Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 6:24 - ಕನ್ನಡ ಸತ್ಯವೇದವು J.V. (BSI)

24 ನನಗೆ ಉಪದೇಶಮಾಡಿ ನನ್ನ ತಪ್ಪನ್ನು ನನಗೆ ತಿಳಿಯಪಡಿಸಿರಿ, ನಾನು ಮೌನದಿಂದಿರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ನನಗೆ ಉಪದೇಶಮಾಡಿ ನನ್ನ ತಪ್ಪನ್ನು ನನಗೆ ತಿಳಿಯಪಡಿಸಿರಿ, ನಾನು ಮೌನದಿಂದಿರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ನಾನು ಮಾಡಿದ ತಪ್ಪೇನೆಂಬುದನು ತಿಳಿಸಿರಿ ನನಗೆ ನಾನು ಮೌನದಿಂದಿರುವೆನು, ಉಪದೇಶಮಾಡಿರಿ ನನಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 “ಈಗ ನನಗೆ ಉಪದೇಶಿಸಿ ನನ್ನ ತಪ್ಪನ್ನು ತಿಳಿಸಿರಿ; ನಾನು ಮೌನವಾಗಿರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 “ನನಗೆ ಬೋಧಿಸಿರಿ, ನಾನು ಮೌನವಾಗಿರುವೆನು; ನಾನು ಮಾಡಿದ ತಪ್ಪನ್ನು ನನಗೆ ತಿಳಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 6:24
17 ತಿಳಿವುಗಳ ಹೋಲಿಕೆ  

ಅನೇಕ ವಿಷಯಗಳಲ್ಲಿ ನಾವೆಲ್ಲರೂ ತಪ್ಪುವದುಂಟು. ಒಬ್ಬನು ಮಾತಿನಲ್ಲಿ ತಪ್ಪದಿದ್ದರೆ ಅವನು ಶಿಕ್ಷಿತನೂ ತನ್ನ ದೇಹವನ್ನೆಲ್ಲಾ ಸ್ವಾಧೀನಪಡಿಸಿಕೊಳ್ಳುವದಕ್ಕೆ ಸಮರ್ಥನೂ ಆಗಿದ್ದಾನೆ.


ಜ್ಞಾನಿಗೆ ಉಪದೇಶಿಸಿದರೆ ಹೆಚ್ಚು ಜ್ಞಾನವನ್ನು ಹೊಂದುವನು, ನೀತಿವಂತನಿಗೆ ಬೋಧಿಸಿದರೆ ಹೆಚ್ಚು ತಿಳುವಳಿಕೆಯನ್ನು ಪಡೆಯುವನು.


ನಾನು ದೇವರ ಮುಂದೆ - ನನ್ನನ್ನು ಅಪರಾಧಿಯೆಂದು ನಿರ್ಣಯಿಸಬೇಡ, ನನ್ನೊಡನೆ ಏಕೆ ವ್ಯಾಜ್ಯವಾಡುತ್ತೀ ತಿಳಿಸು ಅನ್ನುವೆನು.


[ಯೆಹೋವನು] - ನಿನ್ನನ್ನು ಉಪದೇಶಿಸಿ ನಡೆಯಬೇಕಾದ ಮಾರ್ಗವನ್ನು ತಿಳಿಸುವೆನು; ನಿನ್ನನ್ನು ಕಟಾಕ್ಷಿಸಿ ಆಲೋಚನೆ ಹೇಳುವೆನು [ಅನ್ನುತ್ತಾನಲ್ಲಾ].


ತನ್ನ ತಪ್ಪುಗಳನ್ನೆಲ್ಲಾ ತಿಳಿದುಕೊಳ್ಳುವವನು ಯಾವನು? ಮರೆಯಾದವುಗಳಿಂದ ನನ್ನನ್ನು ನಿರ್ಮಲಮಾಡು.


ನಾನು ಕಾಣದಿರುವದನ್ನು ನೀನೇ ಸೂಚಿಸು; ನಾನು ಒಂದು ವೇಳೆ ಅನ್ಯಾಯವನ್ನು ಮಾಡಿದ್ದರೂ ಇನ್ನು ಮಾಡುವದಿಲ್ಲ ಎಂದು ಹೇಳುವದಕ್ಕಾದೀತೇ?


ಅದಿರಲಿ; ಯೋಬನೇ, ನನ್ನ ನುಡಿಯನ್ನು ಕೇಳು, ನನ್ನ ಮಾತುಗಳಿಗೆಲ್ಲಾ ಕಿವಿಗೊಡು,


ಇಗೋ, ಇದನ್ನು ವಿಚಾರಿಸಿದ್ದೇವೆ, ಯಥಾರ್ಥವಾಗಿಯೇ ಇದೆ; ಇದನ್ನು ಕೇಳು, ನಿನ್ನಷ್ಟಕ್ಕೆ ನೀನೇ ತಿಳಿದುಕೋ.


ಕೇಳುವ ಕಿವಿಗೆ ಮುಟ್ಟುವ ಬುದ್ಧಿವಾದವು ಹೊನ್ನಿನ ಮುರುವಿಗೂ ಅಪರಂಜಿಯ ಆಭರಣಕ್ಕೂ ಸಮಾನ.


ಇಗೋ, ನೀವು ಆಡುತ್ತಿದ್ದ ಮಾತುಗಳನ್ನು ಕಾದು ಕೇಳುತ್ತಿದ್ದೆನು; ಏನು ಹೇಳಬೇಕೆಂದು ನೀವು ಆಲೋಚಿಸುತ್ತಿದ್ದಾಗ ನಿಮ್ಮ ನ್ಯಾಯಗಳಿಗಾಗಿ ಕಿವಿಗೊಟ್ಟಿದ್ದೆನು;


ನನ್ನ ಪ್ರಿಯ ಸಹೋದರರೇ, ನೀವು ಬಲ್ಲವರು. ಆದರೆ ಪ್ರತಿಯೊಬ್ಬನು ಕಿವಿಗೊಡುವದರಲ್ಲಿ ತೀವ್ರವಾಗಿಯೂ ಮಾತಾಡುವದರಲ್ಲಿ ನಿಧಾನವಾಗಿಯೂ ಇರಲಿ. ಕೋಪಿಸುವದರಲ್ಲಿಯೂ ನಿಧಾನವಾಗಿರಲಿ;


ವಿರೋಧಿಯ ಕೈಯಿಂದ ನನ್ನನ್ನು ರಕ್ಷಿಸಿರಿ ಎಂದು ಕೇಳಿಕೊಂಡೆನೋ? ಬಲಾತ್ಕರಿಸುವವರಿಂದ ನನ್ನನ್ನು ವಿಮೋಚಿಸಿರಿ ಎಂದು ಬೇಡಿಕೊಂಡೆನೋ?


ನೀತಿಯ ನುಡಿಗಳು ಎಷ್ಟೋ ಖಂಡಿತವಾಗಿವೆ, ಆದರೆ ನಿಮ್ಮ ಖಂಡನೆಯು ಖಂಡಿಸುವದೇನು?


ನನ್ನ ಪಾಪದೋಷಗಳೆಷ್ಟು? ನನ್ನ ಪಾಪವನ್ನೂ ದ್ರೋಹವನ್ನೂ ನನಗೆ ತಿಳಿಯಪಡಿಸು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು