Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 8:15 - ಕನ್ನಡ ಸತ್ಯವೇದವು J.V. (BSI)

15 ಅವನು ಆ ಮನೆಯನ್ನು ಆತುಕೊಂಡರೆ ಅದು ನಿಲ್ಲುವದಿಲ್ಲ; ಅದನ್ನು ಹಿಡುಕೊಂಡರೆ ಅದು ಸ್ಥಿರವಾಗಿರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಅವನು ಆ ಮನೆಯನ್ನು ಆತುಕೊಂಡರೆ ಅದು ನಿಲ್ಲುವುದಿಲ್ಲ; ಅದನ್ನು ಹಿಡುಕೊಂಡರೆ ಅದು ಸ್ಥಿರವಾಗಿರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಒರಗಿಕೊಂಡರೆ ಆ ಮನೆ ನಿಲ್ಲದು ಹಿಡಿದುಕೊಂಡರೆ ಅದು ಬಿಗಿಯಿರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಅವನು ಜೇಡರಬಲೆಯನ್ನು ಒರಗಿಕೊಳ್ಳುವನು, ಆದರೆ ಬಲೆಯು ಕಿತ್ತುಹೋಗುವುದು. ಅವನು ಜೇಡರಬಲೆಯನ್ನು ಹಿಡಿದುಕೊಳ್ಳುವನು, ಆದರೆ ಅದು ಅವನಿಗೆ ಆಧಾರ ನೀಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಅಂಥಾ ಮನೆ ಮೇಲೆ ಒರಗಿಕೊಂಡರೆ, ಅದು ನಿಲ್ಲದು; ಅದನ್ನು ಬಿಗಿಹಿಡಿದರೆ, ಅದು ತಡೆಯಲಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 8:15
12 ತಿಳಿವುಗಳ ಹೋಲಿಕೆ  

ಅವನು ಕಟ್ಟಿಕೊಂಡ ಮನೆಯು ಜಾಡಹುಳದ ಗೂಡಿನಂತೆಯೂ ಕಾವಲುಗಾರನು ಹಾಕಿಕೊಂಡ ಮಂಚಿಕೆಯಂತೆಯೂ ದುರ್ಬಲವಾಗಿರುವದು.


ಶಿಷ್ಟನ ನಂಬಿಕೆಗೆ ಆನಂದವು ಫಲ; ದುಷ್ಟನ ನಿರೀಕ್ಷೆ ನಿಷ್ಫಲ.


ದುಷ್ಟನು ನೋಡಿ ವ್ಯಥೆಪಡುವನು; ಅವನು ಹಲ್ಲುಕಡಿಯುತ್ತಾ ಲಯಹೊಂದುವನು. ದುಷ್ಟರ ನಿರೀಕ್ಷೆಯು ಭಂಗವಾಗುವದು.


ಯಾರು ವಿಸ್ತಾರವಾದ ಭೂಸ್ಥಿತಿಗಳಿಗೆ ತಮ್ಮ ಹೆಸರುಗಳನ್ನು ಕೊಟ್ಟಿದ್ದಾರೋ ಅಂಥವರಿಗೂ ಸಮಾಧಿಯೇ ಶಾಶ್ವತಮಂದಿರವು; ಅದೇ ಅವರ ನಿತ್ಯನಿವಾಸಸ್ಥಾನ.


ಅವನ ನಿರ್ಭಯದ ಗುಡಾರದಿಂದ ಅವನನ್ನು ಎಳೆದು ಮಹಾಭೀತಿಗಳ ರಾಜನ ಸನ್ನಿಧಿಗೆ ಸಾಗಿಸಿಕೊಂಡು ಹೋಗುವನು.


ನಿನ್ನ ಹಗೆಗಳನ್ನು ಅವಮಾನವು ಮುಸುಕುವದು; ದುಷ್ಟರ ನಿವಾಸವು ನಿರ್ಮೂಲವಾಗುವದು ಅಂದನು.


ದುಷ್ಟರ ಮನೆಗೆ ನಾಶನ; ಶಿಷ್ಟರ ಗುಡಾರಕ್ಕೆ ಏಳಿಗೆ.


ನೀವು ಹೆಚ್ಚಳಪಡುವದು ಶೂನ್ಯವಾದದ್ದರಲ್ಲಿಯೇ ಸ್ವಬಲದಿಂದ ಕೊಂಬುಗಳನ್ನು ಪಡೆದುಕೊಂಡಿದ್ದೇವಲ್ಲಾ ಅಂದುಕೊಳ್ಳುತ್ತೀರಿ.


ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ನನ್ನ ಅಪ್ಪಣೆಯಂತೆ ಇದು ಹೊರಟು ಕಳ್ಳನ ಮನೆಯೊಳಗೂ ನನ್ನ ಹೆಸರೆತ್ತಿ ಸುಳ್ಳುಸಾಕ್ಷಿ ಹೇಳುವವನ ಮನೆಯೊಳಗೂ ನುಗ್ಗಿ ನಟ್ಟನಡುವೆ ನೆಲೆಗೊಂಡು ಅದನ್ನು ಕಲ್ಲುಮರ ಸಹಿತವಾಗಿ ನಾಶಮಾಡುವದು ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು