Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 8:7 - ಕನ್ನಡ ಸತ್ಯವೇದವು J.V. (BSI)

7 ನಿನ್ನ ಮೊದಲನೆಯ ಸ್ಥಿತಿಯು ಅಲ್ಪವಾಗಿದ್ದರೂ ನಿನ್ನ ಕಡೆಯ ಸ್ಥಿತಿಯು ಬಹಳ ವೃದ್ಧಿಹೊಂದುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನಿನ್ನ ಮೊದಲನೆಯ ಸ್ಥಿತಿಯು ಅಲ್ಪವಾಗಿದ್ದರೂ, ನಿನ್ನ ಕಡೆಯ ಸ್ಥಿತಿಯು ಬಹಳ ವೃದ್ಧಿಹೊಂದುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಆಗ ನಿನ್ನ ಭವಿಷ್ಯ ಎಷ್ಟು ಉಜ್ವಲವಾಗಿರುತ್ತದೆಂದರೆ ನಿನ್ನ ಮೊದಲಿನ ಸ್ಥಿತಿ ಕೂಡ ಅತ್ಯಲ್ಪವಾಗಿ ಕಾಣುವುದು ನಿನಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆಗ, ನೀನು ಮೊದಲು ಹೊಂದಿದ್ದೆಲ್ಲ ಅಲ್ಪವಾಗಿ ತೋರುವುದು; ನಿನ್ನ ಭವಿಷ್ಯವು ಬಹು ಯಶಸ್ವಿಯಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ನಿನ್ನ ಆರಂಭವು ಅಲ್ಪವಾಗಿದ್ದರೂ, ನಿನ್ನ ಅಂತ್ಯವು ಬಹಳವಾಗಿ ವೃದ್ಧಿ ಹೊಂದುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 8:7
12 ತಿಳಿವುಗಳ ಹೋಲಿಕೆ  

ಬುದ್ಧಿವಾದವನ್ನು ಕೇಳು, ಉಪದೇಶವನ್ನಾಲಿಸು, ಮುಂದೆ ಜ್ಞಾನಿಯಾಗುವಿ.


ನೀತಿವಂತರ ಮಾರ್ಗವು ಮಧ್ಯಾಹ್ನದವರೆಗೂ ಹೆಚ್ಚುತ್ತಾ ಬರುವ ಬೆಳಗಿನ ಬೆಳಕಿನಂತಿದೆ.


ಈ [ದೀಪಗಳಿಂದ ಸೂಚಿತವಾದ] ಯೆಹೋವನ ಏಳು ಕಣ್ಣುಗಳು ಭೂಲೋಕದ ಎಲ್ಲಾ ಕಡೆಗಳಲ್ಲಿಯೂ ಪ್ರಸರಿಸುತ್ತಾ ತೂಕದ ಗುಂಡು ಜೆರುಬ್ಬಾಬೆಲನ ಕೈಯಲ್ಲಿರುವದನ್ನು ಸಂತೋಷದಿಂದ ನೋಡುತ್ತವೆ; ಹೀಗಿರುವಲ್ಲಿ ಅಲ್ಪಕಾರ್ಯಗಳ ದಿನವನ್ನು ಯಾರು ತಿರಸ್ಕರಿಸಾರು?


ಯಾಕಂದರೆ ಇದ್ದವನಿಗೆ ಕೊಡಲ್ಪಡುವದು, ಅವನಿಗೆ ಮತ್ತೂ ಹೆಚ್ಚಾಗುವದು; ಇಲ್ಲದವನ ಕಡೆಯಿಂದ ಇದ್ದದ್ದೂ ತೆಗೆಯಲ್ಪಡುವದು.


ಅದು ಯೆಹೋವನಿಗೆ ಗೊತ್ತು, ಅದು ಹಗಲೂ ಅಲ್ಲ, ಇರುಳೂ ಅಲ್ಲ, ಆದರೆ ಸಂಜೆಯ ವೇಳೆಯಲ್ಲಿ ಬೆಳಕಾಗುವದು.


ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ವಿಷಯವಾದ ಜ್ಞಾನಹೊಂದಿ ಲೋಕದ ಮಲಿನತ್ವಗಳಿಗೆ ತಪ್ಪಿಸಿಕೊಂಡವರು ತಿರಿಗಿ ಅವುಗಳಲ್ಲಿ ಸಿಕ್ಕಿಕೊಂಡು ಸೋತುಹೋದರೆ ಅವರ ಅಂತ್ಯಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗಿದೆ.


ದಯಮಾಡಿ ಪೂರ್ವಿಕರನ್ನು ವಿಚಾರಿಸಿ ಅವರ ಪಿತೃಗಳು ಕಂಡುಕೊಂಡದ್ದಕ್ಕೂ ಮನಸ್ಸಿಡು.


ಹೀನಸ್ಥಿತಿಯವರನ್ನು ಉನ್ನತಸ್ಥಿತಿಗೆ ಏರಿಸಿ ದುಃಖಿಸುವವರನ್ನು ನಿರಪಾಯಸ್ಥಳಕ್ಕೆ ಹತ್ತಿಸುತ್ತಾನೆ.


ಯೋಬನು ತನ್ನ ಸ್ನೇಹಿತರಿಗೋಸ್ಕರ ಪ್ರಾರ್ಥಿಸಿದ ಬಳಿಕ ಯೆಹೋವನು ಅವನ ದುಸ್ಥಿತಿಯನ್ನು ಹೋಗಲಾಡಿಸಿ ಅವನ ಸೊತ್ತನ್ನು ಮೊದಲಿಗಿಂತ ಎರಡರಷ್ಟಾಗಿ ಹೆಚ್ಚಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು