Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 5:21 - ಕನ್ನಡ ಸತ್ಯವೇದವು J.V. (BSI)

21 ನಾಲಿಗೆಯೆಂಬ ಕೊರಡೆಗೆ ನೀನು ಮರೆಯಾಗಿರುವಿ; ವಿನಾಶವುಂಟಾದರೂ ನೀನು ಹೆದರುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ನಾಲಿಗೆಯೆಂಬ ಕೊರಡೆಗೆ ನೀನು ಮರೆಯಾಗಿರುವಿ; ವಿನಾಶವುಂಟಾದರೂ ನೀನು ಹೆದರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ನಾಲಿಗೆಯೆಂಬ ಚಾಟಿಹೊಡೆತಕ್ಕೆ ಮರೆಯಾಗಿರುವೆ ಪರಿವಿನಾಶ ಬಂದರೂ ನೀನು ಹೆದರದಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ದೇವರು ನಿನ್ನನ್ನು ನಿಂದನೆಯಿಂದ ತಪ್ಪಿಸುವನು. ನಾಶನದಲ್ಲಿಯೂ ನೀನು ಭಯಪಡುವ ಅಗತ್ಯವಿಲ್ಲ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ನೀನು ನಾಲಿಗೆಯೆಂಬ ಚಾಟಿಹೊಡೆತಕ್ಕೆ ಮರೆಯಾಗಿರುವೆ; ನಾಶ ಬಂದಾಗ ನೀನು ಭಯಪಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 5:21
11 ತಿಳಿವುಗಳ ಹೋಲಿಕೆ  

ಮನುಷ್ಯರ ಒಳಸಂಚುಗಳಿಂದ ಹಾನಿ ಉಂಟಾಗದಂತೆ ಅವರನ್ನು ನಿನ್ನ ಸಾನ್ನಿಧ್ಯದಲ್ಲಿಯೇ ಮರೆಮಾಡುತ್ತೀ; ವಿವಾದಿಸುವ ನಾಲಿಗೆಗಳಿಂದ ಕೇಡಾಗದಂತೆ ಅವರನ್ನು ಗೋಪ್ಯಸ್ಥಳದಲ್ಲಿ ಅಡಗಿಸುತ್ತೀ.


ಆಗ ಅವರು - ಯೆರೆಮೀಯನಿಗೆ ವಿರುದ್ಧವಾಗಿ ಒಳಸಂಚು ಮಾಡೋಣ ಬನ್ನಿರಿ; ಧರ್ಮೋಪದೇಶವು ಯಾಜಕನಿಂದ, ಮಂತ್ರಾಲೋಚನೆಯು ಜ್ಞಾನಿಯಿಂದ, ದೈವೋಕ್ತಿಯು ಪ್ರವಾದಿಯಿಂದ ಎಂದಿಗೂ ತಪ್ಪದಷ್ಟೆ. ಬನ್ನಿರಿ, ಅವನನ್ನು ಬಾಯಿಂದ ಬಡಿಯೋಣ, ಅವನ ಯಾವ ಮಾತಿಗೂ ಕಿವಿಗೊಡದಿರುವ ಎಂದುಕೊಂಡರು.


ಕತ್ತಿ ತಿವಿದ ಹಾಗೆ ದುಡುಕಿ ಮಾತಾಡುವವರುಂಟು; ಮತಿವಂತರ ಮಾತೇ ಮದ್ದು.


ಅವನ ಬಾಯಿ ಬೆಣ್ಣೆಯಂತೆ ನುಣುಪು; ಹೃದಯವೋ ಕಲಹಮಯವೇ. ಅವನ ನುಡಿಗಳು ಎಣ್ಣೆಗಿಂತ ನಯವಾಗಿದ್ದರೂ ಬಿಚ್ಚುಕತ್ತಿಗಳೇ ಸರಿ.


ನಿನ್ನನ್ನು ಎದುರಿಸಲು ಕಲ್ಪಿಸಿದ ಯಾವ ಆಯುಧವೂ ಜಯಿಸದು; ನ್ಯಾಯವಿಚಾರಣೆಯಲ್ಲಿ ನಿನಗೆ ವಿರುದ್ಧವಾಗಿ ಏಳುವ ಪ್ರತಿಯೊಂದು ನಾಲಿಗೆಯನ್ನು ದೋಷಿಯೆಂದು ನೀನು ಖಂಡಿಸುವಿ. ಈ ಸ್ಥಿತಿಯೇ ಯೆಹೋವನ ಸೇವಕರ ಸ್ವಾಸ್ತ್ಯವೂ ನಾನು ದಯಪಾಲಿಸುವ ಸದ್ಧರ್ಮಫಲವೂ ಆಗಿದೆ ಎಂದು ಯೆಹೋವನು ಅನ್ನುತ್ತಾನೆ.


ಸಿಂಹಗಳ ಮಧ್ಯದಲ್ಲಿ ಸಿಕ್ಕಿದ್ದೇನೆ; ಬೆಂಕಿಕಾರುವ ಮನುಷ್ಯರ ನಡುವೆ ಬಿದ್ದಿದ್ದೇನೆ. ಅವರ ಹಲ್ಲುಗಳು ಶಸ್ತ್ರಬಾಣಗಳು; ನಾಲಿಗೆಗಳು ಹದವಾದ ಕತ್ತಿಗಳೇ.


ಇಂಥವರ ಬಾಯೆಂಬ ಕತ್ತಿಯಿಂದಲೂ ಬಲಿಷ್ಠರ ಕೈಯಿಂದಲೂ ದಿಕ್ಕಿಲ್ಲದವರನ್ನು ರಕ್ಷಿಸುತ್ತಾನೆ.


ಫಕ್ಕನೆ ಬರುವ ಅಪಾಯಕ್ಕಾಗಲಿ ದುಷ್ಟರಿಗೆ ಸಂಭವಿಸುವ ನಾಶನಕ್ಕಾಗಲಿ ನೀನು ಅಂಜುವದೇ ಇಲ್ಲ.


ಮುತ್ತಿಗೆ ಹಾಕಲ್ಪಟ್ಟಿರುವ ನಗರದಲ್ಲಿದ್ದ ನನಗೆ ತನ್ನ ಕೃಪೆಯನ್ನು ಆಶ್ಚರ್ಯಕರವಾಗಿ ತೋರಿಸಿದ ಯೆಹೋವನಿಗೆ ಸ್ತೋತ್ರ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು