Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 40:9 - ಕನ್ನಡ ಸತ್ಯವೇದವು J.V. (BSI)

9 ನಿನ್ನ ಕೈಯೂ ದೇವರ ಕೈಯೂ ಸಮವೋ? ದೇವರ ಧ್ವನಿಯಂತೆ ಗುಡುಗಬಲ್ಲಿಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನಿನ್ನ ಕೈಯೂ, ದೇವರ ಕೈಯೂ ಸಮವೋ? ದೇವರ ಧ್ವನಿಯಂತೆ ಗುಡುಗಬಲ್ಲಿಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ದೇವರಾದ ನನಗಿರುವಂಥ ಭುಜಬಲ ನಿನಗಿದೆಯೋ? ನನ್ನ ಧ್ವನಿಗೆ ಸಮನಾಗಿ ನೀನು ಗುಡುಗಬಲ್ಲೆಯೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ನಿನ್ನ ತೋಳುಗಳು ನನ್ನ ತೋಳುಗಳಂತೆ ಬಲಿಷ್ಠವಾಗಿವೆಯೋ? ನಿನ್ನ ಸ್ವರವನ್ನು ನನ್ನ ಸ್ವರದಂತೆ ಗಟ್ಟಿಯಾಗಿ ಗುಡುಗುಟ್ಟಿಸಬಲ್ಲೆಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ದೇವರಾದ ನನಗಿರುವ ಭುಜಬಲ ನಿನಗಿದೆಯೋ? ನನ್ನ ಧ್ವನಿಯ ಹಾಗೆ ನೀನು ಗುಡುಗಬಲ್ಲೆಯೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 40:9
18 ತಿಳಿವುಗಳ ಹೋಲಿಕೆ  

ನಿನ್ನ ಭುಜವು ಮಹಾಬಲವುಳ್ಳದ್ದು. ನಿನ್ನ ಹಸ್ತವು ಶಕ್ತಿಯುಳ್ಳದ್ದು; ನಿನ್ನ ಬಲಗೈ ಮಹತ್ತುಗಳನ್ನು ನಡಿಸುತ್ತದೆ.


ಕರ್ತನನ್ನು ರೇಗಿಸಬೇಕೆಂದಿದ್ದೇವೋ? ಆತನಿಗಿಂತಲೂ ನಾವು ಬಲಿಷ್ಠರೇನು?


ಅಯ್ಯೋ, ತನ್ನನ್ನು ರೂಪಿಸಿದಾತನ ಸಂಗಡ ವ್ಯಾಜ್ಯವಾಡುವವನ ಗತಿ ಏನು! ಮಣ್ಣು ಮಡಕೆಗಳಲ್ಲಿ ಅವನೂ ಒಂದು ಮಡಕೆಯಲ್ಲವೆ. ಮಣ್ಣು - ಏನು ಮಾಡುತ್ತೀ ಎಂದು ರೂಪಿಸುವವನನ್ನು ಕೇಳುವದುಂಟೇ? ನಿನ್ನ ಕಾರ್ಯವು [ನಿನ್ನ ವಿಷಯವಾಗಿ] ಅವನಿಗೆ ಕೈಯಿಲ್ಲ ಅಂದೀತೇ?


ರಹಬನ್ನು ಛೇದಿಸಿ ಸಾಯಿಸಿದವನು ನೀನು; ನಿನ್ನ ಭುಜಬಲದಿಂದ ಶತ್ರುಗಳನ್ನು ಚದರಿಸಿಬಿಟ್ಟಿ.


ಯೆಹೋವನ ಮಹಾಧ್ವನಿಯು ಮೇಘಮಂಡಲದಲ್ಲಿ ಕೇಳಿಸುತ್ತದೆ; ಪ್ರಭಾವಸ್ವರೂಪನಾದ ದೇವರು ಗುಡುಗುತ್ತಾನೆ; ಯೆಹೋವನು ಆಕಾಶದ ಜಲರಾಶಿಗಳ ಮೇಲೆ ಇದ್ದಾನೆ.


ಆತನು ತನ್ನ ಮಹಾಶಕ್ತಿಯಿಂದ ನನ್ನ ಸಂಗಡ ವ್ಯಾಜ್ಯವಾಡುವನೋ? ಇಲ್ಲವೇ ಇಲ್ಲ; ನನ್ನ ವಿಜ್ಞಾಪನೆಯನ್ನು ಗಮನಿಸುವನು.


ದೇವರ ಹೃದಯವು ವಿವೇಕವುಳ್ಳದ್ದು, ಆತನ ಶಕ್ತಿಯು ಪ್ರಬಲವಾದದ್ದು; ಆತನಿಗೆ ವಿರುದ್ಧವಾಗಿ ಮನಸ್ಸು ಕಠಿಣಮಾಡಿಕೊಂಡವನು ಸಾರ್ಥಕನಾದದ್ದುಂಟೇ?


ಯೆಹೋವನೇ, ನಿನ್ನ ಭುಜಬಲವು ಎಷ್ಟೋ ಘನವಾದದ್ದು; ಯೆಹೋವನೇ, ನಿನ್ನ ಭುಜಬಲವು ನಿನ್ನ ಶತ್ರುಗಳನ್ನು ಪುಡಿಪುಡಿ ಮಾಡುತ್ತದೆ.


ಬಾಬೆಲೇ, ನಾನು ನಿನಗೆ ಉರುಲೊಡ್ಡಿದೆನು; ನೀನು ತಿಳಿಯದೆ ಸಿಕ್ಕಿಕೊಂಡಿ; ನೀನು ಯೆಹೋವನೊಂದಿಗೆ ಹೋರಾಡಿದ್ದರಿಂದ ಬೋನಿಗೆ ಬಿದ್ದು ವಶವಾದಿ.


ಆಗ ಕೆರೂಬಿಗಳ ರೆಕ್ಕೆಗಳ ಶಬ್ದವು ಸರ್ವಶಕ್ತನಾದ ದೇವರು ಮಾತಾಡುವ ಧ್ವನಿಯಷ್ಟು ಗಂಭೀರವಾಗಿ ಹೊರಗಣ ಪ್ರಾಕಾರದ ಪರ್ಯಂತವೂ ಕೇಳಿಸಿತು.


ಇದರಿಂದ ಭೂನಿವಾಸಿಗಳೆಲ್ಲರೂ ಯೆಹೋವನ ಹಸ್ತವು ಪರಾಕ್ರಮವುಳ್ಳದ್ದೆಂದು ತಿಳಿದುಕೊಳ್ಳುವರು. ನಿಮ್ಮ ದೇವರಾದ ಯೆಹೋವನಿಗೆ ಯಾವಾಗಲೂ ಭಯಪಡುವರು ಅಂದನು.


ಗುಡುಗುಟ್ಟುವ ಆತನ ಧ್ವನಿಗೆ ಕಿವಿಗೊಡಿರಿ, ಆತನ ಬಾಯಿಂದ ಹೊರಡುವ ಮೊಳಗನ್ನು ಕೇಳಿರಿ!


ಯೆಹೋವನ ಧ್ವನಿಯು ಎಷ್ಟೋ ಬಲವುಳ್ಳದ್ದು, ಎಷ್ಟೋ ಗಂಭೀರವಾದದ್ದು.


ಯೆಹೋವನಿಗೆ ಹೊಸ ಕೀರ್ತನೆಯನ್ನು ಹಾಡಿರಿ; ಆತನು ಅದ್ಭುತಕೃತ್ಯಗಳನ್ನು ನಡಿಸಿದ್ದಾನೆ. ಆತನ ಬಲಗೈಯೂ ಪರಿಶುದ್ಧಬಾಹುವೂ ಜಯವನ್ನು ಉಂಟುಮಾಡಿವೆ.


ಯೆಹೋವನು ಸಕಲ ಜನಾಂಗಗಳ ಕಣ್ಣೆದುರಿನಲ್ಲಿ ತನ್ನ ದಿವ್ಯಬಾಹುವನ್ನು ತೆರೆದು ತೋರಿಸಿದ್ದಾನೆ; ಭೂವಿುಯ ಎಲ್ಲಾ ದಿಕ್ಕಿನವರೂ ನಮ್ಮ ದೇವರ ರಕ್ಷಣಕಾರ್ಯವನ್ನು ನೋಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು