ಯೋಬ 42:3 - ಕನ್ನಡ ಸತ್ಯವೇದವು J.V. (BSI)3 ಜ್ಞಾನವಿಲ್ಲದೆ ಸತ್ಯಾಲೋಚನೆಯನ್ನು ಮಂಕುಮಾಡುವ ಇವನು ಯಾರು ಎಂಬ ನಿನ್ನ ಮಾತಿನಂತೆ ನಾನು ತಿಳಿಯದ ಸಂಗತಿಗಳನ್ನೂ ನನಗೆ ಗೊತ್ತಿಲ್ಲದೆ ಬುದ್ಧಿಗೆ ಮೀರಿರುವ ಅದ್ಭುತಗಳನ್ನೂ ಕುರಿತು ಮಾತಾಡಿದ್ದೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ‘ಜ್ಞಾನವಿಲ್ಲದೆ ಸತ್ಯಾಲೋಚನೆಯನ್ನು ಮಂಕುಮಾಡುವ ಇವನು ಯಾರು?’ ಎಂಬ ನಿನ್ನ ಮಾತಿನಂತೆ ನಾನು ತಿಳಿಯದ ಸಂಗತಿಗಳನ್ನೂ, ನನಗೆ ಗೊತ್ತಿಲ್ಲದೆ ಬುದ್ಧಿಗೆ ಮೀರಿರುವ ಅದ್ಭುತಗಳನ್ನೂ ಕುರಿತು ಮಾತನಾಡಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ‘ಅಜ್ಞಾನದ ಮಾತುಗಳನ್ನಾಡುವ ನೀನು ಯಾರು?’ ‘ಸತ್ಯಾಲೋಚನೆಗಳನು ಮಂಕುಮಾಡುವ ನೀನಾರು?’ ಈ ನಿಮ್ಮ ನುಡಿಯಂತೆ ಅರ್ಥಹೀನ ಮಾತುಗಳನು ನಾನಾಡಿದೆ ನನ್ನ ಬುದ್ಧಿಗೆಟುಕದ ಪವಾಡಗಳನ್ನು ಟೀಕಿಸಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಯೆಹೋವನೇ, ‘ಈ ಮೂರ್ಖ ಸಂಗತಿಗಳನ್ನು ಹೇಳುತ್ತಿರುವ ಈ ಮೂಢನು ಯಾರು?’ ಎಂದು ನೀನು ಪ್ರಶ್ನಿಸಿದೆ. ನನಗೆ ಅರ್ಥವಾಗಿಲ್ಲದ ಸಂಗತಿಗಳ ಬಗ್ಗೆಯೂ ನಾನು ತಿಳಿಯಲಾಗದಷ್ಟು ಆಶ್ಚರ್ಯಕರವಾದ ಅದ್ಭುತಕಾರ್ಯಗಳ ಬಗ್ಗೆಯೂ ನಾನು ಮಾತಾಡಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ‘ತಿಳುವಳಿಕೆಯಿಲ್ಲದೆ ನನ್ನ ಯೋಜನೆಯನ್ನು ಮಂಕುಮಾಡುವ ನೀನು ಯಾರು?’ ಎಂದು ತಾವು ಪ್ರಶ್ನಿಸಿದ್ದೀರಿ. ನಿಶ್ಚಯವಾಗಿ, ತಾವು ಹೇಳಿದಂತೆ ನನಗೆ ಅರ್ಥವಾಗದವುಗಳನ್ನು ಮಾತಾಡಿಬಿಟ್ಟೆ, ನನಗೆ ತಿಳಿಯದ ಸಂಗತಿಗಳನ್ನೂ ನನ್ನ ಬುದ್ಧಿಗೆ ಮೀರಿದ ಅದ್ಭುತಗಳನ್ನೂ ಕುರಿತು ಟೀಕಿಸಿಬಿಟ್ಟೆ. ಅಧ್ಯಾಯವನ್ನು ನೋಡಿ |