Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 5:7 - ಕನ್ನಡ ಸತ್ಯವೇದವು J.V. (BSI)

7 ಕಿಡಿಗಳು ಮೇಲಕ್ಕೆ ಹಾರುವದೂ ಮನುಷ್ಯರು ಶ್ರಮೆಯನ್ನು ಅನುಭವಿಸುವದೂ ಸಹಜ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಜ್ವಾಲೆಗಳು ಮೇಲಕ್ಕೆ ಹಾರುವುದು, ಮನುಷ್ಯರು ಶ್ರಮೆಯನ್ನು ಅನುಭವಿಸುವುದೂ ಸಹಜ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಜ್ವಾಲೆಗಳು ಏರುವುದು ಮೇಲಕೆ ಜನರು ಹುಟ್ಟಿರುವುದು ದುಃಖಕೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆದರೆ ಮನುಷ್ಯರಿಂದ ಕೇಡುಗಳು ಉದ್ಭವಿಸುವುದೂ ಬೆಂಕಿಯಿಂದ ಕಿಡಿಗಳು ಮೇಲಕ್ಕೆ ಹಾರುವುದೂ ಸಹಜ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆದರೂ ಕಿಡಿಗಳು ಹಾರುವ ಪ್ರಕಾರವೇ, ಮನುಷ್ಯನು ಶ್ರಮೆಹೊಂದಲು ಹುಟ್ಟುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 5:7
11 ತಿಳಿವುಗಳ ಹೋಲಿಕೆ  

ಸ್ತ್ರೀಯಲ್ಲಿ ಹುಟ್ಟಿದ ಮನುಷ್ಯನು ಅಲ್ಪಾಯುಷ್ಯನಾಗಿಯೂ ಕಳವಳದಿಂದ ತುಂಬಿದವನಾಗಿಯೂ ಇರುವನು.


ಮನುಷ್ಯರು ಸಹಿಸಬಹುದಾದ ಶೋಧನೆಯೇ ಹೊರತು ಬೇರೆ ಯಾವದೂ ನಿಮಗೆ ಸಂಭವಿಸಲಿಲ್ಲ. ದೇವರು ನಂಬಿಗಸ್ಥನು; ನಿಮ್ಮ ಶಕ್ತಿಯನ್ನು ಮೀರುವ ಶೋಧನೆಯನ್ನು ನಿಮಗೆ ಬರಗೊಡಿಸದೆ ನೀವು ಅದನ್ನು ಸಹಿಸುವದಕ್ಕೆ ಶಕ್ತರಾಗುವಂತೆ ಶೋಧನೆಯಾಗುತ್ತಲೇ ತಪ್ಪಿಸಿಕೊಳ್ಳುವ ಮಾರ್ಗವನ್ನು ಸಿದ್ಧಮಾಡುವನು.


ಲೋಕದಲ್ಲಿ ಮನುಷ್ಯನು ಹೃದಯಪೂರ್ವಕವಾಗಿ ಪಡುವ ಪ್ರಯಾಸದಿಂದ ಅವನಿಗೆ ಲಾಭವೇನು?


ಎಲ್ಲಾ ವಸ್ತುಗಳು ಬಳಲಿಹೋಗುವವು; ಇದನ್ನು ಮನುಷ್ಯನು ವಿವರಿಸಲಾರನು. ಕಣ್ಣು ನೋಡಿ ನೋಡಿ ತೃಪ್ತಿಗೊಳ್ಳದು, ಕಿವಿಯು ಕೇಳಿ ಕೇಳಿ ದಣಿಯದು.


ಭೂಲೋಕದಲ್ಲಿ ಮನುಷ್ಯನಿಗೆ ದುಡಿಯುವ ವಾಯಿದೆಯುಂಟಲ್ಲವೇ. ಅವನ ದಿನಗಳು ಕೂಲಿಯವನ ದಿನಗಳಂತೆ ಕಳೆಯುತ್ತವೆ.


ಅವನ ದಿನಗಳೆಲ್ಲಾ ವ್ಯಸನಮಯವೇ, ಅವನ ಕೆಲಸವು ತೊಂದರೆಯೇ; ರಾತ್ರಿಯಲ್ಲಿಯೂ ಅವನ ಮನಸ್ಸಿಗೆ ನಿಲುಗಡೆಯಿಲ್ಲ. ಇದೂ ವ್ಯರ್ಥ.


ನಾನು ಶ್ರಮದುಃಖಗಳನ್ನು ನೋಡುವದಕ್ಕೂ ನನ್ನ ಆಯುಸ್ಸು ಅವಮಾನದಿಂದ ಕ್ಷಯಿಸುವದಕ್ಕೂ ಗರ್ಭದಿಂದ ಏಕೆ ಹೊರಟುಬಂದೆನು?


ನಮ್ಮ ಆಯುಷ್ಕಾಲವು ಎಪ್ಪತ್ತು ವರುಷ; ಬಲ ಹೆಚ್ಚಿದರೆ ಎಂಭತ್ತು. ಕಷ್ಟಸಂಕಟಗಳೇ ಅದರ ಆಡಂಬರ ಅದು ಬೇಗನೆ ಗತಿಸಿಹೋಗುತ್ತದೆ; ನಾವು ಹಾರಿ ಹೋಗುತ್ತೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು