Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 9:20 - ಕನ್ನಡ ಸತ್ಯವೇದವು J.V. (BSI)

20 ನಾನು ನೀತಿವಂತನಾಗಿದ್ದರೂ ನನ್ನ ಬಾಯೇ ನನ್ನನ್ನು ಅಪರಾಧಿಯೆಂದು ತೋರ್ಪಡಿಸುವದು. ನಾನು ನಿರ್ದೋಷಿಯಾಗಿದ್ದರೂ ಆತನು ನನ್ನನ್ನು ದುರ್ಮಾರ್ಗಿಯೆಂದು ನಿರೂಪಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ನಾನು ನೀತಿವಂತನಾಗಿದ್ದರೂ ನನ್ನ ಬಾಯೇ ನನ್ನನ್ನು ಅಪರಾಧಿಯೆಂದು ತೋರ್ಪಡಿಸುವುದು. ನಾನು ನಿರ್ದೋಷಿಯಾಗಿದ್ದರೂ ಆತನು ನನ್ನನ್ನು ದುರ್ಮಾರ್ಗಿಯೆಂದು ನಿರೂಪಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ನಾನು ಸತ್ಯವಂತನಾಗಿದ್ದರೂ ಬಾಯೇ ನಾನು ಅಪರಾಧಿಯೆಂದು ಒಪ್ಪಿಕೊಳ್ಳುತ್ತದೆ. ನಾನು ನಿರ್ದೋಷಿಯಾಗಿದ್ದರೂ ‘ನಿನ್ನದು ವಕ್ರಬುದ್ಧಿ’ ಎನ್ನುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ನಾನು ನಿರಪರಾಧಿಯಾಗಿದ್ದರೂ ನನ್ನ ಬಾಯಿ ನನ್ನನ್ನು ಖಂಡಿಸುವುದು; ನಾನು ನಿರ್ದೋಷಿಯಾಗಿದ್ದರೂ ನನ್ನ ಬಾಯಿ ನನ್ನನ್ನು ದೋಷಿಯೆಂದು ಹೇಳುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ನಾನು ನೀತಿವಂತನಾಗಿದ್ದರೂ, ನನ್ನ ಸ್ವಂತ ಬಾಯೇ ನನ್ನನ್ನು ಖಂಡಿಸುತ್ತದೆ; ನಾನು ನಿರ್ದೋಷಿಯಾಗಿದ್ದರೂ, ದೇವರು ನನ್ನನ್ನು ಅಪರಾಧಿ ಎಂದು ನಿರೂಪಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 9:20
24 ತಿಳಿವುಗಳ ಹೋಲಿಕೆ  

ಯೋಬನು ತಿಳುವಳಿಕೆಯಿಲ್ಲದೆ ನುಡಿಯುತ್ತಾನೆ, ಅವನ ಮಾತುಗಳಲ್ಲಿ ಬುದ್ಧಿಯಿಲ್ಲ.


ಅನೇಕ ವಿಷಯಗಳಲ್ಲಿ ನಾವೆಲ್ಲರೂ ತಪ್ಪುವದುಂಟು. ಒಬ್ಬನು ಮಾತಿನಲ್ಲಿ ತಪ್ಪದಿದ್ದರೆ ಅವನು ಶಿಕ್ಷಿತನೂ ತನ್ನ ದೇಹವನ್ನೆಲ್ಲಾ ಸ್ವಾಧೀನಪಡಿಸಿಕೊಳ್ಳುವದಕ್ಕೆ ಸಮರ್ಥನೂ ಆಗಿದ್ದಾನೆ.


ಇದಲ್ಲದೆ ಬುದ್ಧಿಗೆಟ್ಟು ಸತ್ಯವಿಹೀನರಾಗಿದ್ದು ದೇವ ಭಕ್ತಿಯನ್ನು ಲಾಭಸಾಧನವೆಂದೆಣಿಸುವ ಈ ಮನುಷ್ಯರಲ್ಲಿ ನಿತ್ಯವಾದ ಕಚ್ಚಾಟಗಳು ಉಂಟಾಗುತ್ತವೆ.


ಆಗ ಆತನು ಅವರಿಗೆ ಹೇಳಿದ್ದೇನಂದರೆ - ಮನುಷ್ಯರ ಮುಂದೆ ನೀತಿವಂತರೆಂದು ತೋರಿಸಿಕೊಳ್ಳುವವರು ನೀವು; ಆದರೆ ದೇವರು ನಿಮ್ಮ ಹೃದಯಗಳನ್ನು ತಿಳುಕೊಂಡಿದ್ದಾನೆ. ಮನುಷ್ಯರಲ್ಲಿ ಶ್ರೇಷ್ಠವೆನಿಸಿಕೊಳ್ಳುವಂಥದು ದೇವರ ದೃಷ್ಟಿಯಲ್ಲಿ ಅಸಹ್ಯವಾಗಿದೆ.


ಆದರೆ ಅವನು ತನ್ನನ್ನು ನೀತಿವಂತನೆಂದು ತೋರಿಸಿಕೊಳ್ಳುವದಕ್ಕೆ ಅಪೇಕ್ಷಿಸಿ - ನನ್ನ ನೆರೆಯವನು ಯಾರು ಎಂದು ಯೇಸುವನ್ನು ಕೇಳಲು


ಆಗ ನಾನು - ಅಯ್ಯೋ, ನನ್ನ ಗತಿಯನ್ನು ಏನು ಹೇಳಲಿ! ನಾಶವಾದೆನಲ್ಲಾ; ನಾನು ಹೊಲಸು ತುಟಿಯವನು, ಹೊಲಸು ತುಟಿಯವರ ಮಧ್ಯದಲ್ಲಿ ವಾಸಿಸುವವನು; ಇಂಥ ನನ್ನ ಕಣ್ಣುಗಳು ರಾಜಾಧಿರಾಜನನ್ನು, ಸೇನಾಧೀಶ್ವರನಾದ ಯೆಹೋವನನ್ನು ಕಂಡವು ಎಂದು ಕೂಗಿಕೊಳ್ಳಲು


ವಕ್ರಹೃದಯನು ಶುಭವನ್ನು ಪಡೆಯನು; ಕೆಟ್ಟನಾಲಿಗೆಯವನು ವಿಪತ್ತಿಗೆ ಸಿಕ್ಕಿಬೀಳುವನು.


ಮಾತಾಳಿಗೆ ಪಾಪ ತಪ್ಪದು; ಮೌನಿಯು ಮತಿವಂತ.


ನಿನ್ನ ಸೇವಕನನ್ನು ವಿಚಾರಣೆಗೆ ಗುರಿಮಾಡಬೇಡ; ನಿನ್ನ ಸನ್ನಿಧಿಯಲ್ಲಿ ಯಾವ ಜೀವಿಯೂ ನೀತಿವಂತನಲ್ಲ.


ಕರ್ತನೇ, ಯಾಹುವೇ, ನೀನು ಪಾಪಗಳನ್ನು ಎಣಿಸುವದಾದರೆ ನಿನ್ನ ಮುಂದೆ ಯಾರು ನಿಂತಾರು?


ಈಗ ಯೋಬನು ಸುಮ್ಮನೆ ಬಾಯಿಬಿಟ್ಟುಕೊಂಡು ಯಾವ ತಿಳುವಳಿಕೆಯೂ ಇಲ್ಲದೆ ಬಹಳ ಮಾತಾಡುತ್ತಾನೆ.


ನೀನು ಹೇಳಿದ್ದು ಸತ್ಯವೇ ಸರಿ; ಆದರೆ ಮನುಷ್ಯನು ದೇವರ ದೃಷ್ಟಿಯಲ್ಲಿ ನೀತಿವಂತನಾಗಿರುವದು ಹೇಗೆ?


ಅದೇನಂದರೆ - ಮನುಷ್ಯನು ದೇವರ ದೃಷ್ಟಿಯಲ್ಲಿ ನೀತಿವಂತನಾದಾನೇ? ಮಾನವನು ಸೃಷ್ಟಿಕರ್ತನ ಸನ್ನಿಧಿಯಲ್ಲಿ ಪರಿಶುದ್ಧನಾಗಿರಬಹುದೇ?


ಊಚ್ ದೇಶದಲ್ಲಿ ಯೋಬನೆಂಬ ಒಬ್ಬ ಮನುಷ್ಯನಿದ್ದನು; ಅವನು ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಕೆಟ್ಟದ್ದನ್ನು ನಿರಾಕರಿಸುತ್ತಾ ನಿರ್ದೋಷಿಯೂ ಯಥಾರ್ಥಚಿತ್ತನೂ ಆಗಿದ್ದನು.


ನನಗೆ ನ್ಯಾಯವಿದ್ದರೂ ಪ್ರತಿವಾದ ಮಾಡಲಾರದೆ ನನ್ನ ವಿರೋಧಿಗೆ ಶರಣಾಗತನಾಗುತ್ತಿದ್ದೆನು.


ನಾನು ಅಪರಾಧಿಯೆಂದು ನಿರ್ಣಯಿಸಲ್ಪಡಬೇಕಷ್ಟೆ. ನಾನು ವ್ಯರ್ಥವಾಗಿ ಪ್ರಯಾಸಪಡುವದೇಕೆ?


ನನ್ನ ಎಲ್ಲಾ ಸಂಕಟಗಳಿಂದ ನನಗೆ ಭಯವುಂಟಾಗುತ್ತದೆ; ನೀನು ನನ್ನನ್ನು ನಿರ್ದೋಷಿಯೆಂದೆಣಿಸುವದಿಲ್ಲವೆಂದು ತಿಳಿದುಕೊಳ್ಳುತ್ತೇನೆ.


ಅಯ್ಯೋ, ನಾನು ದುರ್ಮಾರ್ಗಿಯಾದರಂತು ನನಗೇನು ಗತಿ! ನಾನು ಸನ್ಮಾರ್ಗಿಯಾದರೂ ನನ್ನ ಶ್ರಮೆಗಳನ್ನು ನೋಡುತ್ತಾ ಅಪಮಾನಭರಿತನಾಗಿ ತಲೆಯೆತ್ತಲಾರೆನು.


ನನ್ನ ದ್ರೋಹವನ್ನು ಚೀಲದಲ್ಲಿಟ್ಟು ಮುದ್ರಿಸಿ ನನ್ನ ದೋಷವನ್ನು ಭದ್ರವಾಗಿ ಕಟ್ಟಿದ್ದೀ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು