ಯೋಬ 9:19 - ಕನ್ನಡ ಸತ್ಯವೇದವು J.V. (BSI)19 ನಾನು ಬಲಿಷ್ಠನ ಶಕ್ತಿಯನ್ನು ಮರೆಹೊಗುವೆನೆಂದರೆ [ದೇವರು] - ಇಗೋ, [ಇದ್ದೇನೆ; ಅನ್ನುವನು] ನ್ಯಾಯವಿಚಾರಣೆಯು [ಆಗಲಿ ಎಂದರೆ ಆತನು] ನನಗೆ ಕಾಲನಿಯಾಮಕರು ಯಾರು [ಅನ್ನುವನು]. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ನಾನು ಬಲಿಷ್ಠನ ಶಕ್ತಿಯನ್ನು ಮೊರೆಹೋಗುವೆನೆಂದರೆ ದೇವರು, ‘ಇಗೋ, ಇದ್ದೇನೆ’ ಎನ್ನುವನು. ನ್ಯಾಯವಿಚಾರಣೆಯು ಆಗಲಿ ಎಂದರೆ ಆತನು ನನಗೆ, ‘ಕಾಲ ನಿಯಾಮಕರು ಯಾರು?’ ಎನ್ನುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಶಕ್ತಿಪ್ರಯೋಗದ ಮಾತೆತ್ತಿದರೆ, ‘ಇಗೋ, ನಾನೇ ಶಕ್ತಿಸ್ವರೂಪ’ ಎನ್ನುತ್ತಾನೆ. ನ್ಯಾಯವಿಚಾರಣೆ ಆಗಲಿಯೆಂದರೆ, ‘ನನ್ನನ್ನು ಕರೆಯಿಸುವವನಾರು?’ ಎನ್ನುತ್ತಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಆತನನ್ನು ಸೋಲಿಸೋಣವೆಂದರೆ ಆತನೇ ಬಲಿಷ್ಠನಾಗಿದ್ದಾನೆ; ನ್ಯಾಯಾಲಯಕ್ಕೆ ಹೋಗೋಣವೆಂದರೆ ಆತನನ್ನು ನ್ಯಾಯಾಲಯಕ್ಕೆ ಬರಮಾಡುವವನು ಯಾರು? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಶಕ್ತಿಯ ವಿಷಯದಲ್ಲಿ ಹೇಳಬೇಕಾದರೆ, ಇಗೋ ದೇವರು ಬಲಶಾಲಿ! ನ್ಯಾಯದ ವಿಷಯದಲ್ಲಿ ವಾದಿಸಬೇಕಾದರೆ, ದೇವರಿಗೆ ಸವಾಲು ಹಾಕುವವರು ಯಾರು? ಅಧ್ಯಾಯವನ್ನು ನೋಡಿ |