Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 5:4 - ಕನ್ನಡ ಸತ್ಯವೇದವು J.V. (BSI)

4 ಅವನ ಮಕ್ಕಳು ನಿರಾಶ್ರಯರಾಗಿ ನ್ಯಾಯಸ್ಥಾನದಲ್ಲಿ ಸೋತುಹೋಗುವರು. ಅವರನ್ನು ಬಿಡಿಸತಕ್ಕವರು ಯಾರೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅವನ ಮಕ್ಕಳು ಆಶ್ರಯವಿಲ್ಲದೆ ನ್ಯಾಯಸ್ಥಾನದಲ್ಲಿ ಸೋತುಹೋಗುವರು. ಅವರನ್ನು ಬಿಡಿಸತಕ್ಕವರು ಯಾರೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಆಶ್ರಯ ಎಂಬುದು ಅವನ ಮಕ್ಕಳಿಗಿಲ್ಲ ನ್ಯಾಯಸ್ಥಾನದಲ್ಲಿ ಗೆಲುವು ಅವರಿಗಿಲ್ಲ ಅವರನ್ನು ಬಿಡಿಸತಕ್ಕವರಾರೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಅವನ ಮಕ್ಕಳಿಗೆ ಸಹಾಯಮಾಡುವಂಥವರು ಇರಲಿಲ್ಲ. ಅವರ ಪರವಾಗಿ ವಾದಿಸಲು ನ್ಯಾಯಾಲಯದಲ್ಲಿ ಒಬ್ಬರೂ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಅವನ ಮಕ್ಕಳು ಭದ್ರತೆಯಿಲ್ಲದವರಾಗುವರು; ಬಿಡಿಸತಕ್ಕವರಿಲ್ಲದೆ ಅವರು ನ್ಯಾಯಸ್ಥಾನದಲ್ಲಿ ಸೋತುಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 5:4
16 ತಿಳಿವುಗಳ ಹೋಲಿಕೆ  

ಇವುಗಳಿಂದ ತನ್ನ ಬತ್ತಳಿಕೆಯನ್ನು ತುಂಬಿದವನು ಧನ್ಯನು. ಊರುಬಾಗಲಲ್ಲಿ ವೈರಿಗಳ ಸಂಗಡ ವ್ಯಾಜ್ಯವಾಡುವಾಗ ಅಂಥವರು ಅಪಮಾನಹೊಂದುವದಿಲ್ಲ.


ನಿನ್ನ ನಿಬಂಧನೆಗಳನ್ನು ಅಲಕ್ಷ್ಯಮಾಡುವ ದುಷ್ಟರಿಗೆ ರಕ್ಷಣೆಯೇ ಇಲ್ಲ.


ಶಿಷ್ಟಹಿಂಸಕರೇ, ಲಂಚಕೋರರೇ, ಚಾವಡಿಯಲ್ಲಿ ದರಿದ್ರರ ನ್ಯಾಯವನ್ನು ತಪ್ಪಿಸುವವರೇ, ನಿಮ್ಮ ದ್ರೋಹಗಳು ಬಹಳ, ನಿಮ್ಮ ಪಾಪಗಳು ಪ್ರಬಲ, ನನಗೆ ಗೊತ್ತಿದೆ.


ಇಲ್ಲವಾದರೆ ನನಗೆ ರಕ್ಷಕನಿಲ್ಲವೆಂದು ತಿಳಿದು ಶತ್ರುವು ಸಿಂಹದಂತೆ ಮೇಲೆ ಬಿದ್ದು ನನ್ನನ್ನು ಹರಿದುಬಿಟ್ಟಾನು.


ಅವನಿಗೆ ಮಕ್ಕಳು ಹೆಚ್ಚಿದರೆ ಕತ್ತಿಗೆ ತುತ್ತಾಗುವರು, ಅವನ ಸಂತತಿಯವರಿಗೆ ಅನ್ನದ ಕೊರತೆ ತಪ್ಪದು;


ನಾನು ಅಪರಾಧಿಯಲ್ಲವೆಂದು ನಿನಗೆ ಗೊತ್ತಾಯಿತಲ್ಲಾ; ನಿನ್ನ ಕೈಯೊಳಗಿಂದ ಬಿಡಿಸತಕ್ಕವರು ಯಾರೂ ಇಲ್ಲವಷ್ಟೆ,


ಒಂದು ವೇಳೆ ನಿನ್ನ ಮಕ್ಕಳು ಆತನಿಗೆ ವಿರುದ್ಧವಾಗಿ ಪಾಪಮಾಡಿದ್ದ ಕಾರಣ ಆತನು ಅವರನ್ನು ಅವರ ದುಷ್ಕೃತ್ಯದ ಕೈಗೆ ಒಪ್ಪಿಸಿದನೋ ಏನೋ?


ಇಗೋ ಅರಣ್ಯದ ಕಡೆಯಿಂದ ಬಿರುಗಾಳಿಯು ಬೀಸಿ ಮನೆಯ ನಾಲ್ಕು ಮೂಲೆಗಳಿಗೆ ಬಡಿಯಿತು; ಮನೆಯು ಯೌವನಸ್ಥರ ಮೇಲೆ ಬಿದ್ದಿತು; ಸತ್ತು ಹೋದರು; ಇದನ್ನು ತಿಳಿಸುತ್ತಿರುವ ನಾನೊಬ್ಬನೇ ತಪ್ಪಿಸಿಕೊಂಡು ಉಳಿದಿದ್ದೇನೆ ಅಂದನು.


ಅವುಗಳಿಗೆ ಅಡ್ಡಬೀಳಲೂ ಬಾರದು ಪೂಜೆಮಾಡಲೂ ಬಾರದು. ನಿನ್ನ ದೇವರಾದ ಯೆಹೋವನೆಂಬ ನಾನು ನನಗೆ ಸಲ್ಲತಕ್ಕ ಗೌರವವನ್ನು ಮತ್ತೊಬ್ಬನಿಗೆ ಸಲ್ಲಗೊಡಿಸದವನಾದದರಿಂದ ನನ್ನನ್ನು ದ್ವೇಷಿಸುವವರ ವಿಷಯದಲ್ಲಿ ತಂದೆಗಳ ದೋಷಫಲವನ್ನು ಮಕ್ಕಳ ಮೇಲೆ ಮೂರು ನಾಲ್ಕು ತಲೆಗಳವರೆಗೆ ಬರಮಾಡುವವನಾಗಿಯೂ


ಅಂಥ ಪಟ್ಟಣಕ್ಕೆ ಓಡಿಹೋದವನು ಮೊದಲು ಊರಬಾಗಲಲ್ಲೇ ನಿಂತುಕೊಂಡು ಅಲ್ಲಿನ ಹಿರಿಯರಿಗೆ ತನ್ನ ಸಂಗತಿಯನ್ನು ತಿಳಿಯಪಡಿಸಲಿ. ಅವರು ಅವನನ್ನು ಊರೊಳಗೆ ಸೇರಿಸಿಕೊಂಡು ಅವನ ವಾಸಕ್ಕೆ ಸ್ಥಳಕೊಡಲಿ.


ಅವನ ಮಕ್ಕಳು ದರಿದ್ರರ ದಯೆಯನ್ನು ಬೇಡುವರು. ಅವನು ತನ್ನ ಕೈಯಿಂದಲೇ ತನ್ನ ಆಸ್ತಿಯನ್ನು ಹಿಂದಕ್ಕೆ ಕೊಟ್ಟುಬಿಡಬೇಕಾಗುವದು.


ಜ್ಞಾನವು ಮೂರ್ಖನಿಗೆ ದುರ್ಲಭ; ಅವನು ನ್ಯಾಯಸ್ಥಾನದಲ್ಲಿ ಬಾಯಿಬಿಡಲಾರನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು