Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 6:9 - ಕನ್ನಡ ಸತ್ಯವೇದವು J.V. (BSI)

9 ಆತನು ದಯಮಾಡಿ ತನ್ನ ಕೈ ಜಾಡಿಸಿ ನನ್ನನ್ನು ಜಜ್ಜಿ ಸಂಹರಿಸಿದರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನಾನು ನಾಶವಾಗುವುದು ದೇವರಿಗೆ ಮೆಚ್ಚಿಕೆಯಾಗುವುದಾದರೆ, ತನ್ನ ಕೈ ಚಾಚಿ ನನ್ನನ್ನು ಸಂಹರಿಸಿದರೆ ಒಳ್ಳೆಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ದೇವರು ನನ್ನನ್ನು ನಸುಕಿಬಿಡಬಾರದೆ? ತನ್ನ ಕೈಯನ್ನು ಚಾಚಿ ಸಂಹರಿಸಿಬಿಡಬಾರದೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ನನ್ನನ್ನು ಜಜ್ಜಿಹಾಕಲು ದೇವರು ಇಚ್ಫಿಸುವುದಾಗಿದ್ದರೆ, ಆತನು ನನ್ನನ್ನು ಕೊಲ್ಲಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ನನ್ನನ್ನು ಜಜ್ಜುವುದು ದೇವರಿಗೆ ಮೆಚ್ಚಿಗೆಯಾದರೆ, ದೇವರು ತಮ್ಮ ಕೈಚಾಚಿ ನನ್ನ ಪ್ರಾಣವನ್ನು ತೆಗೆದುಕೊಳ್ಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 6:9
16 ತಿಳಿವುಗಳ ಹೋಲಿಕೆ  

ತರುವಾಯ ತಾನೊಬ್ಬನಾಗಿ ಅರಣ್ಯದೊಳಗೆ ಒಂದು ದಿವಸದ ಪ್ರಯಾಣದಷ್ಟು ದೂರ ಹೋಗಿ ಒಂದು ಜಾಲೀಗಿಡದ ಕೆಳಗೆ ಕೂತುಕೊಂಡು ಮರಣವನ್ನು ಅಪೇಕ್ಷಿಸಿದನು. ಅವನು - ಯೆಹೋವನೇ, ನನಗೆ ಸಾಕಾಯಿತು; ನನ್ನ ಪ್ರಾಣವನ್ನು ತೆಗೆದುಬಿಡು; ನಾನು ನನ್ನ ಪಿತೃಗಳಿಗಿಂತ ಉತ್ತಮನಲ್ಲ ಎಂದು ದೇವರನ್ನು ಪ್ರಾರ್ಥಿಸಿ


ಈಗ, ಯೆಹೋವನೇ, ನನ್ನ ಪ್ರಾಣವನ್ನು ತೆಗೆ; ನಾನು ಬದುಕುವದಕ್ಕಿಂತ ಸಾಯುವದೇ ಲೇಸು ಎಂದು ವಿಜ್ಞಾಪಿಸಿಕೊಂಡನು.


ಸೂರ್ಯನು ಹುಟ್ಟಿದಾಗ ದೇವರು ಬಿಸಿಯಾದ ಮೂಡಣ ಗಾಳಿಯನ್ನು ಏರ್ಪಡಿಸಿದನು; ಬಿಸಿಲು ಯೋನನ ತಲೆಗೆ ಹೊಡೆಯಲು ಅವನು ಮೂರ್ಛೆ ಹೋಗುವವನಾಗಿ ನಾನು ಬದುಕುವದಕ್ಕಿಂತ ಸಾಯುವದೇ ಲೇಸು ಎಂದು ಮರಣವನ್ನು ಕೇಳಿಕೊಂಡನು.


ಆ ಕಾಲದಲ್ಲಿ ಮನುಷ್ಯರು ಮರಣವನ್ನು ಬಯಸುವರು, ಆದರೆ ಅದು ಪ್ರಾಪ್ತವಾಗುವದಿಲ್ಲ; ಸಾಯಬೇಕೆಂದು ಕೋರುವರು, ಆದರೆ ಮೃತ್ಯುವು ಅವರ ಬಳಿಯಿಂದ ಓಡಿಹೋಗುವದು.


ಹಗಲಿರುಳು ನಿನ್ನ ಶಿಕ್ಷಾಹಸ್ತವು ನನ್ನ ಮೇಲೆ ಭಾರವಾಗಿತ್ತು; ಬೇಸಿಗೆಯ ನೀರಿನಂತೆ ನನ್ನ ಶರೀರದ ಸಾರವೆಲ್ಲಾ ಬತ್ತಿಹೋಯಿತು. ಸೆಲಾ.


ನನ್ನ ವಿುತ್ರರೇ, ಕರುಣಿಸಿರಿ, ನೀವಾದರೂ ಕರುಣಿಸಿರಿ! ದೇವರ ಕೈ ನನ್ನನ್ನು ಹೊಡೆಯಿತಲ್ಲಾ.


ನೀನು ನನ್ನನ್ನು ಪಾತಾಳದಲ್ಲಿ ಬಚ್ಚಿಟ್ಟು ನಿನ್ನ ಕೋಪವು ಇಳಿಯುವ ಪರ್ಯಂತ ನನ್ನನ್ನು ಮರೆಮಾಡಿ ನನಗೆ ಅವಧಿಯನ್ನು ಗೊತ್ತುಮಾಡಿ [ಕಡೆಯಲ್ಲಿ] ನನ್ನನ್ನು ಜ್ಞಾಪಿಸಿಕೊಂಡರೆ ಎಷ್ಟೋ ಒಳ್ಳೇದು!


ಅಯ್ಯೋ, ನನ್ನ ವಿಜ್ಞಾಪನೆಯು ನೆರವೇರುವದಿಲ್ಲವೇ, ನಾನು ಬಯಸುವದನ್ನು ದೇವರು ಕೊಡುವದಿಲ್ಲವೇ?


ನಾನು ನಿರ್ದೋಷಿಯೇ ಹೌದು; ನನ್ನ ವಿಷಯದಲ್ಲಿ ನನಗೇನೂ ಚಿಂತೆಯಿಲ್ಲ; ನನ್ನ ಪ್ರಾಣವನ್ನು ತೃಣೀಕರಿಸುತ್ತೇನೆ.


ನನ್ನ ಜೀವವೇ ನನಗೆ ಬೇಸರವಾಗಿದೆ. ಎದೆಬಿಚ್ಚಿ ಮೊರೆಯಿಡುವೆನು; ಮನೋವ್ಯಥೆಯಿಂದ ನುಡಿಯುವೆನು.


ಆದರೆ ದುಷ್ಟರು ನಿರಾಶ್ರಯರಾಗಿ ಕಂಗೆಡುವರು, ಪ್ರಾಣಬಿಡಬೇಕೆಂಬದೇ ಅವರ ಆಶೆ.


ನನ್ನ ಆಶ್ರಯವು ಕುರುಬನ ಗುಡಾರದಂತೆ ಕಿತ್ತು ನನ್ನ ಕಡೆಯಿಂದ ಒಯ್ಯಲ್ಪಟ್ಟಿದೆ; ಆತನು ನನ್ನ ಆಯುಷ್ಯದ ಹಾಸನ್ನು ಕತ್ತರಿಸಿದ್ದರಿಂದ ನೆಯಿಗೆಯವನಂತೆ ನನ್ನ ಜೀವಮಾನವನ್ನು ಸುತ್ತಿಬಿಟ್ಟಿದ್ದೇನೆ; ಉದಯದಿಂದ ಅಸ್ತಮಾನದೊಳಗೇ ನನ್ನನ್ನು ತೀರಿಸುತ್ತೀ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು