Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 6:10 - ಕನ್ನಡ ಸತ್ಯವೇದವು J.V. (BSI)

10 ಆಗ ನಾನು ಆದರಣೆ ಹೊಂದಿ ವಿುತಿಯಿಲ್ಲದ ಯಾತನೆಯಲ್ಲಿಯೂ ಉಲ್ಲಾಸಿಸುವೆನು. ಸದಮಲಸ್ವಾವಿುಯ ಆಜ್ಞೆಗಳನ್ನು ನಾನು ತೊರೆದುಬಿಟ್ಟವನಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆಗ ನಾನು ಆದರಣೆ ಹೊಂದಿ ಮಿತಿಯಿಲ್ಲದ ಯಾತನೆಯಲ್ಲಿಯೂ ಉಲ್ಲಾಸಿಸುವೆನು. ಪರಿಶುದ್ಧ ದೇವರ ಆಜ್ಞೆಗಳನ್ನು ನಾನು ತೊರೆದುಬಿಟ್ಟವನಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಆಗ ನಾನು ಸಾಂತ್ವನ ಪಡೆಯುತ್ತಿದ್ದೆ ಮಿತಿಯಿಲ್ಲದ ಯಾತನೆಯಲ್ಲೂ ಆದರ ಹೊಂದುತ್ತಿದ್ದೆ. ಪರಮಪಾವನನ ಮಾತನು ಬಿಡದೆ ಅನುಸರಿಸಿದೆನಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಆಗ ನನಗೆ ಆದರಣೆಯಾಗುವುದು. ಮಿತಿಯಿಲ್ಲದ ಯಾತನೆಯಲ್ಲಿಯೂ ಉಲ್ಲಾಸಿಸುವೆನು; ಪವಿತ್ರವಾಗಿರುವಾತನ ಆಜ್ಞೆಗಳಿಗೆ ನಾನು ಅವಿಧೇಯನಾಗಲೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಹಾಗಿದ್ದರೆ, ಇದು ನನಗೆ ಆದರಣೆಯಾಗಿರುವುದು; ಪರಿಶುದ್ಧ ದೇವರ ಮಾತುಗಳನ್ನು ನನ್ನ ಅತ್ಯಂತ ಯಾತನೆಯಲ್ಲಿಯೂ ನಾನು ನಿರಾಕರಿಸಲಿಲ್ಲ; ಇದರಿಂದ ಬರುವ ಆನಂದವು ನನಗೆ ಇನ್ನೂ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 6:10
27 ತಿಳಿವುಗಳ ಹೋಲಿಕೆ  

ಆತನ ತುಟಿಗಳಿಂದ ಹೊರಟ ನಿಯಮಗಳಿಗೆ ನಾನು ಹಿಂದೆಗೆಯಲಿಲ್ಲ, ಆತನ ಬಾಯಿಂದ ಬಂದ ಮಾತುಗಳನ್ನು ಎದೆಯಲ್ಲಿ ನಿಧಿಯನ್ನಾಗಿ ಬಚ್ಚಿಟ್ಟುಕೊಂಡಿದ್ದೇನೆ.


ಸದಮಲನೆನಿಸಿಕೊಂಡು ಶಾಶ್ವತಲೋಕದಲ್ಲಿ ನಿತ್ಯನಿವಾಸಿಯಾದ ಮಹೋನ್ನತನು ಹೀಗನ್ನುತ್ತಾನೆ - ಉನ್ನತಲೋಕವೆಂಬ ಪವಿತ್ರಾಲಯದಲ್ಲಿ ವಾಸಿಸುವ ನಾನು ಜಜ್ಜಿಹೋದ ದೀನಮನದೊಂದಿಗೆ ಇದ್ದುಕೊಂಡು ದೀನನ ಆತ್ಮವನ್ನೂ ಜಜ್ಜಿಹೋದ ಮನ ಮನಸ್ಸನ್ನೂ ಉಜ್ಜೀವಿಸುವವನಾಗಿದ್ದೇನೆ.


ನೀನು ಇಸ್ರಾಯೇಲ್ಯರ ಸಮೂಹದವರಿಗೆ ಹೀಗೆ ಆಜ್ಞಾಪಿಸಬೇಕು - ನಿಮ್ಮ ದೇವರಾದ ಯೆಹೋವನೆಂಬ ನಾನು ಪರಿಶುದ್ಧನಾಗಿರುವದರಿಂದ ನೀವೂ ಪರಿಶುದ್ಧರಾಗಿರಬೇಕು.


ಆ ನಾಲ್ಕು ಜೀವಿಗಳೊಳಗೆ ಒಂದೊಂದಕ್ಕೆ ಆರಾರು ರೆಕ್ಕೆಗಳಿದ್ದವು; ಆ ಜೀವಿಗಳಿಗೆ ಸುತ್ತಲೂ ಒಳಗೂ ತುಂಬಾ ಕಣ್ಣುಗಳಿದ್ದವು. ಆ ಜೀವಿಗಳು ಹಗಲಿರುಳು ವಿಶ್ರವಿುಸಿಕೊಳ್ಳದೆ - ದೇವರಾದ ಕರ್ತನು ಪರಿಶುದ್ಧನು ಪರಿಶುದ್ಧನು ಪರಿಶುದ್ಧನು; ಆತನು ಸರ್ವಶಕ್ತನು, ವರ್ತಮಾನ ಭೂತ ಭವಿಷ್ಯತ್ಕಾಲಗಳಲ್ಲಿರುವಂಥವನು ಎಂದು ಹೇಳುತ್ತವೆ.


ಫಿಲದೆಲ್ಫಿಯದಲ್ಲಿರುವ ಸಭೆಯ ದೂತನಿಗೆ ಬರೆ - ಪರಿಶುದ್ಧನೂ ಸತ್ಯವಂತನೂ ದಾವೀದನ ಬೀಗದ ಕೈಯುಳ್ಳವನೂ ಯಾರೂ ಮುಚ್ಚಕೂಡದಂತೆ ತೆರೆಯುವವನೂ ಯಾರೂ ತೆರೆಯದಂತೆ ಮುಚ್ಚುವವನೂ ಆಗಿರುವಾತನು ಹೇಳುವದೇನಂದರೆ -


ಸ್ವಂತ ಮಗನನ್ನು ಉಳಿಸಿಕೊಳ್ಳದೆ ಆತನನ್ನು ನಮ್ಮೆಲ್ಲರಿಗೋಸ್ಕರ ಒಪ್ಪಿಸಿಕೊಟ್ಟನಲ್ಲಾ; ಮಗನನ್ನು ಕೊಟ್ಟ ಮೇಲೆ ಸಮಸ್ತವನ್ನೂ ನಮಗೆ ದಯಪಾಲಿಸದೆ ಇರುವನೇ?


ಯಾಕಂದರೆ ಒಂದನ್ನೂ ಮರೆಮಾಡದೆ ದೇವರ ಸಂಕಲ್ಪವನ್ನೆಲ್ಲಾ ನಿಮಗೆ ತಿಳಿಸಿದೆನು.


ನಾನು ನಿಮಗೆ ಹಿತಕರವಾದದ್ದೆಲ್ಲವನ್ನು ಹೇಳುವದಕ್ಕೂ ಸಭೆಯಲ್ಲಿಯೂ ಮನೆಮನೆಯಲ್ಲಿಯೂ ಉಪದೇಶಿಸುವದಕ್ಕೂ ಹಿಂತೆಗಿಯದೆ


ದೇವರು ತೇಮಾನಿನಿಂದ ಬರುತ್ತಾನೆ, ಸದಮಲಸ್ವಾವಿುಯು ಪಾರಾನ್ ಪರ್ವತದಿಂದ ಐತರುತ್ತಾನೆ; ಸೆಲಾ. ಆತನ ಪ್ರಭಾವವು ಆಕಾಶಮಂಡಲವನ್ನು ಆವರಿಸುತ್ತಿದೆ, ಆತನ ಮಹಿಮೆಯು ಭೂಮಂಡಲವನ್ನು ತುಂಬುತ್ತಿದೆ;


ನನ್ನ ದೇವರಾದ ಯೆಹೋವನೇ, ನನ್ನ ಸದಮಲಸ್ವಾವಿುಯೇ, ನೀನು ಅನಾದಿಯಿಂದಿದ್ದೀಯಲ್ಲಾ; ನಾವು ಸಾಯೆವು. ಯೆಹೋವನೇ, [ನಮ್ಮ] ನ್ಯಾಯತೀರ್ಪಿಗಾಗಿ ಅವರನ್ನು ನೇವಿುಸಿದ್ದೀ; ಶರಣನೇ, [ನಮ್ಮ] ಶಿಕ್ಷೆಗಾಗಿ ಅವರನ್ನು ನಿಲ್ಲಿಸಿದ್ದೀ.


ನನ್ನ ಉಗ್ರಕೋಪವನ್ನು ತೀರಿಸೆನು, ಎಫ್ರಾಯೀಮನ್ನು ನಾಶಮಾಡಲು ತಿರಿಗಿಕೊಳ್ಳೆನು; ನಾನು ಮನುಷ್ಯನಲ್ಲ, ದೇವರೇ; ನಾನು ನಿಮ್ಮಲ್ಲಿ ನೆಲೆಯಾಗಿರುವ ಸದಮಲಸ್ವಾವಿು, ನಾನು ರೋಷದಿಂದ ಬಾರೆನು.


ನನ್ನ ತುಟಿಗಳು ನಿನ್ನ ವಿಧಿವಚನಗಳನ್ನೆಲ್ಲಾ ವರ್ಣಿಸುತ್ತವೆ.


ನೀತಿವಂತನ ಬಾಯಿಯು ಸುಜ್ಞಾನವನ್ನು ನುಡಿಯುತ್ತದೆ; ಅವನ ನಾಲಿಗೆ ನ್ಯಾಯವನ್ನೇ ಹೇಳುತ್ತದೆ.


ಆತನ ಬಾಯಿಂದಲೇ ಬೋಧನೆಯನ್ನು ಸ್ವೀಕರಿಸಿ ಆತನ ಮಾತುಗಳನ್ನು ಹೃದಯದಲ್ಲಿ ಇಟ್ಟುಕೋ.


ಆ ತಗ್ಗಿನ ಪ್ರದೇಶದ ಹೆಂಟೆಗಳು ಅವನಿಗೆ ಒಪ್ಪಿತವಾಗಿರುವವು. ಅವನಿಗಿಂತ ಹಿಂದೆ ಲೆಕ್ಕವಿಲ್ಲದಷ್ಟು ಜನರು ಹೀಗೆಯೇ ಇದ್ದರು, ಇನ್ನು ಮುಂದೆ ಸಮಸ್ತರೂ ಹೀಗೆಯೇ ಅವನನ್ನು ಹಿಂಬಾಲಿಸುವರು.


ದೇವರ ಹೃದಯವು ವಿವೇಕವುಳ್ಳದ್ದು, ಆತನ ಶಕ್ತಿಯು ಪ್ರಬಲವಾದದ್ದು; ಆತನಿಗೆ ವಿರುದ್ಧವಾಗಿ ಮನಸ್ಸು ಕಠಿಣಮಾಡಿಕೊಂಡವನು ಸಾರ್ಥಕನಾದದ್ದುಂಟೇ?


ಸಮಾಧಿಗೆ ಸೇರುವಾಗ ಬಹಳವಾಗಿ ಹರ್ಷಿಸಿ ಉಲ್ಲಾಸಪಡುತ್ತಾರೆ.


ಯೆಹೋವನಂಥ ಪರಿಶುದ್ಧನು ಇಲ್ಲವೇ ಇಲ್ಲ; ನಿನ್ನ ಹೊರತು ದೇವರು ಯಾರು? ನಮ್ಮ ದೇವರೇ ಅಸಮಾನವಾದ ಆಶ್ರಯದುರ್ಗವು.


ಯೆಹೋವನು ಅಂಥವನನ್ನು ಎಂದಿಗೂ ಕ್ಷವಿುಸದೆ ಬಹಳ ಸಿಟ್ಟುಮಾಡಿಕೊಂಡು ತನ್ನ ಗೌರವವನ್ನು ಕಾಪಾಡಿಕೊಳ್ಳುವವನಾಗಿ ಈ ಗ್ರಂಥದಲ್ಲಿ ಬರೆದಿರುವ ಎಲ್ಲಾ ಶಾಪೋಕ್ತಿಗಳಿಗೂ ಅವನನ್ನು ಗುರಿಪಡಿಸಿ ಅವನ ಹೆಸರನ್ನು ಭೂವಿುಯ ಮೇಲೆ ಇಲ್ಲದಂತೆ ಮಾಡುವನು.


ನನ್ನ ಬೋಧೆಯು ನಿರ್ಮಲವಾದದ್ದು, ದೇವದೃಷ್ಟಿಯಲ್ಲಿ ಶುದ್ಧನಾಗಿದ್ದೇನೆ ಎಂದು ನೀನು ಹೇಳಿದ್ದೀಯಲ್ಲಾ.


ದೇವರ ಆದರಣೆಗಳೂ ನಿನಗೆ ದೊರೆತ ಶಾಂತಿಯ ಮಾತುಗಳೂ ಸಾಲವೋ?


ಆತನ ಹೆಜ್ಜೆಯ ಜಾಡಿನಲ್ಲೇ ಕಾಲಿಟ್ಟಿದ್ದೇನೆ, ಓರೆಯಾಗದೆ ಆತನ ದಾರಿಯನ್ನೇ ಹಿಡಿದಿದ್ದೇನೆ.


ನಿನ್ನ ನುಡಿಯು ನನ್ನನ್ನು ಚೈತನ್ಯಗೊಳಿಸುತ್ತದೆ; ಆಪತ್ಕಾಲದಲ್ಲಿ ಇದೇ ನನಗೆ ಆದರಣೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು