Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 8:20 - ಕನ್ನಡ ಸತ್ಯವೇದವು J.V. (BSI)

20 ಇಗೋ ದೇವರು ನಿರ್ದೋಷಿಯನ್ನು ತಳ್ಳಿಬಿಡುವದಿಲ್ಲ, ಕೆಡುಕರನ್ನು ಕೈಹಿಡಿಯುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಇಗೋ ದೇವರು ನಿರ್ದೋಷಿಯನ್ನು ತಳ್ಳಿಬಿಡುವುದಿಲ್ಲ, ಕೆಡುಕರನ್ನು ಕೈಹಿಡಿಯುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ದೇವರು ನಿರ್ದೋಷಿಯನು ತ್ಯಜಿಸಿಬಿಡುವುದಿಲ್ಲ ಕೆಡುಕರಿಗೆ ನೆರವಾಗಲು ಆತ ಕೈ ನೀಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಆದರೆ ದೇವರು ಒಬ್ಬ ನಿರಪರಾಧಿಯನ್ನೂ ಕೈಬಿಡುವುದಿಲ್ಲ. ಆತನು ದುಷ್ಟರಿಗೆ ಸಹಾಯ ಮಾಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 “ದೇವರು ನಿರ್ದೋಷಿಯನ್ನು ತಿರಸ್ಕರಿಸುವುದಿಲ್ಲ; ಕೆಡುಕರ ಕೈಗಳನ್ನು ದೇವರು ಬಲಪಡಿಸುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 8:20
10 ತಿಳಿವುಗಳ ಹೋಲಿಕೆ  

ನೀನೇ ಆಲೋಚನೆಮಾಡು, ನಿರಪರಾಧಿಯು ಎಂದಾದರೂ ನಾಶವಾದದ್ದುಂಟೇ, ಯಥಾರ್ಥರು ಅಳಿದುಹೋದದ್ದೆಲ್ಲಿ?


ಒಳ್ಳೇ ನಡತೆಯುಳ್ಳವನನ್ನು ನೋಡು, ಯಥಾರ್ಥನನ್ನು ಲಕ್ಷಿಸು; ಶಾಂತನಿಗೆ ಸಂತಾನವೃದ್ಧಿ ಆಗುವದು.


ಅವನು ಕೆಳಗೆ ಬಿದ್ದರೂ ಏಳದೆ ಹೋಗುವದಿಲ್ಲ; ಯೆಹೋವನು ಅವನನ್ನು ಕೈಹಿಡಿದು ಉದ್ಧಾರಮಾಡುವನು.


ಯೆಹೋವನು ಯಾವನ ಕೈಹಿಡಿದು ಯಾವನೆದುರಿಗೆ ಜನಾಂಗಗಳನ್ನು ತುಳಿದು ರಾಜರ ನಡುಕಟ್ಟನ್ನು ಬಿಚ್ಚಿ ಯಾವನ ಮುಂದೆ ಬಾಗಿಲುಹೆಬ್ಬಾಗಿಲುಗಳನ್ನು ತೆರೆದು ಮುಚ್ಚಲೀಸನೋ ತಾನು ಅಭಿಷೇಕಿಸಿದ ಆ ಕೋರೆಷನಿಗೆ ಹೀಗೆನ್ನುತ್ತಾನೆ -


ಯೆಹೋವನು ತನ್ನ ಜನರನ್ನು ಬೇಡವೆಂದು ತಳ್ಳಿಬಿಡುವದಿಲ್ಲ; ತನ್ನ ಸ್ವಾಸ್ತ್ಯವನ್ನು ಕೈಬಿಡುವದಿಲ್ಲ.


ಆಪತ್ತಿನ ದಿನದಲ್ಲಿ ದುಷ್ಟನು ಉಳಿದು ಕೋಪವು ತುಂಬಿ ತುಳುಕುವ ದಿವಸದಲ್ಲಿ ತಪ್ಪಿಸಲ್ಪಡುವನು ಎಂಬದು ನಿಮಗೆ ಗೊತ್ತಾಗಲಿಲ್ಲವೋ?


ಎಲ್ಲಾ ಒಂದೇ ಸರಿ, ಆದಕಾರಣ ನಾನು - ನಿರ್ದೋಷಿಯನ್ನೂ ದೋಷಿಯನ್ನೂ ಆತನು ನಾಶಮಾಡುತ್ತಾನೆ ಎಂದು ಹೇಳುತ್ತೇನೆ.


ಆ ರೀತಿಯಾಗಿ ದುಷ್ಟರಿಗೂ ಶಿಷ್ಟರಿಗೂ ಭೇದಮಾಡದೆ ದುಷ್ಟರ ಸಂಗಡ ನೀತಿವಂತರನ್ನೂ ಸಂಹರಿಸುವದು ನಿನ್ನಿಂದ ಎಂದಿಗೂ ಆಗಬಾರದು; ಸರ್ವಲೋಕಕ್ಕೆ ನ್ಯಾಯತೀರಿಸುವವನು ನ್ಯಾಯವನ್ನೇ ನಡಿಸುವನಲ್ಲವೇ ಎಂದು ಹೇಳಲು ಯೆಹೋವನು -


ಯೆಹೋವನು ನೀತಿವಂತರ ಕೂಗನ್ನು ಕೇಳಿ ಎಲ್ಲಾ ಕಷ್ಟಗಳಿಂದ ಅವರನ್ನು ಬಿಡಿಸುತ್ತಾನೆ.


ನಿರ್ದೋಷದ ನಡತೆಯವನು ನಿರ್ಭಯವಾಗಿ ನಡೆಯುವನು; ವಕ್ರಮಾರ್ಗಿಯು ಬೈಲಿಗೆ ಬೀಳುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು