Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 40:21 - ಕನ್ನಡ ಸತ್ಯವೇದವು J.V. (BSI)

21 ಎಲಚಿ ಗಿಡಗಳ ಕೆಳಗೂ ಆಪಿನ ಮರೆಯಲ್ಲಿಯೂ ಜವುಗು ಭೂವಿುಯಲ್ಲಿಯೂ ಮಲಗಿಕೊಳ್ಳುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ತಾವರೆಯ ಗಿಡಗಳ ಕೆಳಗೂ, ಆಪಿನ ಮರೆಯಲ್ಲಿಯೂ, ಜವುಗು ಭೂಮಿಯಲ್ಲಿಯೂ ಮಲಗಿಕೊಳ್ಳುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಅದು ಮಲಗುತ್ತದೆ ತಾವರೆ ಗಿಡಗಳಡಿಯಲಿ ವಿಶ್ರಮಿಸುತ್ತದೆ ಆಪಿನ ಮರೆಯಲಿ, ಕೆಸರು ಭೂಮಿಯಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಅದು ತಾವರೆ ಗಿಡಗಳ ಕೆಳಗೆ ಮಲಗಿಕೊಳ್ಳುತ್ತದೆ; ಕೊಳಚೆಯಲ್ಲಿರುವ ಅವುಗಳ ನಡುವೆ ಅಡಗಿಕೊಳ್ಳುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ನೀರಾನೆಯು ತಾವರೆ ಗಿಡಗಳಡಿಯಲ್ಲಿಯೂ ಆಪಿನ ಮರೆಯಲ್ಲಿಯೂ, ಜವುಗು ಭೂಮಿಯಲ್ಲಿಯೂ ವಿಶ್ರಮಿಸಿಕೊಳ್ಳುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 40:21
6 ತಿಳಿವುಗಳ ಹೋಲಿಕೆ  

ಬೆಂಗಾಡು ಸರೋವರವಾಗುವದು; ಒಣನೆಲದಲ್ಲಿ ಬುಗ್ಗೆಗಳುಕ್ಕುವವು; ನರಿಗಳು ಮಲಗುತ್ತಿದ್ದ ಹಕ್ಕೆಯು ಆಪುಜಂಬುಗಳ ಪ್ರದೇಶವಾಗುವದು.


ಅಷ್ಟರಲ್ಲಿ ಲಕ್ಷಣವಾದ ಏಳು ಕೊಬ್ಬಿದ ಆಕಳುಗಳು ಆ ನದಿಯೊಳಗಿಂದ ಬಂದು ಆಪುಹುಲ್ಲಿನಲ್ಲಿ ಮೇಯುತ್ತಿದ್ದವು.


ಗುಡ್ಡಗಳು ಅದಕ್ಕೆ ಮೇವನ್ನು ಕೊಡುವವು; ಕಾಡುಮೃಗಗಳೆಲ್ಲಾ ಅಲ್ಲಿ ಆಡುತ್ತಿರುವವು;


ಎಲಚಿ ಗಿಡಗಳು ತಮ್ಮ ನೆರಳನ್ನು ಅದರ ಮೇಲೆ ಹರಡುವವು, ನದಿಯ ನೀರವಂಜಿಗಳು ಅದನ್ನು ಸುತ್ತಿಕೊಂಡಿರುವವು.


ಆಪಿನೊಳಗೆ ವಾಸಿಸುವ ನೀರಾನೆ, ಕರುಗಳ ಸಹಿತವಾದ ಹೋರಿಗಳ ಗುಂಪು, ಇವುಗಳಂತಿರುವ ಶತ್ರುಜನಾಂಗಗಳನ್ನು ಬೆದರಿಸು. ಅವು ಬೆಳ್ಳೀಗಟ್ಟಿಗಳನ್ನು ತಂದು ನಿನಗೆ ಅಡ್ಡಬೀಳಲಿ. ಯುದ್ಧಾಸಕ್ತ ಜನಾಂಗಗಳನ್ನು ಚದರಿಸಿಬಿಡು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು