Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 4:21 - ಕನ್ನಡ ಸತ್ಯವೇದವು J.V. (BSI)

21 ಅವರ ಗುಡಾರದ ಹಗ್ಗವು ಬಿಚ್ಚಿ ಹೋಗುವದಷ್ಟೆ, ಜ್ಞಾನವಿಲ್ಲದವರಾಗಿ ಸಾಯುವರು ಎಂಬದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಅವರ ಗುಡಾರದ ಹಗ್ಗವು ಬಿಚ್ಚಿಹೋಗುವುದಷ್ಟೆ. ಅವರು ಜ್ಞಾನವಿಲ್ಲದವರಾಗಿ ಸಾಯುವರು” ಎಂಬುದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಅವರ ಗುಡಾರದ ಗೂಟವನ್ನು ಕೀಳಲಾಗುವುದು ಬುದ್ಧಿಹೀನರಾಗಿಯೆ ಅವರು ಸತ್ತುಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಅವರ ಗುಡಾರಗಳ ಹಗ್ಗಗಳು ಬಿಚ್ಚಲ್ಪಡುವವು, ಅವರು ಜ್ಞಾನವಿಲ್ಲದವರಾಗಿ ಸತ್ತುಹೋಗುವರು.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಅವರ ಗುಡಾರದ ಹಗ್ಗವು ಬಿಚ್ಚಿಹೋಗುವುದು, ಅವರು ಜ್ಞಾನವಿಲ್ಲದೆ ಸಾಯುವರು.’

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 4:21
15 ತಿಳಿವುಗಳ ಹೋಲಿಕೆ  

ಕೇಳದಿದ್ದರೆ ದೈವಾಸ್ತ್ರದಿಂದ ಅಳಿದು ಹೋಗುವರು, ಜ್ಞಾನಹೀನರಾಗಿಯೇ ಪ್ರಾಣಬಿಡುವರು.


ನಿನ್ನ ಹಗೆಗಳನ್ನು ಅವಮಾನವು ಮುಸುಕುವದು; ದುಷ್ಟರ ನಿವಾಸವು ನಿರ್ಮೂಲವಾಗುವದು ಅಂದನು.


ಸೂರ್ಯನು ಉದಯಿಸಿ ಉಷ್ಣವಾದ ಗಾಳಿ ಬೀಸಿ ಹುಲ್ಲನ್ನು ಬಾಡಿಸಲು ಆ ಹುಲ್ಲಿನ ಹೂವು ಉದುರಿ ಅದರ ರೂಪದ ಸೊಗಸು ಕೆಡುವದಷ್ಟೆ. ಹೀಗೆಯೇ ಐಶ್ವರ್ಯವಂತನು ತನ್ನ ವ್ಯವಹಾರಗಳಲ್ಲಿಯೇ ಕುಂದಿಹೋಗುವನು.


ಆದರೆ ದೇವರು ಅವನಿಗೆ - ಬುದ್ಧಿಹೀನನು ನೀನು! ಈ ಹೊತ್ತು ರಾತ್ರಿ ನಿನ್ನ ಪ್ರಾಣವನ್ನು ನಿನ್ನ ಕಡೆಯಿಂದ ಕೇಳುವರು; ಆಗ ನೀನು ಸಿದ್ಧಮಾಡಿಟ್ಟಿರುವದು ಯಾರಿಗಾಗುವದು ಎಂದು ಹೇಳಿದನು.


ನಿನ್ನನ್ನು ಕಂಡವರು ದಿಟ್ಟಿಸಿ ನೋಡಿ ಯೋಚಿಸುತ್ತಾ - ಭೂವಿುಯನ್ನು ನಡುಗಿಸಿ ರಾಜ್ಯಗಳನ್ನು ಕದಲಿಸಿ


ಉಸಿರು ಮೂಗಿನಲ್ಲಿರುವ ತನಕ ಬದುಕುವ ನರಮನುಷ್ಯನನ್ನು ಬಿಟ್ಟುಬಿಡಿರಿ; ಅವನು ಯಾವ ಗಣನೆಗೆ ಬಂದಾನು?


ವಿವೇಕಹೀನ ಮನುಷ್ಯನು ಎಷ್ಟು ಘನವಾದ ಪದವಿಯಲ್ಲಿದ್ದರೂ ಪಶುಗಳಂತೆಯೇ ಇಲ್ಲವಾಗುತ್ತಾನೆ.


ಅವರು ಕುರಿಗಳಂತೆ ಪಾತಾಳದಲ್ಲಿ ದಟ್ಟವಾಗಿ ಸೇರಿಸಲ್ಪಡುವರು; ಮೃತ್ಯುವೇ ಅವರ ಪಾಲಕನು. ಅವರಿಗೆ ನಿವಾಸವಿಲ್ಲದ ಹಾಗೆ ಪಾತಾಳವು ಅವರ ರೂಪವನ್ನು ನಾಶಮಾಡುವದು; ಉದಯಕಾಲದಲ್ಲಿ ಯಥಾರ್ಥರು ಅವರ ಮೇಲೆ ದೊರೆತನ ನಡಿಸುವರು.


ನೀನು ನರನನ್ನು ಪಾಪದ ನಿವಿುತ್ತ ಗದರಿಸಿ ಶಿಕ್ಷಿಸುವಾಗ ಅವನ ಚೆಲುವಿಕೆಯು ನುಸಿಹತ್ತಿತೋ ಎಂಬಂತೆ ಹಾಳಾಗಿ ಹೋಗುತ್ತದೆ. ಮನುಷ್ಯನೆಂಬವನು ಬರೀ ಉಸಿರೇ. ಸೆಲಾ.


ನನ್ನ ಆಯುಸ್ಸನ್ನು ಗೇಣುದ್ದವಾಗಿ ಮಾಡಿದ್ದೀಯಲ್ಲಾ; ನನ್ನ ಜೀವಿತಕಾಲ ನಿನ್ನ ಎಣಿಕೆಯಲ್ಲಿ ಏನೂ ಅಲ್ಲ ಅಂದೆನು. ಮನುಷ್ಯನೆಂಬವನು ಎಷ್ಟು ಸ್ಥಿರನೆಂದು ಕಂಡರೂ ಬರೀ ಉಸಿರೇ. ಸೆಲಾ.


ಕೆಡುಕರ ನಿವಾಸಗಳ ಅವಸ್ಥೆಯು ಇಂಥದೇ. ದೇವರನ್ನು ಲಕ್ಷಿಸದವನ ಸ್ಥಿತಿಯು ಹೀಗೆಯೇ ಸರಿ.


ಸದುಪದೇಶದ ಕೊರತೆಯಿಂದಲೇ ಸಾಯುವನು, ತನ್ನ ಅತಿಮೂರ್ಖತನದಿಂದ ಭ್ರಾಂತನಾಗುವನು.


ವೃದ್ಧರೇ ಜ್ಞಾನಿಗಳಲ್ಲ, ಮುದುಕರು ಮಾತ್ರ ನ್ಯಾಯಬಲ್ಲವರಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು