Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 9:10 - ಕನ್ನಡ ಸತ್ಯವೇದವು J.V. (BSI)

10 ಅಪ್ರಮೇಯ ಮಹಾಕಾರ್ಯಗಳನ್ನೂ ಅಸಂಖ್ಯವಾದ ಅದ್ಭುತಕೃತ್ಯಗಳನ್ನೂ ಮಾಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅಪ್ರಮೇಯ ಮಹಾಕಾರ್ಯಗಳನ್ನೂ, ಅಸಂಖ್ಯಾತವಾದ ಅದ್ಭುತಕೃತ್ಯಗಳನ್ನೂ ಮಾಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಅಪ್ರತಿಮ ಮಹಾಕಾರ್ಯಗಳನ್ನು ಎಸಗಿರುವನು ಅಸಂಖ್ಯ ಅದ್ಭುತಕರ ಪವಾಡಗಳನ್ನು ಮಾಡಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಗ್ರಹಿಸಲಶಕ್ಯವಾದ ಅದ್ಭುತಕಾರ್ಯಗಳನ್ನೂ ಅಸಂಖ್ಯಾತವಾದ ಮಹತ್ಕಾರ್ಯಗಳನ್ನೂ ಆತನು ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ದೇವರು ಕಂಡು ಹಿಡಿಯಲಾರದಂಥ ಮಹತ್ಕಾರ್ಯಗಳನ್ನೂ, ಲೆಕ್ಕವಿಲ್ಲದಷ್ಟು ಅದ್ಭುತಗಳನ್ನೂ ಮಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 9:10
14 ತಿಳಿವುಗಳ ಹೋಲಿಕೆ  

ಆತನು ಅಪ್ರಮೇಯ ಮಹಾಕಾರ್ಯಗಳನ್ನೂ ಅಸಂಖ್ಯವಾದ ಅದ್ಭುತಕೃತ್ಯಗಳನ್ನೂ ಮಾಡುತ್ತಾನೆ;


ಮಹತ್ಕಾರ್ಯಗಳನ್ನು ನಡಿಸುವದರಲ್ಲಿ ಅದ್ವಿತೀಯನೂ ಇಸ್ರಾಯೇಲ್ಯರ ದೇವರೂ ಆದ ಯೆಹೋವ ದೇವರಿಗೆ ಸ್ತೋತ್ರವು.


ಆಹಾ, ದೇವರ ಐಶ್ವರ್ಯವೂ ಜ್ಞಾನವೂ ವಿವೇಕವೂ ಎಷ್ಟೋ ಅಗಾಧ! ಆತನ ತೀರ್ಮಾನಗಳು ಪರಿಶೋಧನೆಗೆ ಎಷ್ಟೋ ಅಗಮ್ಯ! ಆತನ ಮಾರ್ಗಗಳು ಕಂಡುಹಿಡಿಯುವದಕ್ಕೆ ಎಷ್ಟೋ ಅಸಾಧ್ಯ!


ನಮ್ಮಲ್ಲಿ ಕಾರ್ಯಸಾಧಿಸುವ ತನ್ನ ಶಕ್ತಿಯ ಪ್ರಕಾರ ನಾವು ಬೇಡುವದಕ್ಕಿಂತಲೂ ಯೋಚಿಸುವದಕ್ಕಿಂತಲೂ


ಒಂದೊಂದು ವಸ್ತುವನ್ನು ಸಮಯಕ್ಕೆ ತಕ್ಕ ಹಾಗೆ ಅಂದವಾಗಿ ನಿರ್ಮಿಸಿದ್ದಾನೆ; ಇದಲ್ಲದೆ ಮನುಷ್ಯರ ಹೃದಯದಲ್ಲಿ ಅನಂತಕಾಲದ ಯೋಚನೆಯನ್ನು ಇಟ್ಟಿದ್ದಾನೆ; ಆದರೂ ದೇವರು ಆದ್ಯಂತವಾಗಿ ನಡಿಸುತ್ತಿರುವ ಕೆಲಸವನ್ನು ಅವರು ಗ್ರಹಿಸಲಾರದಂತೆ ಮಾಡಿದ್ದಾನೆ.


ಮಹತ್ಕಾರ್ಯಗಳನ್ನು ನಡಿಸುವದಕ್ಕೆ ಆತನೊಬ್ಬನೇ ಶಕ್ತನು; ಆತನ ಕೃಪೆಯು ಶಾಶ್ವತವಾದದ್ದು.


ನನ್ನ ಬಾಯಿ ನಿನ್ನ ನೀತಿಯನ್ನೂ ರಕ್ಷಣೆಯನ್ನೂ ಹಗಲೆಲ್ಲಾ ವರ್ಣಿಸುತ್ತಿರುವದು; ಆದರೂ ಅವುಗಳ ವಿವರಣೆ ನನಗೆ ಅಸಾಧ್ಯ.


ಇಂಥ ಸರ್ವಶಕ್ತನನ್ನು ನಾವು ಕಂಡುಹಿಡಿಯಲಾರೆವು; ಆತನ ಪರಾಕ್ರಮವು ಬಹಳ; ಆತನು ನ್ಯಾಯವನ್ನಾಗಲಿ ಪರಿಪೂರ್ಣಧರ್ಮವನ್ನಾಗಲಿ ಕುಂದಿಸುವದಿಲ್ಲ.


ಯೆಹೋವನೇ, ದೇವರುಗಳಲ್ಲಿ ನಿನ್ನ ಸಮಾನನು ಯಾವನು? ಪರಿಶುದ್ಧತ್ವದಿಂದ ಸರ್ವೋತ್ತಮನೂ ಪ್ರಖ್ಯಾತ ಕೃತ್ಯಗಳನ್ನು ಮಾಡಿರುವದರಿಂದ ಭಯಂಕರನೂ ಅದ್ಭುತಗಳನ್ನು ನಡಿಸುವವನೂ ಆಗಿರುವ ನಿನಗೆ ಸಮಾನನು ಎಲ್ಲಿ?


ಯೆಹೋವನು ಮಹೋನ್ನತನೂ ಮಹಾಸ್ತುತಿಪಾತ್ರನೂ ಆಗಿದ್ದಾನೆ; ಆತನ ಮಹತ್ತು ಅಪಾರವಾದದ್ದು.


ದೇವರು ತನ್ನ ಧ್ವನಿಯಿಂದ ಅದ್ಭುತವಾಗಿ ಗುಡುಗುವನು; ನಾವು ಗ್ರಹಿಸಲಾಗದ ಮಹಾಕಾರ್ಯಗಳನ್ನು ನಡಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು