Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 41:9 - ಕನ್ನಡ ಸತ್ಯವೇದವು J.V. (BSI)

9 ಆಹಾ, ಅದನ್ನು ಹಿಡಿಯಬೇಕೆಂಬ ನಿರೀಕ್ಷೆಯು ವ್ಯರ್ಥ! ಹಿಡಿಯ ಬಂದವನು ನೋಡಿದ ಮಾತ್ರಕ್ಕೆ ಬಿದ್ದುಹೋಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆಹಾ, ಅದನ್ನು ಹಿಡಿಯಬೇಕೆಂಬ ನಿರೀಕ್ಷೆಯು ವ್ಯರ್ಥ! ಹಿಡಿಯಲು ಬಂದವನು ನೋಡಿದ ಮಾತ್ರಕ್ಕೆ ಬಿದ್ದು ಹೋಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಅದನು ಹಿಡಿಯಬಹುದೆಂಬ ನಂಬಿಕೆ ವ್ಯರ್ಥ ಹಿಡಿಯಬಂದವನು ನೋಡಿದ್ದೇ ಬಿದ್ದುಹೋದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ನೀನು ಅದನ್ನು ಸೋಲಿಸಬಹುದೆಂದು ಯೋಚಿಸಿಕೊಂಡಿದ್ದರೆ, ಇನ್ನಾದರೂ ಅದನ್ನು ಮರೆತುಬಿಡು! ಅದನ್ನು ನೋಡಿದರೇ ನಿನಗೆ ಭಯವಾಗುತ್ತದೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಅದನ್ನು ಹಿಡಿಯಬಹುದೆಂಬ ನಿರೀಕ್ಷೆಯು ವ್ಯರ್ಥವಾದದ್ದು; ಹಿಡಿಯ ಬಂದವನು ನೋಡಿದ ಮಾತ್ರಕ್ಕೆ ಹೆದರಿ ಬಿದ್ದುಹೋಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 41:9
6 ತಿಳಿವುಗಳ ಹೋಲಿಕೆ  

ಮತ್ತು ಮಹಾಭೂಕಂಪಗಳಾಗುವವು; ಅಲ್ಲಲ್ಲಿ ಬರಗಳೂ ಉಪದ್ರವಗಳೂ ಬರುವವು; ಉತ್ಪಾತಗಳೂ ಆಕಾಶದಲ್ಲಿ ಮಹಾ ಸೂಚನೆಗಳೂ ತೋರುವವು.


ಅದು ಹಾದುಹೋಗುವಾಗೆಲ್ಲಾ ನಿಮ್ಮನ್ನು ಹಿಡಿಯುವದು; ಬೆಳಬೆಳಗೂ ಹಗಲುರಾತ್ರಿಯೂ ಅದು ಹಾದುಹೋಗುವದು; ಆಗ ಯೆಹೋವನ ಮಾತನ್ನು ಗ್ರಹಿಸಿಕೊಳ್ಳುವದು ಬರೀ ಭಯವೇ.


ಯೆಹೋವನು ಸಮುವೇಲನಿಗೆ - ನಾನು ಇಸ್ರಾಯೇಲ್ಯರಲ್ಲಿ ಒಂದು ವಿಶೇಷ ಕಾರ್ಯವನ್ನು ನಡಿಸುವೆನು; ಅದರ ವಿಷಯ ಕೇಳುವವರ ಎರಡು ಕಿವಿಗಳೂ ಮೊರ್ರೆನ್ನುವವು.


ನೀವಾದರೋ ಯಾವಾಗಲೂ ಹಿಂಸೆಗೂ ಬಲಾತ್ಕಾರಕ್ಕೂ ಗುರಿಯಾಗಿ ನಿಮ್ಮ ಮುಂದೆ ನಡೆಯುವ ಸಂಗತಿಗಳ ದೆಸೆಯಿಂದ ಹುಚ್ಚರಾಗಿ ಹೋಗುವಿರಿ.


ಅದರ ಮೇಲೆ ಕೈಹಾಕಿ ನೋಡು! ಆ ಜಗಳವನ್ನು ನೆನಸಿಕೊಂಡರೆ ನೀನು ಮತ್ತೆ ಅದನ್ನು ಮುಟ್ಟುವದೇ ಇಲ್ಲ.


ಅದನ್ನು ಕೆಣಕಲು ಧೈರ್ಯಗೊಳ್ಳುವಷ್ಟು ಉಗ್ರತೆಯು ಯಾರಲ್ಲಿಯೂ ಇಲ್ಲ; ಹೀಗಿರಲು ನನ್ನ ಮುಂದೆ ನಿಲ್ಲಬಲ್ಲವರು ಯಾರು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು