Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 8:2 - ಕನ್ನಡ ಸತ್ಯವೇದವು J.V. (BSI)

2 ಬಿರುಗಾಳಿಯಂತಿರುವ ಮಾತುಗಳನ್ನಾಡಿ ಇನ್ನೆಷ್ಟರವರೆಗೂ ಹೀಗೆ ನುಡಿಯುತ್ತಿರುವಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ಬಿರುಗಾಳಿಯಂತಿರುವ ಮಾತುಗಳನ್ನಾಡಿ ಇನ್ನೆಷ್ಟರವರೆಗೆ ಹೀಗೆ ನುಡಿಯುತ್ತಿರುವಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 “ಇನ್ನೆಷ್ಟರವರೆಗೆ ಹೀಗೆ ನುಡಿಯುತ್ತಿರುವೆ? ಬಿರುಗಾಳಿಯಂಥ ಮಾತುಗಳನ್ನಾಡುತ್ತಿರುವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 “ಇನ್ನೆಷ್ಟುಕಾಲ ಹೀಗೆ ಮಾತಾಡುವೆ? ನಿನ್ನ ಮಾತುಗಳು ಬೀಸುವ ಬಿರುಗಾಳಿಯಂತಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 “ನೀನು ಎಷ್ಟರವರೆಗೆ ಇವುಗಳನ್ನು ನುಡಿಯುತ್ತಿರುವೆ? ನೀನು ಬಿರುಗಾಳಿಯಂಥ ಮಾತುಗಳನ್ನಾಡುತ್ತಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 8:2
14 ತಿಳಿವುಗಳ ಹೋಲಿಕೆ  

ಜ್ಞಾನಿಯು ತನ್ನ ಹೊಟ್ಟೆಯಲ್ಲಿ ಮೂಡಣ ಗಾಳಿಯನ್ನು ತುಂಬಿಕೊಂಡು ಶೂನ್ಯವಾದ ತಿಳುವಳಿಕೆಯಿಂದ ಮಾತಾಡತಕ್ಕದ್ದೋ?


ಬರೀ ಮಾತುಗಳನ್ನು ಖಂಡಿಸಬೇಕೆನ್ನುವಿರೋ? ದೆಸೆಗೆಟ್ಟವನ ಮಾತುಗಳು ಗಾಳಿಗೆ ಹೋಗತಕ್ಕವುಗಳಲ್ಲವೆ?


ಆಗ ತಿರಿಗಿ - ನೀನು ಹೊರಗೆ ಬಂದು ಬೆಟ್ಟದ ಮೇಲೆ ಯೆಹೋವನ ಮುಂದೆ ನಿಲ್ಲು ಎಂಬ ವಾಣಿಯಾಯಿತು. ಆಹಾ, ಯೆಹೋವನು ಅಲ್ಲಿ ಹಾದುಹೋದನು. ಆತನ ಮುಂದೆ ಪರ್ವತಗಳನ್ನು ಭೇದಿಸಿ ಬಂಡೆಗಳನ್ನು ಪುಡಿಪುಡಿಮಾಡುವಂಥ ದೊಡ್ಡ ಬಿರುಗಾಳಿಯು ಬೀಸಿತು; ಯೆಹೋವನು ಅದರಲ್ಲಿ ಇರಲಿಲ್ಲ. ತರುವಾಯ ಭೂಕಂಪವುಂಟಾಯಿತು; ಅದರಲ್ಲಿಯೂ ಆತನಿರಲಿಲ್ಲ.


ಮೂಢರೇ, ಮೂಢತನವನ್ನು ಎಂದಿನ ತನಕ ಪ್ರೀತಿಸುವಿರಿ? ಧರ್ಮನಿಂದಕರು ನಿಂದಿಸುವದಕ್ಕೆ ಎಷ್ಟು ಕಾಲ ಇಷ್ಟಪಡುವರು? ಜ್ಞಾನಹೀನರು ತಿಳುವಳಿಕೆಯನ್ನು ಎಷ್ಟರವರೆಗೆ ಹಗೆಮಾಡುವರು?


ಇನ್ನೆಷ್ಟರವರೆಗೆ ಮಾತುಗಳನ್ನು ಹಿಡಿಯುವದಕ್ಕೆ ಉರ್ಲೊಡ್ಡುತ್ತಿರುವಿ? ನೀನು ಆಲೋಚಿಸು, ಆಮೇಲೆ ಮಾತಾಡೋಣ.


ಒಣಮಾತುಗಳಿಗೆ ಪಾರವಿಲ್ಲವೋ? ಯಾವ ನೋವಿನಿಂದ ಈ ಉತ್ತರ ಕೊಟ್ಟಿ?


ನಾನಂತೂ ಬಾಯಿಮುಚ್ಚುವದಿಲ್ಲ; ಆತ್ಮವೇದನೆಯಿಂದ ಮಾತಾಡುವೆನು, ಮನೋವ್ಯಥೆಯಿಂದ ಪ್ರಲಾಪಿಸುವೆನು.


ಆತನು ದಯಮಾಡಿ ತನ್ನ ಕೈ ಜಾಡಿಸಿ ನನ್ನನ್ನು ಜಜ್ಜಿ ಸಂಹರಿಸಿದರೆ


ಆಗ ಫರೋಹನ ಪರಿವಾರದವರು ಅವನಿಗೆ - ಈ ಮನುಷ್ಯನು ಇನ್ನು ಎಷ್ಟು ದಿವಸ ನಮಗೆ ಉರುಲಾಗಿರಬೇಕು? ಆ ಜನರು ಹೋಗಿ ತಮ್ಮ ದೇವರಾದ ಯೆಹೋವನನ್ನು ಆರಾಧಿಸುವದಕ್ಕೆ ಅಪ್ಪಣೆಕೊಡು. ಐಗುಪ್ತದೇಶವು ಹಾಳಾಯಿತೆಂದು ಇನ್ನೂ ನಿನ್ನ ಮನಸ್ಸಿಗೆ ಬರಲಿಲ್ಲವೋ ಎಂದು ಹೇಳಿದರು.


ಮೋಶೆ ಆರೋನರು ಫರೋಹನ ಬಳಿಗೆ ಹೋಗಿ ಅವನಿಗೆ - ಇಬ್ರಿಯರ ದೇವರಾಗಿರುವ ಯೆಹೋವನು ಆಜ್ಞಾಪಿಸುವದೇನಂದರೆ - ನೀನು ನನ್ನ ಮುಂದೆ ತಗ್ಗಿಸಿಕೊಳ್ಳದೆ ಇರುವದು ಇನ್ನು ಎಲ್ಲಿಯವರೆಗೋ? ನನ್ನನ್ನು ಆರಾಧಿಸುವಂತೆ ನನ್ನ ಜನರಿಗೆ ಅಪ್ಪಣೆ ಕೊಡು.


ಆಗ ಶೂಹ್ಯನಾದ ಬಿಲ್ದದನು ಹೀಗೆಂದನು -


ಪ್ರವಾದಿಗಳು ಬರೀ ಗಾಳಿಯೇ, ದೈವೋಕ್ತಿಯು ಅವರಲ್ಲಿಲ್ಲ; ಅವರಿಗೇ ಹೀಗಾಗಲಿ ಅಂದುಕೊಂಡಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು