Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 5:26 - ಕನ್ನಡ ಸತ್ಯವೇದವು J.V. (BSI)

26 ಸುಗ್ಗೀಕಾಲದಲ್ಲಿ ತೆನೆಸಿವುಡು [ಮನೆಗೆ] ಸೇರುವಂತೆ ನೀನು ವೃದ್ಧಾಪ್ಯದಲ್ಲಿ ಸಮಾಧಿಗೆ ಸೇರುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಸುಗ್ಗೀಕಾಲದಲ್ಲಿ ತೆನೆಯ ಸಿವುಡು ಮನೆಗೆ ಸೇರುವಂತೆ, ನೀನು ವೃದ್ಧಾಪ್ಯ ಕಳೆದ ಮೇಲೆ ಸಮಾಧಿಗೆ ಸೇರುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಸುಗ್ಗಿಕಾಲದಲ್ಲಿ ಕಾಳುತೆನೆ ಕಣ ಸೇರುವಂತೆ ವೃದ್ಧಾಪ್ಯ ಕಳೆದ ಮೇಲೆ ನೀನು ಸಮಾಧಿ ಸೇರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಸುಗ್ಗಿಕಾಲದವರೆಗೂ ಬೆಳೆದು ಬಲಿಯುವ ಗೋಧಿಯಂತೆ ನೀನಿರುವೆ. ಹೌದು, ನೀನು ವೃದ್ಧಾಪ್ಯದ ಕೊನೆಯವರೆಗೂ ಜೀವಿಸುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಸಿವುಡು ತನ್ನ ಕಾಲದಲ್ಲಿ ಮನೆಗೆ ಸೇರುವಂತೆ ನೀನು ಪೂರ್ಣ ಪ್ರಾಯದವನಾಗಿ ಸಮಾಧಿ ಸೇರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 5:26
10 ತಿಳಿವುಗಳ ಹೋಲಿಕೆ  

ನನ್ನಿಂದ ನಿನ್ನ ದಿನಗಳು ಹೆಚ್ಚುವವು, ನಿನ್ನ ಆಯುಸ್ಸಿನ ವರುಷಗಳು ವೃದ್ಧಿಯಾಗುವವು.


ದೀರ್ಘಾಯುಷ್ಯವನ್ನು ಅನುಗ್ರಹಿಸಿ ಅವನನ್ನು ತೃಪ್ತಿಪಡಿಸುವೆನು; ನನ್ನ ವಿಶೇಷವಾದ ರಕ್ಷಣೆಯನ್ನು ತೋರಿಸುವೆನು.


ನೀನಂತೂ ಸಮಾಧಾನದೊಡನೆ ಪಿತೃಗಳ ಬಳಿಗೆ ಸೇರುವಿ; ತುಂಬಾ ವೃದ್ಧನಾಗಿ ಉತ್ತರಕ್ರಿಯೆಯನ್ನು ಹೊಂದುವಿ.


ಯೆಹೋವನಿಗೆ ಭಯಪಡುವವರ ದಿನಗಳಿಗೆ ವೃದ್ಧಿ; ದುಷ್ಟರ ವರುಷಗಳಿಗೆ ಕ್ಷಯ.


ಅವನು ಪೂರ್ಣಾಯುಷ್ಯದಿಂದ ದಿನತುಂಬಿದ ಮುದುಕನಾಗಿ ಪ್ರಾಣಬಿಟ್ಟು ತನ್ನ ಪಿತೃಗಳ ಬಳಿಗೆ ಸೇರಿದನು.


ನಿಮ್ಮ ದೇಶದಲ್ಲಿ ಗರ್ಭಸ್ರಾವವಾಗಲಿ ಬಂಜೇತನವಾಗಲಿ ಇರುವದೇ ಇಲ್ಲ; ನಿಮಗೆ ಸಂಪೂರ್ಣವಾದ ಆಯುಸ್ಸನ್ನು ಕೊಡುವೆನು.


ಇಗೋ, ಇದನ್ನು ವಿಚಾರಿಸಿದ್ದೇವೆ, ಯಥಾರ್ಥವಾಗಿಯೇ ಇದೆ; ಇದನ್ನು ಕೇಳು, ನಿನ್ನಷ್ಟಕ್ಕೆ ನೀನೇ ತಿಳಿದುಕೋ.


ಕೆಲವು ದಿವಸ ಮಾತ್ರ ಬದುಕತಕ್ಕ ಕೂಸಾಗಲಿ ವಯಸ್ಸಾಗದೆ ಮುದುಕನಾದವನಾಗಲಿ ಅಲ್ಲಿ ಇರುವದಿಲ್ಲ; ಯುವಕನು ನೂರು ವರುಷದೊಳಗೆ ಸಾಯನು, ಪಾಪಿಷ್ಠನಿಗೂ ನೂರು ವರುಷದೊಳಗೆ ಶಾಪತಗಲದು.


ಮೋಶೆ ಸಾಯುವಾಗ ನೂರಿಪ್ಪತ್ತು ವರುಷದವನಾಗಿದ್ದನು. ಅವನ ಕಣ್ಣು ಮೊಬ್ಬಾಗಲಿಲ್ಲ, ಅವನ ಜೀವಕಳೆ ಕುಂದಿಹೋಗಿರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು