Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 7:2 - ಕನ್ನಡ ಸತ್ಯವೇದವು J.V. (BSI)

2 ನಾನು ಸಂಜೆಯನ್ನು ಬಯಸುವ ದಾಸನಂತೆಯೂ ಕೂಲಿಯನ್ನು ನಿರೀಕ್ಷಿಸುವ ಆಳಿನಂತೆಯೂ ಇದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನಾನು ಸಂಜೆಯನ್ನು ಬಯಸುವ ದಾಸನಂತೆಯೂ, ಕೂಲಿಯನ್ನು ನಿರೀಕ್ಷಿಸುವ ಆಳಿನಂತೆಯೂ ಇದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ನಾನಿರುವೆ ಸಂಜೆಯನು ಬಯಸುವ ದಾಸನಂತೆ ಕೂಲಿಯನು ನಿರೀಕ್ಷಿಸುವ ಕೂಲಿಯಾಳಿನಂತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಮನುಷ್ಯನು ಉರಿಬಿಸಿಲಿನಲ್ಲಿ ಪ್ರಯಾಸಪಟ್ಟು ದುಡಿದ ಮೇಲೆ ತಂಪಾದ ನೆರಳನ್ನು ಬಯಸುವ ಗುಲಾಮನಂತಿದ್ದಾನೆ. ಮನುಷ್ಯನು, ದಿನದ ಕೂಲಿಗಾಗಿ ಕಾಯುತ್ತಿರುವ ಕೂಲಿಯವನಂತಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಗುಲಾಮನು ಸಾಯಂಕಾಲದ ನೆರಳನ್ನು ಅಪೇಕ್ಷಿಸುವ ಪ್ರಕಾರವೂ, ನಾನು ಕೂಲಿಯವನು ತನ್ನ ಕೂಲಿಯನ್ನು ಕೋರುವ ಪ್ರಕಾರವೂ ಇದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 7:2
11 ತಿಳಿವುಗಳ ಹೋಲಿಕೆ  

ಮತ್ತೊಬ್ಬನನ್ನು ಬಲಾತ್ಕರಿಸಬಾರದು; ಅವನ ಸೊತ್ತನ್ನು ಅಪಹರಿಸಬಾರದು. ಕೂಲಿಯವನ ಕೂಲಿಯನ್ನು ಮರುದಿನದವರೆಗೆ ನಿನ್ನ ಬಳಿಯಲ್ಲಿ ಇಟ್ಟುಕೊಳ್ಳಬಾರದು.


ದಿನದ ಕೂಲಿಯನ್ನು ಆ ದಿನದಲ್ಲೇ ಹೊತ್ತು ಮುಣುಗುವದಕ್ಕೆ ಮುಂಚಿತವಾಗಿ ಅವನಿಗೆ ಕೊಡಬೇಕು. ಅವನಿಗೆ ಬೇರೆ ಗತಿಯಿಲ್ಲದ್ದರಿಂದ ಅದನ್ನೇ ಎದುರು ನೋಡುತ್ತಾನಲ್ಲಾ. ನೀವು ಕೊಡದಿದ್ದರೆ ಅವನು ಯೆಹೋವನಿಗೆ ಮೊರೆಯಿಟ್ಟಾನು; ಆಗ ನೀವು ದೋಷಿಗಳಾಗಿ ಕಂಡುಬಂದೀರಿ.


ನಿಮ್ಮ ಹೊಲಗಳನ್ನು ಕೊಯಿದವರ ಕೂಲಿಯನ್ನು ನೀವು ಅನ್ಯಾಯವಾಗಿ ಹಿಡಿದುಕೊಂಡಿದ್ದೀರಿ. ಅಗೋ, ಆ ಕೂಲಿ ನಿಮ್ಮ ಮೇಲೆ ಕೂಗಿಕೊಳ್ಳುತ್ತದೆ; ಮತ್ತು ಕೊಯಿದವರ ಕೂಗು ಸಕಲಸೇನಾಧಿಪತಿಯಾಗಿರುವ ಕರ್ತನ ಕಿವಿಗಳಲ್ಲಿ ಬಿದ್ದಿದೆ.


ನಾನು ನ್ಯಾಯತೀರಿಸುವದಕ್ಕೆ ನಿಮ್ಮ ಬಳಿಗೆ ಬರುವೆನು; ಮಾಟಗಾರ, ಸೂಳೆಗಾರ, ಸುಳ್ಳುಸಾಕ್ಷಿ, ಕೂಲಿಹಿಡಿದು ಕೂಲಿಯವನನ್ನು ಮೋಸಪಡಿಸುವವನು, ವಿಧವೆಯರನ್ನೂ ಅನಾಥರನ್ನೂ ಬಾಧಿಸುವವನು, ವಿದೇಶಿಯ ನ್ಯಾಯತಪ್ಪಿಸುವವನು, ಅಂತು ನನಗಂಜದಿರುವ ಇವರೆಲ್ಲರಿಗೆ ವಿರುದ್ಧವಾಗಿ ನಾನು ಶೀಘ್ರಸಾಕ್ಷಿಯಾಗಿರುವೆನು; ಇದು ಸೇನಾಧೀಶ್ವರ ಯೆಹೋವನ ನುಡಿ.


[ಇವರು] - ಚೀಯೋನಿಗೆ ವಿರುದ್ಧವಾಗಿ ಸನ್ನದ್ಧರಾಗಿರಿ; ಏಳಿರಿ, ಮಧ್ಯಾಹ್ನಕ್ಕೆ ಅದರ ಮೇಲೆ ನುಗ್ಗುವ! ಅಯ್ಯೋ, ಇದೇನು! ನಮಗೆ ಹೊತ್ತು ತಿರುಗಿತಲ್ಲಾ, ಸಂಜೆಯ ನೆರಳುಗಳು ಉದ್ದವಾದವು.


ಕೈಯೊಡ್ಡಿ ಬೇಡುತ್ತೇನೆ; ಒಣನೆಲವು ನೀರಿಗಾಗಿ ಹೇಗೋ ಹಾಗೆಯೇ ನನ್ನ ಆತ್ಮವು ನಿನಗಾಗಿ ತವಕಪಡುತ್ತದೆ. ಸೆಲಾ.


ನಾನು ಬಾಯ್ದೆರೆದು ಏದುತ್ತಿದ್ದೇನೆ; ನಿನ್ನ ಆಜ್ಞೆಗಳನ್ನು ಲವಲವಿಕೆಯಿಂದ ಆಶಿಸುತ್ತೇನೆ.


ಹಮೋರನು ಅವರಿಗೆ - ನನ್ನ ಮಗನಾದ ಶೆಕೆಮನು ನಿಮ್ಮ ಹುಡುಗಿಯನ್ನು ಬಹಳ ಅಪೇಕ್ಷೆಯಿಂದ ಮೋಹಿಸಿದ್ದಾನೆ; ಆಕೆಯನ್ನು ಅವನಿಗೆ ಮದುವೆಮಾಡಿಕೊಡಬೇಕೆಂದು ಕೇಳಿಕೊಳ್ಳುತ್ತೇನೆ.


ಭೂಲೋಕದಲ್ಲಿ ಮನುಷ್ಯನಿಗೆ ದುಡಿಯುವ ವಾಯಿದೆಯುಂಟಲ್ಲವೇ. ಅವನ ದಿನಗಳು ಕೂಲಿಯವನ ದಿನಗಳಂತೆ ಕಳೆಯುತ್ತವೆ.


ಬೇಸರಿಕೆಯ ಮಾಸಗಳೂ ಆಯಾಸದ ರಾತ್ರಿಗಳೂ ನನ್ನ ಪಾಲಿಗೆ ನೇಮಕವಾಗಿವೆ.


ಆಗ ದೇವರಾದ ಯೆಹೋವನು ಯೋನನ ಮೇಲ್ಗಡೆ ಒಂದು ಸೋರೆಗಿಡವು ಹಬ್ಬಿ ಅವನ ತಲೆಗೆ ನೆರಳಾಗಿ ಅವನ ಕರಕರೆಯನ್ನು ತಪ್ಪಿಸುವಂತೆ ಏರ್ಪಡಿಸಿದನು. ಆ ಸೋರೆಗಿಡದಿಂದ ಯೋನನಿಗೆ ಬಹು ಸಂತೋಷವಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು