Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 6:8 - ಕನ್ನಡ ಸತ್ಯವೇದವು J.V. (BSI)

8 ಅಯ್ಯೋ, ನನ್ನ ವಿಜ್ಞಾಪನೆಯು ನೆರವೇರುವದಿಲ್ಲವೇ, ನಾನು ಬಯಸುವದನ್ನು ದೇವರು ಕೊಡುವದಿಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅಯ್ಯೋ, ನನ್ನ ವಿಜ್ಞಾಪನೆಯು ನೆರವೇರುವುದಿಲ್ಲವೇ, ನಾನು ಬಯಸುವುದನ್ನು ದೇವರು ಕೊಡುವುದಿಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಅಯ್ಯೋ, ನನ್ನ ವಿಜ್ಞಾಪನೆ ನೆರವೇರುವುದಿಲ್ಲವೇಕೆ? ದೇವರು ನನ್ನ ಕೋರಿಕೆಯನ್ನು ಈಡೇರಿಸುವುದಿಲ್ಲವೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 “ಅಯ್ಯೋ! ನಾನು ಕೇಳಿಕೊಂಡದ್ದು ನನಗೆ ದೊರೆಯುವುದಿಲ್ಲವೇ? ನಾನು ಬಯಸಿದ್ದನ್ನು ದೇವರು ನನಗೆ ಕೊಡುವುದಿಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 “ದೇವರು ನನ್ನ ವಿಜ್ಞಾಪನೆಯನ್ನು ಲಾಲಿಸಿದರೆ ಸಾಕು, ನಾನು ನಿರೀಕ್ಷಿಸಿದ್ದನ್ನು ದೇವರು ಕೊಟ್ಟರೆ ಲೇಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 6:8
10 ತಿಳಿವುಗಳ ಹೋಲಿಕೆ  

ನಿನ್ನ ರಕ್ಷಣೆಯ ಬಯಕೆಯಿಂದಲೇ ನನ್ನ ಮನವು ಬಲಗುಂದಿತು; ನಾನು ನಿನ್ನ ವಾಕ್ಯದಲ್ಲೇ ನಿರೀಕ್ಷೆಯುಳ್ಳವನಾಗಿದ್ದೇನೆ.


ಇಂಥಾ ಆಹಾರವು ನನಗೆ ಅಸಹ್ಯವಾಗಿದೆ; ಮುಟ್ಟಲಾರೆನು.


ಆತನು ದಯಮಾಡಿ ತನ್ನ ಕೈ ಜಾಡಿಸಿ ನನ್ನನ್ನು ಜಜ್ಜಿ ಸಂಹರಿಸಿದರೆ


ಈಗ, ಯೆಹೋವನೇ, ನನ್ನ ಪ್ರಾಣವನ್ನು ತೆಗೆ; ನಾನು ಬದುಕುವದಕ್ಕಿಂತ ಸಾಯುವದೇ ಲೇಸು ಎಂದು ವಿಜ್ಞಾಪಿಸಿಕೊಂಡನು.


ತರುವಾಯ ತಾನೊಬ್ಬನಾಗಿ ಅರಣ್ಯದೊಳಗೆ ಒಂದು ದಿವಸದ ಪ್ರಯಾಣದಷ್ಟು ದೂರ ಹೋಗಿ ಒಂದು ಜಾಲೀಗಿಡದ ಕೆಳಗೆ ಕೂತುಕೊಂಡು ಮರಣವನ್ನು ಅಪೇಕ್ಷಿಸಿದನು. ಅವನು - ಯೆಹೋವನೇ, ನನಗೆ ಸಾಕಾಯಿತು; ನನ್ನ ಪ್ರಾಣವನ್ನು ತೆಗೆದುಬಿಡು; ನಾನು ನನ್ನ ಪಿತೃಗಳಿಗಿಂತ ಉತ್ತಮನಲ್ಲ ಎಂದು ದೇವರನ್ನು ಪ್ರಾರ್ಥಿಸಿ


ಅವರು ನಿಕ್ಷೇಪಕ್ಕಾಗಿ ಅಗೆಯುವ ಆಶೆಗಿಂತಲೂ ಹೆಚ್ಚಾದ ಆಶೆಯಿಂದ ಮರಣವನ್ನು ಹಾರೈಸಿ ಹುಡುಕಿದರೂ ಅದು ದೊರೆಯದು.


ಸಮಾಧಿಗೆ ಸೇರುವಾಗ ಬಹಳವಾಗಿ ಹರ್ಷಿಸಿ ಉಲ್ಲಾಸಪಡುತ್ತಾರೆ.


ನನ್ನ ಜೀವವೇ ನನಗೆ ಬೇಸರವಾಗಿದೆ. ಎದೆಬಿಚ್ಚಿ ಮೊರೆಯಿಡುವೆನು; ಮನೋವ್ಯಥೆಯಿಂದ ನುಡಿಯುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು