ಯೋಬ 42:6 - ಕನ್ನಡ ಸತ್ಯವೇದವು J.V. (BSI)6 ಆದಕಾರಣ [ನಾನು ಆಡಿದ್ದನ್ನು] ತಿರಸ್ಕರಿಸಿ ಧೂಳಿಯಲ್ಲಿಯೂ ಬೂದಿಯಲ್ಲಿಯೂ ಕುಳಿತು ಪಶ್ಚಾತ್ತಾಪಪಡುತ್ತೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಆದಕಾರಣ ನಾನು ಆಡಿದ್ದನ್ನು ತಿರಸ್ಕರಿಸಿ ಧೂಳಿನಲ್ಲಿಯೂ, ಬೂದಿಯಲ್ಲಿಯೂ ಕುಳಿತು ಪಶ್ಚಾತ್ತಾಪಪಡುತ್ತೇನೆ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಆದುದರಿಂದ ನಾನು ಹೇಳಿದ್ದೆಲ್ಲಕ್ಕಾಗಿ ವಿಷಾದಿಸುತ್ತೇನೆ ಬೂದಿಯಲು, ಧೂಳಿನಲು ಕುಳಿತು ಪಶ್ಚಾತ್ತಾಪಪಡುತ್ತೇನೆ.” ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಯೆಹೋವನೇ, ನನ್ನ ವಿಷಯದಲ್ಲಿ ನನಗೇ ನಾಚಿಕೆಯಾಗಿದೆ. ನನಗೆ ಎಷ್ಟೋ ದುಃಖವಾಗಿದೆ. ನಾನು ಧೂಳಿನಲ್ಲಿಯೂ ಬೂದಿಯಲ್ಲಿಯೂ ಕುಳಿತುಕೊಳ್ಳುತ್ತೇನೆ. ನನ್ನ ಹೃದಯವನ್ನೂ ಜೀವಿತವನ್ನೂ ಮಾರ್ಪಡಿಸಿಕೊಳ್ಳುವುದಾಗಿ ನಾನು ನಿನಗೆ ವಾಗ್ದಾನ ಮಾಡುತ್ತೇನೆ.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಆದ್ದರಿಂದ ನಾನು ಹೇಳಿದ್ದನ್ನೆಲ್ಲಾ ಹಿಂತೆಗೆದುಕೊಂಡು, ಧೂಳಿನಲ್ಲಿಯೂ ಬೂದಿಯಲ್ಲಿಯೂ ಕುಳಿತು ಪಶ್ಚಾತ್ತಾಪಪಡುತ್ತೇನೆ,” ಎಂದನು. ಅಧ್ಯಾಯವನ್ನು ನೋಡಿ |
ಆಗ ತಪ್ಪಿಸಿಕೊಂಡು ಸೆರೆಗೆ ಒಯ್ಯಲ್ಪಟ್ಟು ಜನಾಂಗಗಳ ಮಧ್ಯೆ ವಾಸಿಸುವ ನಿಮ್ಮವರು ಅನ್ಯದೇವತೆಗಳಲ್ಲಿನ ಮೋಹದಿಂದ ನನ್ನನ್ನು ತೊರೆದ ತಮ್ಮ ಹೃದಯವನ್ನೂ ತಮ್ಮ ಬೊಂಬೆಗಳ ಮೇಲಣ ಕಾಮದಿಂದ ದೇವದ್ರೋಹಮಾಡಿದ ತಮ್ಮ ಕಣ್ಣುಗಳನ್ನೂ ಭಂಗಪಡಿಸಿದವನು ನಾನೇ ಎಂಬದಾಗಿ ನನ್ನನ್ನು ಜ್ಞಾಪಕಮಾಡಿಕೊಂಡು ತಾವು ಬಹಳ ಅಸಹ್ಯಕಾರ್ಯಗಳನ್ನು ನಡಿಸಿ ಕೆಟ್ಟತನವನ್ನು ಮಾಡಿದ್ದೇವೆಂದು ತಮ್ಮನ್ನು ತಾವೇ ಹೇಸಿಕೊಳ್ಳುವರು.