Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 5:15 - ಕನ್ನಡ ಸತ್ಯವೇದವು J.V. (BSI)

15 ಇಂಥವರ ಬಾಯೆಂಬ ಕತ್ತಿಯಿಂದಲೂ ಬಲಿಷ್ಠರ ಕೈಯಿಂದಲೂ ದಿಕ್ಕಿಲ್ಲದವರನ್ನು ರಕ್ಷಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಇಂಥವರ ಬಾಯೆಂಬ ಕತ್ತಿಯಿಂದಲೂ, ಬಲಿಷ್ಠರ ಕೈಯಿಂದಲೂ ದಿಕ್ಕಿಲ್ಲದವರನ್ನು ರಕ್ಷಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ದಿಕ್ಕಿಲ್ಲದವರನು ರಕ್ಷಿಸುತ್ತಾನೆ ದೇವರು ಅಂಥವರ ಬಾಯಿಗತ್ತಿಯಿಂದ ಬಿಡಿಸುತ್ತಾನೆ ಅವರನ್ನು ಬಲಾಢ್ಯರ ಕೈಯಿಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ದೇವರು ಬಡವರನ್ನು ದುಷ್ಟರ ನಿಂದನೆಯಿಂದಲೂ ಬಲಿಷ್ಠರ ಕೈಯಿಂದಲೂ ಕಾಪಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ದೇವರು ದಿಕ್ಕಿಲ್ಲದವರನ್ನು ದಬ್ಬಾಳಿಕೆಮಾಡುವವರ ಬಾಯಿಯೆಂಬ ಖಡ್ಗದಿಂದಲೂ, ಬಲಿಷ್ಠರ ಕೈಯೊಳಗಿಂದಲೂ ರಕ್ಷಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 5:15
19 ತಿಳಿವುಗಳ ಹೋಲಿಕೆ  

ಯೆಹೋವನೇ, ಕುಗ್ಗಿದವನನ್ನು ಬಲಾತ್ಕಾರಿಯಿಂದಲೂ ದಿಕ್ಕಿಲ್ಲದ ಬಡವನನ್ನು ಸೂರೆಮಾಡುವವನಿಂದಲೂ ತಪ್ಪಿಸಿ ರಕ್ಷಿಸುವಾತನೇ, ನಿನಗೆ ಸಮಾನರು ಯಾರಿದ್ದಾರೆಂದು ನನ್ನ ಎಲುಬುಗಳೆಲ್ಲಾ ಹೇಳುವವು.


ಯೆಹೋವನು ದೀನರ ವ್ಯಾಜ್ಯವನ್ನು ನಡಿಸುವನೆಂತಲೂ ಬಡವರ ನ್ಯಾಯವನ್ನು ಸ್ಥಾಪಿಸುವನೆಂತಲೂ ಬಲ್ಲೆನು.


ಆತನು ದೀನನ ಬಲಗಡೆಯಲ್ಲಿ ನಿಂತುಕೊಂಡು ಪ್ರಾಣಶಿಕ್ಷೆ ವಿಧಿಸುವವರ ಕೈಯಿಂದ ತಪ್ಪಿಸಿ ರಕ್ಷಿಸುವನು.


ಕಷ್ಟದಲ್ಲಿದ್ದ ದೀನರನ್ನು ಉನ್ನತಸ್ಥಿತಿಗೇರಿಸಿ ಕುರಿಹಿಂಡಿನಂತೆ ಹೆಚ್ಚಿಸಿದನು.


ಅವನು ಬಡವರ ನ್ಯಾಯವನ್ನು ಸ್ಥಾಪಿಸಲಿ; ದೀನರ ಮಕ್ಕಳನ್ನು ಉದ್ಧರಿಸಲಿ; ಪ್ರಜಾಹಿಂಸಕರನ್ನು ಖಂಡಿಸಿಬಿಡಲಿ.


ಯೆಹೋವನೇ, ನೀನು ದೀನರ ಕೋರಿಕೆಯನ್ನು ನೆರವೇರಿಸುವವನೇ ಆಗಿದ್ದೀ; ಅವರ ಹೃದಯವನ್ನು ಧೈರ್ಯಪಡಿಸುತ್ತೀ; ಅವರ ಮೊರೆಗೆ ಕಿವಿಗೊಡುತ್ತೀ.


ನೀನು ಅವರ ಅನ್ಯಾಯಬಲಾತ್ಕಾರಗಳನ್ನು ನೋಡಿಯೇ ಇದ್ದೀ; ಅವುಗಳನ್ನು ವಿಚಾರಿಸುತ್ತೀ. ಗತಿಯಿಲ್ಲದವನು ತನ್ನನ್ನು ನಿನಗೇ ಒಪ್ಪಿಸುವನು; ದಿಕ್ಕಿಲ್ಲದವನಿಗೆ ನೀನೇ ದಿಕ್ಕು.


ಸಿಂಹಗರ್ಜನೆಯೂ ಆರ್ಭಟಿಸುವ ಸಿಂಹದ ಧ್ವನಿಯೂ [ಅಡಗಿ] ಪ್ರಾಯದ ಸಿಂಹಗಳ ಕೋರೆಗಳು ಮುರಿಯಲ್ಪಡುವವು.


ಮೃಗೇಂದ್ರನು ಆಹಾರವಿಲ್ಲದೆ ಸತ್ತು ಸಿಂಹದ ಮರಿಗಳು ಚದರಿಹೋಗುವವು.


ನಾಲಿಗೆಯೆಂಬ ಕೊರಡೆಗೆ ನೀನು ಮರೆಯಾಗಿರುವಿ; ವಿನಾಶವುಂಟಾದರೂ ನೀನು ಹೆದರುವದಿಲ್ಲ.


ಅನ್ಯಾಯಗಾರನ ಕೋರೆಗಳನ್ನು ಮುರಿದು ಅವನ ಹಲ್ಲುಗಳಿಂದ ಬೇಟೆಯನ್ನು ಕಿತ್ತು ತರುತ್ತಿದ್ದೆನು.


ಹೀಗೆ ಬಡವರ ಗೋಳಾಟವು ದೇವರಿಗೆ ಮುಟ್ಟುವಂತೆ ಮಾಡಿದ್ದರು, ಆತನು ದಿಕ್ಕಿಲ್ಲದವರ ಮೊರೆಯನ್ನು ಆಲೈಸಿದ್ದನು.


ಭ್ರಷ್ಟನು ಆಳಬಾರದು, ಯಾರೂ ಜನರಿಗೆ ಉರುಲಾಗಕೂಡದು ಎಂಬದೇ ಆತನ ಉದ್ದೇಶ.


ಆತನು ದುಷ್ಟರ ಪ್ರಾಣವನ್ನು ಉಳಿಸುವದಿಲ್ಲ, ಗತಿಹೀನರ ನ್ಯಾಯವನ್ನು ಸ್ಥಾಪಿಸುವನು.


ಬಾಧೆಪಡುವವರನ್ನು ಅವರ ಬಾಧೆಗಳ ಮೂಲಕವೇ ರಕ್ಷಿಸುವನು, ಅವರು ಅನುಭವಿಸುವ ಹಿಂಸೆಯಿಂದಲೇ ಅವರ ಕಿವಿಯನ್ನು ತೆರೆಯುವನು.


ಮತ್ತು ದುಷ್ಟರಿಗೆ ಬೆಳಕಿಲ್ಲವಾಗುವದು, ಎತ್ತಿದ ಕೈ ಮುರಿಯುವದು.


ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಯೆರೆಮೀಯನ ವಿಷಯವಾಗಿ ಕಾವಲು ದಂಡಿನ ಅಧಿಪತಿಯಾದ ನೆಬೂಜರದಾನನಿಗೆ -


ದೇವರು ಕಂಚುಕಿಯರ ಅಧ್ಯಕ್ಷನ ಮನಸ್ಸಿನಲ್ಲಿ ದಾನಿಯೇಲನ ಮೇಲೆ ಕನಿಕರವನ್ನೂ ದಯೆಯನ್ನೂ ಹುಟ್ಟಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು