ಹೇಳಿದನು.


ಬಲಾಧಿಕ್ಯವು ದೇವರದೇ ಹೊರತು ನಮ್ಮೊಳಗಿಂದ ಬಂದದ್ದಲ್ಲವೆಂದು ತೋರುವದಕ್ಕಾಗಿ ಈ ನಿಕ್ಷೇಪವು ಮಣ್ಣಿನ ಘಟಗಳಲ್ಲಿ ನಮಗುಂಟು.


ನೀನು ನರನನ್ನು ಪಾಪದ ನಿವಿುತ್ತ ಗದರಿಸಿ ಶಿಕ್ಷಿಸುವಾಗ ಅವನ ಚೆಲುವಿಕೆಯು ನುಸಿಹತ್ತಿತೋ ಎಂಬಂತೆ ಹಾಳಾಗಿ ಹೋಗುತ್ತದೆ. ಮನುಷ್ಯನೆಂಬವನು ಬರೀ ಉಸಿರೇ. ಸೆಲಾ.


ಕೊಳೆಯುವ ಪದಾರ್ಥದಂತೆಯೂ ನುಸಿ ಹಿಡಿದ ಬಟ್ಟೆಯ ಹಾಗೂ ಕ್ಷಯಿಸಿಹೋಗುತ್ತಿದ್ದೇನೆ.


ನಿಮ್ಮ ಸ್ಮೃತಿಗಳು ಬೂದಿಯ ಸಾಮತಿಗಳು; ನಿಮ್ಮ ಕೋಟೆಯು ಬರೀ ಮಣ್ಣಿನದೇ.


ಅದಕ್ಕೆ ಅಬ್ರಹಾಮನು - ಇಗೋ, ಮಣ್ಣೂ ಬೂದಿಯೂ ಆಗಿರುವ ನಾನು ಸ್ವಾವಿುಯ ಸಂಗಡ ವಾದಿಸುವದಕ್ಕೆ ಧೈರ್ಯಗೊಂಡಿದ್ದೇನೆ;


ನರಜಾತಿಯೆಲ್ಲಾ ಹುಲ್ಲಿನ ಹಾಗಿದೆ, ಅದರ ಪ್ರಭಾವವೆಲ್ಲಾ ಹುಲ್ಲಿನ ಹೂವಿನಂತದೆ. ಹುಲ್ಲು ಒಣಗಿಹೋಗುವದು, ಹೂವು ಉದುರಿಹೋಗುವದು;


ಭೂವಿುಯ ಮೇಲಿರುವ ನಮ್ಮ ಮನೆಯು ಅಂದರೆ ನಮ್ಮ ದೇಹವೆಂಬ ಗುಡಾರವು ಕಿತ್ತುಹಾಕಲ್ಪಟ್ಟರೂ ದೇವರಿಂದುಂಟಾದ ಒಂದು ಕಟ್ಟಡವು ಪರಲೋಕದಲ್ಲಿ ನಮಗುಂಟೆಂದು ಬಲ್ಲೆವು. ಅದು ಕೈಯಿಂದ ಕಟ್ಟಿದ ಮನೆಯಾಗಿರದೆ ನಿತ್ಯವಾಗಿರುವಂಥದಾಗಿದೆ.


ಮಣ್ಣು ಭೂವಿುಗೆ ಸೇರಿ ಇದ್ದ ಹಾಗಾಗುವದು; ಆತ್ಮವು ತನ್ನನ್ನು ದಯಪಾಲಿಸಿದ ದೇವರ ಬಳಿಗೆ ಸೇರುವದು; ಇಷ್ಟರೊಳಗಾಗಿ [ನಿನ್ನ ಸೃಷ್ಟಿಕರ್ತನನ್ನು ಸ್ಮರಿಸದಿರಬೇಡ.]


ಅವನ ಉಸಿರು ಹೋಗಲು ಮಣ್ಣಿಗೆ ಸೇರುತ್ತಾನೆ; ಅವನ ಸಂಕಲ್ಪಗಳೆಲ್ಲಾ ಅದೇ ದಿನದಲ್ಲಿ ಹಾಳಾಗುವವು.


ಅಕಾಲಮರಣವು ಅವರನ್ನು ಅಪಹರಿಸಿತು, ಅವರಿಗೆ ಆಧಾರವಾಗಿದ್ದ ನೆಲವು ನೀರಾಗಿ ಹರಿಯಿತು.


ಹೂವಿನ ಹಾಗೆ ಅರಳಿ ಬಾಡುವನು, ನೆರಳಿನಂತೆ ನಿಲ್ಲದೆ ಓಡಿಹೋಗುವನು.


ಹೀಗಿರುವಲ್ಲಿ ನರಹುಳವು ಎಷ್ಟೋ ಅಶುದ್ಧವು! ನರಕ್ರಿವಿುಯು ಎಷ್ಟೋ ಅಪವಿತ್ರವು!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು