Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 42:8 - ಕನ್ನಡ ಸತ್ಯವೇದವು J.V. (BSI)

8 ಈಗ ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ತೆಗೆದುಕೊಂಡು ನನ್ನ ದಾಸನಾದ ಯೋಬನ ಬಳಿಗೆ ಹೋಗಿ ನಿಮ್ಮ ದೋಷಪರಿಹಾರಕ್ಕಾಗಿ ಹೋಮಮಾಡಿರಿ; ನನ್ನ ದಾಸನಾದ ಯೋಬನು ನಿಮ್ಮ ಪಕ್ಷವಾಗಿ ಪ್ರಾರ್ಥನೆ ಮಾಡುವನು; ನಾನು ಅವನ ವಿಜ್ಞಾಪನೆಯನ್ನು ಲಾಲಿಸಿ ನಿಮ್ಮ ಮೂರ್ಖತನಕ್ಕೆ ತಕ್ಕ ದಂಡನೆಯನ್ನು ನಿಮಗೆ ವಿಧಿಸುವದಿಲ್ಲ. ನನ್ನ ದಾಸನಾದ ಯೋಬನು ನನ್ನ ವಿಷಯವಾಗಿ ಸತ್ಯವನ್ನು ನುಡಿದಂತೆ ನೀವು ನುಡಿಯಲಿಲ್ಲ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಈಗ ಏಳು ಹೋರಿಗಳನ್ನೂ, ಏಳು ಟಗರುಗಳನ್ನೂ ತೆಗೆದುಕೊಂಡು ನನ್ನ ದಾಸನಾದ ಯೋಬನ ಬಳಿಗೆ ಹೋಗಿ ನಿಮ್ಮ ದೋಷಪರಿಹಾರಕ್ಕಾಗಿ ಹೋಮಮಾಡಿರಿ. ನನ್ನ ದಾಸನಾದ ಯೋಬನು ನಿಮ್ಮ ಪರವಾಗಿ ಪ್ರಾರ್ಥನೆ ಮಾಡುವನು. ನಾನು ಅವನ ವಿಜ್ಞಾಪನೆಯನ್ನು ಲಾಲಿಸಿ ನಿಮ್ಮ ಮೂರ್ಖತನಕ್ಕೆ ತಕ್ಕ ದಂಡನೆಯನ್ನು ನಿಮಗೆ ವಿಧಿಸುವುದಿಲ್ಲ. ನನ್ನ ದಾಸನಾದ ಯೋಬನು ನನ್ನ ವಿಷಯವಾಗಿ ಸತ್ಯವನ್ನು ನುಡಿದಂತೆ ನೀವು ನುಡಿಯಲಿಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಆದುದರಿಂದ ನೀವು ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ತೆಗೆದುಕೊಂಡು ನನ್ನ ದಾಸ ಯೋಬನ ಬಳಿಗೆ ಬನ್ನಿರಿ; ನಿಮ್ಮ ದೋಷಪರಿಹಾರಕ್ಕಾಗಿ ದಹನಬಲಿಯನ್ನು ಅರ್ಪಿಸಿರಿ. ನನ್ನ ದಾಸ ಯೋಬ ನಿಮ್ಮ ಪರವಾಗಿ ಪ್ರಾರ್ಥನೆ ಮಾಡುವನು; ನಾನು ಅವನ ವಿಜ್ಞಾಪನೆಯನ್ನು ಆಲಿಸಿ ನಿಮ್ಮ ನಿಮ್ಮ ಮೂರ್ಖತನಕ್ಕೆ ತಕ್ಕ ದಂಡನೆಯನ್ನು ವಿಧಿಸುವುದಿಲ್ಲ. ನನ್ನ ದಾಸ ಯೋಬನು ನನ್ನ ವಿಷಯದಲ್ಲಿ ಸತ್ಯವನ್ನು ನುಡಿದಂತೆ ನೀವು ನುಡಿಯಲಿಲ್ಲ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆದ್ದರಿಂದ, ಈಗ ನೀವು (ಮೂವರು) ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ತೆಗೆದುಕೊಂಡು ನನ್ನ ಸೇವಕನಾದ ಯೋಬನ ಬಳಿಗೆ ಹೋಗಿ ಅವುಗಳನ್ನು ನಿಮಗೋಸ್ಕರ ದೋಷಪರಿಹಾರಕಯಜ್ಞ ಮಾಡಿರಿ. ನನ್ನ ಸೇವಕನಾದ ಯೋಬನು ನಿಮಗೋಸ್ಕರ ಪ್ರಾರ್ಥಿಸುವನು. ಆಗ ನಾನು ಅವನ ಪ್ರಾರ್ಥನೆಗೆ ಖಂಡಿತವಾಗಿ ಉತ್ತರಿಸುವೆನು; ನಿಮ್ಮ ಮೂರ್ಖತನಕ್ಕೆ ಬರಬೇಕಾಗಿದ್ದ ದಂಡನೆಯನ್ನು ಮನ್ನಿಸುವೆನು. ನೀವು ನನ್ನ ಬಗ್ಗೆ ಹೇಳಿದವುಗಳು ಸತ್ಯವಲ್ಲ; ಆದರೆ ನನ್ನ ಸೇವಕನಾದ ಯೋಬನು ಹೇಳಿದವುಗಳು ಸತ್ಯವಾಗಿವೆ.” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆದುದರಿಂದ ಈಗ ನೀವು ಏಳು ಹೋರಿಗಳನ್ನು, ಏಳು ಟಗರುಗಳನ್ನು ತೆಗೆದುಕೊಂಡು ನನ್ನ ದಾಸನಾದ ಯೋಬನ ಬಳಿಗೆ ಬನ್ನಿರಿ. ನಿಮ್ಮ ದೋಷಪರಿಹಾರಕ್ಕಾಗಿ ದಹನಬಲಿಯನ್ನು ಅರ್ಪಿಸಿರಿ; ನನ್ನ ದಾಸನಾದ ಯೋಬನು ನಿಮ್ಮ ಪರವಾಗಿ ಪ್ರಾರ್ಥನೆಮಾಡುವನು. ನಾನು ನಿಮ್ಮ ಬುದ್ಧಿಹೀನತೆಯ ಪ್ರಕಾರ ದಂಡಿಸದಂತೆ, ಅವನ ಪ್ರಾರ್ಥನೆಯನ್ನು ಸ್ವೀಕರಿಸುವೆನು. ನೀವು ನನ್ನ ದಾಸನಾದ ಯೋಬನಂತೆ ನನ್ನ ವಿಷಯವಾಗಿ ಸತ್ಯವನ್ನು ಆಡಲಿಲ್ಲ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 42:8
33 ತಿಳಿವುಗಳ ಹೋಲಿಕೆ  

ಆಗ ಬಿಳಾಮನು - ಇಲ್ಲಿ ನೀನು ಏಳು ಯಜ್ಞಪೀಠಗಳನ್ನು ಕಟ್ಟಿಸಿ ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ಸಿದ್ಧಪಡಿಸಬೇಕೆಂದು ಬಾಲಾಕನಿಗೆ ಹೇಳಿದನು.


ಹೀಗಿರಲು ನೀವು ಸ್ವಸ್ಥವಾಗಬೇಕಾದರೆ ನಿಮ್ಮ ಪಾಪಗಳನ್ನು ಒಬ್ಬರಿಗೊಬ್ಬರು ಅರಿಕೆ ಮಾಡಿ ಒಬ್ಬರಿಗೋಸ್ಕರ ಒಬ್ಬರು ದೇವರನ್ನು ಪ್ರಾರ್ಥಿಸಿರಿ; ನೀತಿವಂತನ ಅತ್ಯಾಸಕ್ತಿಯುಳ್ಳ ವಿಜ್ಞಾಪನೆಯು ಬಹು ಬಲವಾಗಿದೆ.


ಉತ್ಸವದಿಂದ ತರುತ್ತಿರುವಾಗ ಅದನ್ನು ಹೊತ್ತ ಲೇವಿಯರಿಗೆ ದೇವರ ಸಹಾಯ ದೊರೆತದರಿಂದ ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ಯಜ್ಞಮಾಡಿದರು.


ಆತನು ನಮ್ಮ ಪಾಪಗಳಿಗೆ ಸರಿಯಾಗಿ ನಮ್ಮನ್ನು ಶಿಕ್ಷಿಸಲಿಲ್ಲ; ನಮ್ಮ ಅಪರಾಧಗಳಿಗೆ ತಕ್ಕಂತೆ ದಂಡಿಸಲಿಲ್ಲ.


ನಿರ್ದೋಷಿಯಲ್ಲದವನನ್ನೂ ತಪ್ಪಿಸುವನು, ಹೌದು, ಆತನು ಇಂಥವನನ್ನು ತಪ್ಪಿಸುವದಕ್ಕೆ ನಿನ್ನ ಕೈಗಳ ಪರಿಶುದ್ಧತೆಯೇ ಕಾರಣವಾಗಿರುವದು.


ನೋಹ ದಾನಿಯೇಲ ಯೋಬ ಎಂಬೀ ಮೂವರು ಪುರುಷರು ಅದರಲ್ಲಿದ್ದರೂ ತಮ್ಮ ಸದಾಚಾರದಿಂದ ಸ್ವಂತಪ್ರಾಣಗಳನ್ನು ಮಾತ್ರ ಉಳಿಸಿಕೊಳ್ಳುತ್ತಿದ್ದರು; ಇದು ಕರ್ತನಾದ ಯೆಹೋವನ ನುಡಿ.


ತರುವಾಯ ಅಬ್ರಹಾಮನು ದೇವರನ್ನು ಬೇಡಿಕೊಳ್ಳಲು ದೇವರು ಅಬೀಮೆಲೆಕನನ್ನೂ ಅವನ ಪತ್ನಿಯನ್ನೂ ದಾಸಿಯರನ್ನೂ ವಾಸಿಮಾಡಿದ್ದರಿಂದ ಅವರಿಗೆ ಮಕ್ಕಳಾದರು.


ನಿಮ್ಮಲ್ಲಿ ಅಸ್ವಸ್ಥನಾಗಿರುವವನು ಇದ್ದಾನೋ? ಅವನು ಸಭೆಯ ಹಿರಿಯರನ್ನು ಕರೇಕಳುಹಿಸಲಿ; ಅವರು ಕರ್ತನ ಹೆಸರಿನಿಂದ ಅವನಿಗೆ ಎಣ್ಣೆಹಚ್ಚಿ ಅವನಿಗೋಸ್ಕರ ದೇವರನ್ನು ಪ್ರಾರ್ಥಿಸಲಿ.


ಆಗ - ಈತನು ಪ್ರಿಯನಾಗಿರುವ ನನ್ನ ಮಗನು, ಈತನನ್ನು ನಾನು ಮೆಚ್ಚಿದ್ದೇನೆ ಎಂದು ಆಕಾಶವಾಣಿ ಆಯಿತು.


ಆಗ ತೇಮಾನ್ಯನಾದ ಎಲೀಫಜನೂ ಶೂಹ್ಯನಾದ ಬಿಲ್ದದನೂ ನಾಮಾಥ್ಯನಾದ ಚೋಫರನೂ ಹೋಗಿ ಯೆಹೋವನು ತಮಗೆ ಆಜ್ಞಾಪಿಸಿದ ಪ್ರಕಾರ ಮಾಡಲು ಯೆಹೋವನು ಯೋಬನ ವಿಜ್ಞಾಪನೆಯನ್ನು ಲಾಲಿಸಿದನು.


ಆಗ ಬಿಳಾಮನು ಬಾಲಾಕನಿಗೆ - ಇಲ್ಲಿಯೂ ಏಳು ಯಜ್ಞಪೀಠಗಳನ್ನು ಕಟ್ಟಿಸಿ ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ಸಿದ್ಧಪಡಿಸು ಎಂದು ಹೇಳಲಾಗಿ


ನಾನು ನಿನಗೆ ಅನುಗ್ರಹಿಸುವದೇನಂದರೆ ತಾವು ಯೆಹೂದ್ಯರೆಂದು ಸುಳ್ಳಾಗಿ ಕೊಚ್ಚಿಕೊಳ್ಳುವ ಸೈತಾನನ ಸಮಾಜದವರಲ್ಲಿ ಕೆಲವರು ಬಂದು ನಿನ್ನ ಪಾದಗಳ ಮುಂದೆ ಬೀಳುವಂತೆಯೂ ನಿನ್ನನ್ನು ನಾನು ಪ್ರೀತಿಸಿದ್ದನ್ನು ತಿಳುಕೊಳ್ಳುವಂತೆಯೂ ಮಾಡುವೆನು.


ಯಾವನಾದರೂ ತನ್ನ ಸಹೋದರನು ಮರಣಕರವಲ್ಲದ ಪಾಪಮಾಡುವದನ್ನು ಕಂಡರೆ ಅವನು ದೇವರನ್ನು ಬೇಡಿಕೊಳ್ಳಲಿ; ಆಗ ದೇವರು ಮರಣಕರವಲ್ಲದ ಪಾಪಮಾಡುವವರಿಗೆ ಜೀವವನ್ನು ದಯಪಾಲಿಸುವನು. ಮರಣಕರವಾದ ಪಾಪವುಂಟು; ಈ ಪಾಪದ ವಿಷಯವಾಗಿ ಬೇಡಿಕೊಳ್ಳಬೇಕೆಂದು ನಾನು ಹೇಳುವದಿಲ್ಲ.


ಈತನು, ಅಂದರೆ ಯೇಸು ಕ್ರಿಸ್ತನು, ನೀರಿನಿಂದಲೂ ರಕ್ತದಿಂದಲೂ ಸಾಕ್ಷಿಹೊಂದಿದವನು. ನೀರಿನಿಂದ ಮಾತ್ರವಲ್ಲ, ನೀರಿನಿಂದಲೂ ರಕ್ತದಿಂದಲೂ ಸಾಕ್ಷಿ ಹೊಂದಿದವನಾಗಿದ್ದಾನೆ.


ಹಬ್ಬದ ಏಳು ದಿನಗಳಲ್ಲಿಯೂ ಯೆಹೋವನಿಗೆ ಸಮರ್ಪಿಸತಕ್ಕ ಸರ್ವಾಂಗಹೋಮಕ್ಕಾಗಿ ಅವನು ಏಳು ದಿನಗಳವರೆಗೆ ದಿನವೊಂದಕ್ಕೆ ಪೂರ್ಣಾಂಗವಾದ ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ಒದಗಿಸಲಿ, ಮತ್ತು ದೋಷಪರಿಹಾರಕಯಜ್ಞಕ್ಕಾಗಿ ದಿನವಹಿ ಒಂದು ಹೋತವನ್ನು ಕೊಡಲಿ.


ಔತಣ ಸರದಿ ತೀರಿದನಂತರ ಯೋಬನು ತನ್ನ ಮಕ್ಕಳು ಒಂದು ವೇಳೆ ಹೃದಯದಲ್ಲಿ ದೇವರನ್ನು ದೂಷಿಸಿ ಪಾಪ ಮಾಡಿರಬಹುದು ಎಂದು ಅವರನ್ನು ಕರಿಸಿ ಶುದ್ಧಿಪಡಿಸಿ ಬೆಳಿಗ್ಗೆ ಎದ್ದು ಅವರ ಸಂಖ್ಯೆಗೆ ತಕ್ಕಂತೆ ಹೋಮಗಳನ್ನು ಅರ್ಪಿಸುತ್ತಿದ್ದನು. ಹೀಗೆ ಯೋಬನು ಕ್ರಮವಾಗಿ ಮಾಡುತ್ತಿದ್ದನು.


ಅವರು ಸರಕಾರ ದೇವಾಲಯ ಯೆಹೂದಪ್ರಜೆ ಇವುಗಳಿಗೋಸ್ಕರ ದೋಷಪರಿಹಾರಕಯಜ್ಞಮಾಡುವದಕ್ಕಾಗಿ ಹೋರಿ ಟಗರು ಕುರಿಮರಿ ಹೋತ ಇವುಗಳಲ್ಲಿ ಏಳೇಳನ್ನು ತಂದರು. ಅರಸನು ಯಾಜಕರಾದ ಆರೋನನ ಸಂತಾನದವರಿಗೆ ಯೆಹೋವನ ಯಜ್ಞವೇದಿಯ ಮೇಲೆ ಸರ್ವಾಂಗಹೋಮಮಾಡಬೇಕೆಂದು ಆಜ್ಞಾಪಿಸಿದನು.


ಆಕೆ ತಂದ ಪದಾರ್ಥಗಳನ್ನು ತೆಗೆದುಕೊಂಡು ಆಕೆಗೆ - ಸಮಾಧಾನದಿಂದ ಮನೆಗೆ ಹೋಗು; ನಿನ್ನನ್ನು ನೋಡಿ ನಿನ್ನ ವಿಜ್ಞಾಪನೆಯನ್ನು ಲಾಲಿಸಿದ್ದೇನೆ ಅಂದನು.


ಅಲ್ಲಿಂದ ನನಗೋಸ್ಕರ ಅವರನ್ನು ಶಪಿಸಬೇಕು ಎಂದು ಹೇಳಿ ಪಿಸ್ಗಾ ಬೆಟ್ಟದ ತುದಿಯಲ್ಲಿರುವ ಚೋಫೀಮ್ ಬೈಲು ಎಂಬ ಸ್ಥಳಕ್ಕೆ ಕರಕೊಂಡುಹೋಗಿ ಅಲ್ಲಿಯೂ ಏಳು ಯಜ್ಞಪೀಠಗಳನ್ನು ಕಟ್ಟಿಸಿ ಪ್ರತಿಯೊಂದು ಪೀಠದಲ್ಲಿ ಒಂದು ಹೋರಿಯನ್ನೂ ಒಂದು ಟಗರನ್ನೂ ಸರ್ವಾಂಗಹೋಮವಾಗಿ ಸಮರ್ಪಿಸಿದನು.


ಅದಲ್ಲದೆ ಮೋಶೆಯ ಮಾವನಾದ ಇತ್ರೋವನು ದೇವರಿಗೆ ಸರ್ವಾಂಗಹೋಮ ಯಜ್ಞಗಳನ್ನು ಸಮರ್ಪಿಸಲಾಗಿ ಆರೋನನೂ ಇಸ್ರಾಯೇಲ್ಯರ ಹಿರಿಯರೆಲ್ಲರೂ ಅವನ ಸಂಗಡ ದೇವರ ಸನ್ನಿಧಿಯಲ್ಲಿ ಸಹಭೋಜನವನ್ನು ಮಾಡುವದಕ್ಕೆ ಬಂದರು.


ಹೋರಿಗಳ ಮತ್ತು ಹೋತಗಳ ರಕ್ತದಿಂದ ಪಾಪಗಳು ಪರಿಹಾರವಾಗುವದು ಅಸಾಧ್ಯವಾಗಿದೆಯಲ್ಲಾ.


ಕಂಚುಗಾರನಾದ ಅಲೆಕ್ಸಾಂದ್ರನು ನನಗೆ ಬಹಳ ಕೇಡುಮಾಡಿದನು; ಕರ್ತನು ಅವನ ಕೃತ್ಯಗಳಿಗೆ ಸರಿಯಾಗಿ ಅವನಿಗೆ ಪ್ರತಿಫಲವನ್ನು ಕೊಡುವನು.


ಯೆಹೋವನು ನನಗೆ ಹೀಗೆ ಹೇಳಿದನು - ಮೋಶೆಯೂ ಸಮುವೇಲನೂ ನನಗೆ ವಿಜ್ಞಾಪಿಸಿದರೂ ನನ್ನ ಮನಸ್ಸು ಈ ಜನರ ಕಡೆಗೆ ತಿರುಗದು; ನನ್ನ ಕಣ್ಣೆದುರಿನಿಂದ ಇವರನ್ನು ನೂಕಿಬಿಡು, ತೊಲಗಿಹೋಗಲಿ! ಅವರು - ನಾವು ಎಲ್ಲಿಗೆ ಹೋಗೋಣ ಎಂದು ಕೇಳಲು


ಮತ್ತು ಯೆಹೋವನು ನನಗೆ - ಈ ಜನರ ಹಿತವನ್ನು ಬಯಸಿ ಇವರಿಗೋಸ್ಕರ ಪ್ರಾರ್ಥನೆಮಾಡಬೇಡ.


ನಿನ್ನನ್ನು ಕುಗ್ಗಿಸಿದವರ ಸಂತಾನದವರು ನಿನ್ನ ಬಳಿಗೆ ತಗ್ಗಿಬಗ್ಗಿ ಬರುವರು; ನಿನ್ನನ್ನು ಅಸಡ್ಡೆಮಾಡಿದವರೆಲ್ಲರೂ ನಿನ್ನ ಕಾಲಕೆಳಗೆ ಅಡ್ಡಬಿದ್ದು ನೀನು ಯೆಹೋವನ ಪಟ್ಟಣ, ಇಸ್ರಾಯೇಲಿನ ಸದಮಲಸ್ವಾವಿುಯ ಚೀಯೋನ್ ಎಂದು ಕೊಂಡಾಡುವರು.


ಆದಕಾರಣ ಆತನು ತನ್ನ ಮೂಲಕ ದೇವರ ಬಳಿಗೆ ಬರುವವರನ್ನು ಸಂಪೂರ್ಣವಾಗಿ ರಕ್ಷಿಸುವದಕ್ಕೆ ಶಕ್ತನಾಗಿದ್ದಾನೆ; ಅವರಿಗೋಸ್ಕರ ವಿಜ್ಞಾಪನೆಮಾಡುವದಕ್ಕೆ ಯಾವಾಗಲೂ ಬದುಕುವವನಾಗಿದ್ದಾನೆ.


ಹೀಗಿರುವಲ್ಲಿ ಆ ಮನುಷ್ಯನ ಹೆಂಡತಿಯನ್ನು ತಿರಿಗಿ ಅವನಿಗೆ ಒಪ್ಪಿಸಿ ಬಿಡು. ಅವನು ಪ್ರವಾದಿ, ನಿನಗೋಸ್ಕರ ನನಗೆ ಪ್ರಾರ್ಥಿಸುವನು, ಮತ್ತು ನೀನು ಬದುಕುವಿ. ಆಕೆಯನ್ನು ಒಪ್ಪಿಸುವದಿಲ್ಲವೆಂದರೆ ನೀನೂ ನಿನ್ನವರೆಲ್ಲರೂ ಸತ್ತೇ ಸಾಯುವಿರೆಂದು ತಿಳಿದುಕೋ ಎಂದು ಕನಸಿನಲ್ಲಿ ಹೇಳಿದನು.


ಆಗ ಯೆಹೋವನು - ನನ್ನ ದಾಸನಾದ ಯೋಬನ ಮೇಲೆ ಗಮನವಿಟ್ಟಿಯಾ? ಅವನು ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಕೆಟ್ಟದ್ದನ್ನು ನಿರಾಕರಿಸುತ್ತಾ ನಿರ್ದೋಷಿಯೂ ಯಥಾರ್ಥಚಿತ್ತನೂ ಆಗಿದ್ದಾನೆ. ಅವನಿಗೆ ಸಮಾನನು ಭೂಲೋಕದಲ್ಲಿ ಎಲ್ಲಿಯೂ ಸಿಕ್ಕುವದಿಲ್ಲ ಎಂದು ಸೈತಾನನಿಗೆ ಹೇಳಿದನು.


ನಿನ್ನ ಕೆಟ್ಟತನದಿಂದ ನಿನ್ನಂಥವನಿಗೇ [ನಷ್ಟವಾದೀತು], ನಿನ್ನ ನೀತಿಯಿಂದ ನರಜನ್ಮದವನಿಗೇ [ಲಾಭ ಸಿಕ್ಕೀತು].


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು