Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 7:18 - ಕನ್ನಡ ಸತ್ಯವೇದವು J.V. (BSI)

18 ದಿನಂಪ್ರತಿಯೂ ಅವನ ಮೇಲೆ ಲಕ್ಷ್ಯವಿಟ್ಟು ಕ್ಷಣಕ್ಷಣಕ್ಕೂ ಅವನನ್ನು ಪರಿಶೋಧಿಸುವದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ದಿನಂಪ್ರತಿ ಅವನ ಮೇಲೆ ಲಕ್ಷ್ಯವಿಟ್ಟು, ಕ್ಷಣಕ್ಷಣಕ್ಕೂ ಅವನನ್ನು ಪರಿಶೋಧಿಸುವುದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ದಿನ ಬಿಡದೆ ಅವನನ್ನು ಸಂದರ್ಶಿಸಲು; ಕ್ಷಣಕ್ಷಣಕ್ಕೂ ಅವನನ್ನು ಪರೀಕ್ಷಿಸಲು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ನೀನು ಪ್ರತಿ ಮುಂಜಾನೆ ಮನುಷ್ಯನನ್ನು ಪರೀಕ್ಷಿಸುವುದೇಕೆ? ಅವನನ್ನು ಪ್ರತಿಗಳಿಗೆಯಲ್ಲೂ ಪರೀಕ್ಷಿಸುವುದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಮನುಷ್ಯನನ್ನು ಪ್ರತಿ ಉದಯದಲ್ಲಿ ವಿಚಾರಿಸುತ್ತೀರಿ, ನೀವು ಕ್ಷಣಕ್ಷಣಕ್ಕೆ ಅವನನ್ನು ಪರೀಕ್ಷಿಸುವುದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 7:18
14 ತಿಳಿವುಗಳ ಹೋಲಿಕೆ  

ಬಂಗಾರವು ನಾಶವಾಗುವಂಥದಾಗಿದ್ದರೂ ಅದನ್ನು ಬೆಂಕಿಯಲ್ಲಿ ಪುಟಾಹಾಕಿ ಶೋಧಿಸುವದುಂಟಷ್ಟೆ. ಬಂಗಾರಕ್ಕಿಂತ ಅಮೂಲ್ಯವಾಗಿರುವ ನಿಮ್ಮ ನಂಬಿಕೆಯು ಈ ಕಷ್ಟಗಳಿಂದ ಶೋಧಿತವಾಗಿ ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ಕೀರ್ತಿ ಪ್ರಭಾವ ಮಾನಗಳನ್ನು ಉಂಟುಮಾಡುವದು.


ಹೀಗಿರಲು ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ - ಆಹಾ, ನಾನು ನನ್ನ ಜನರ ದ್ರೋಹಕ್ಕೆ ಏನು ಮಾಡಲಿ? ಅವರನ್ನು ಪುಟಕ್ಕೆ ಹಾಕಿ ಶೋಧಿಸುವೆನು.


ಆ ಮೂರನೆಯ ಭಾಗದವರನ್ನು ನಾನು ಬೆಂಕಿಗೆ ಹಾಕಿ ಬೆಳ್ಳಿಯಂತೆ ಶೋಧಿಸುವೆನು, ಬಂಗಾರದ ಹಾಗೆ ಶುದ್ಧಿಮಾಡುವೆನು; ಅವರು ನನ್ನ ಹೆಸರೆತ್ತಿ ಪ್ರಾರ್ಥಿಸುವರು, ನಾನು ಆಲಿಸುವೆನು; ನಾನು - ಇವರು ನನ್ನ ಜನರು ಅಂದುಕೊಳ್ಳುವೆನು, ಅವರು - ನಮ್ಮ ದೇವರಾದ ಯೆಹೋವನೇ ಅನ್ನುವರು.


ಅನೇಕರು ತಮ್ಮನ್ನು ಶುದ್ಧೀಕರಿಸಿ ಶುಭ್ರಮಾಡಿಕೊಂಡು ಶೋಧಿತರಾಗುವರು; ದುಷ್ಟರು ದುಷ್ಟರಾಗಿಯೇ ನಡೆಯುವರು, ಅವರಲ್ಲಿ ಯಾರಿಗೂ ವಿವೇಕವಿರದು; ಜ್ಞಾನಿಗಳಿಗೆ ವಿವೇಕವಿರುವದು.


ನೀನು ಆ ಒಡೆಯರ ಮೇಲೆ ಕೈಮಾಡಿ ನಿರ್ಮೂಲಪಡಿಸಿ ಅವರ ಜ್ಞಾಪಕವನ್ನು ಅಳಿಸಿಬಿಟ್ಟಿದ್ದೀ; ಸತ್ತವರು ಪುನಃ ಬದುಕುವದಿಲ್ಲ, ಪ್ರೇತಗಳು ಎದ್ದು ಬರುವದಿಲ್ಲವಲ್ಲಾ.


ನೀನು ಇಂಥವನಾದ ನನ್ನ ಮೇಲೆ ಕಣ್ಣಿಟ್ಟು ನಿನ್ನ ನ್ಯಾಯಸ್ಥಾನಕ್ಕೆ ನನ್ನನ್ನು ಬರಮಾಡುವಿಯಾ?


ನೀನು ಇಲ್ಲಿಂದ ಹೊರಟು ನಾನು ನಿನಗೆ ಹೇಳಿದ ದೇಶಕ್ಕೆ ಈ ಜನರನ್ನು ನಡಿಸಿಕೊಂಡು ಹೋಗು. ನನ್ನ ದೂತನು ನಿನ್ನ ಮುಂದುಗಡೆಯಲ್ಲಿ ನಡೆಯುವನು. ಆದರೂ ನಾನು ಅವರನ್ನು ಶಿಕ್ಷಿಸುವಾಗ ಅವರ ಪಾಪಕ್ಕೆ ತಕ್ಕಂತೆ ಶಿಕ್ಷಿಸುವೆನು.


ಅವುಗಳಿಗೆ ಅಡ್ಡಬೀಳಲೂ ಬಾರದು ಪೂಜೆಮಾಡಲೂ ಬಾರದು. ನಿನ್ನ ದೇವರಾದ ಯೆಹೋವನೆಂಬ ನಾನು ನನಗೆ ಸಲ್ಲತಕ್ಕ ಗೌರವವನ್ನು ಮತ್ತೊಬ್ಬನಿಗೆ ಸಲ್ಲಗೊಡಿಸದವನಾದದರಿಂದ ನನ್ನನ್ನು ದ್ವೇಷಿಸುವವರ ವಿಷಯದಲ್ಲಿ ತಂದೆಗಳ ದೋಷಫಲವನ್ನು ಮಕ್ಕಳ ಮೇಲೆ ಮೂರು ನಾಲ್ಕು ತಲೆಗಳವರೆಗೆ ಬರಮಾಡುವವನಾಗಿಯೂ


ಈ ಸಂಗತಿಗಳು ಆದ ಮೇಲೆ ದೇವರು ಅಬ್ರಹಾಮನನ್ನು ಪರಿಶೋಧಿಸಿದನು. ಹೇಗಂದರೆ ಆತನು ಅವನನ್ನು - ಅಬ್ರಹಾಮನೇ ಎಂದು ಕರೆಯಲು ಅವನು - ಇಗೋ, ಇದ್ದೇನೆ ಅಂದನು.


ಆತನಾದರೋ ನನ್ನ ದಾರಿಯನ್ನು ಬಲ್ಲನು, ಆತನೇ ನನ್ನನ್ನು ಶೋಧಿಸಿ ನೋಡಿದರೆ ಚೊಕ್ಕ ಬಂಗಾರವಾಗಿ ಕಾಣಿಸುವೆನು.


ಅದರ ಮಧ್ಯೆ ನೆಲೆಗೊಂಡಿರುವ ಯೆಹೋವನು ನ್ಯಾಯಸ್ವರೂಪನು; ಎಂದಿಗೂ ಅನ್ಯಾಯವನ್ನು ಮಾಡನು; ಬೆಳಬೆಳಿಗ್ಗೆ ತನ್ನ ನ್ಯಾಯವನ್ನು ತಪ್ಪದೆ ಪ್ರಕಾಶಗೊಳಿಸುವನು; ಅನ್ಯಾಯಗಾರನೋ ನಾಚಿಕೆಪಡನು.


ನಾನು ಯಾವಾಗಲೂ ವ್ಯಾಧಿಪೀಡಿತನಾಗಿದ್ದು ಪ್ರತಿದಿನವೂ ದಂಡಿಸಲ್ಪಡುತ್ತಾ ಇದ್ದೇನಲ್ಲಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು