Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 9:24 - ಕನ್ನಡ ಸತ್ಯವೇದವು J.V. (BSI)

24 ಭೂಲೋಕವು ದುಷ್ಟರ ಕೈ ಸೇರಿದೆ; ಲೋಕದ ನ್ಯಾಯಾಧಿಪತಿಗಳ ಮುಖಗಳಿಗೆ ಮುಸುಕು ಹಾಕಿದ್ದಾನೆ. ಇದನ್ನು ಮಾಡಿದವನು ಆತನಲ್ಲದೆ ಮತ್ತೆ ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಭೂಲೋಕವು ದುಷ್ಟರ ಕೈ ಸೇರಿದೆ; ಲೋಕದ ನ್ಯಾಯಾಧಿಪತಿಗಳ ಮುಖಗಳಿಗೆ ಮುಸುಕು ಹಾಕಿದ್ದಾನೆ. ಇದನ್ನು ಮಾಡಿದವನು ಆತನಲ್ಲದೆ ಮತ್ತೆ ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ದೇಶವು ದುರುಳರ ಕೈವಶವಾಗಿದ್ದರೂ ನ್ಯಾಯಾಧೀಶರ ಮುಖಕ್ಕೆ ಮುಸುಕುಹಾಕುತ್ತಾನೆ. ಇದನ್ನು ಮಾಡುವವರು ದೇವರಲ್ಲದೆ ಮತ್ತೆ ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ದುಷ್ಟನು ಭೂಮಿಯನ್ನು ಆಕ್ರಮಿಸಿಕೊಂಡಾಗ, ದೇವರು ಅದನ್ನು ನ್ಯಾಯಾಧಿಪತಿಗಳಿಗೆ ಮರೆಮಾಡುವನೇ? ಇದು ಸತ್ಯವಾಗಿದ್ದರೆ, ಇದನ್ನು ದೇವರಲ್ಲದೆ ಇನ್ಯಾರು ಮಾಡಿದರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಲೋಕವು ಕೆಟ್ಟವರ ಕೈವಶವಾಗಿದೆ; ನ್ಯಾಯಾಧಿಪತಿಗಳ ಮುಖಕ್ಕೆ ಮುಸುಕುಹಾಕಲಾಗಿದೆ; ಇದನ್ನು ಅನುಮತಿಸಿದವರು ದೇವರಲ್ಲದೆ ಮತ್ತೆ ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 9:24
24 ತಿಳಿವುಗಳ ಹೋಲಿಕೆ  

ನೀನು ದುಷ್ಟರ ಆಲೋಚನೆಗೆ ಪ್ರಸನ್ನನಾಗಿ ನಿನ್ನ ಕೈಕಷ್ಟದಿಂದ ಸೃಷ್ಟಿಸಿದ್ದನ್ನು ತಿರಸ್ಕರಿಸಿ ಬಾಧಿಸುವದು ನಿನಗೆ ಸಂತೋಷವೋ?


ಇದು ಅನಿವಿುಷರ ತೀರ್ಮಾನ, ದೇವರ ತೀರ್ಪು; ಪರಾತ್ಪರನು ಮನುಷ್ಯರ ರಾಜ್ಯದಲ್ಲಿ ರಾಜನಾಗಿ ಅದರ ಆಳಿಕೆಯನ್ನು ತನಗೆ ಬೇಕಾದವರಿಗೆ ಒಪ್ಪಿಸಿ ಕನಿಷ್ಠರನ್ನೂ ಅದರ ಮೇಲೆ ನೇವಿುಸುತ್ತಾನೆಂಬದು ಜೀವಂತರಿಗೆ ತಿಳಿದುಬರಬೇಕೆಂದೇ ಈ ತೀರ್ಮಾನವಾಯಿತು ಎಂದು ಸಾರಿದನು.


ದೇಶದಲ್ಲಿ ಮಳೆಯಿಲ್ಲದೆ ಭೂವಿುಯು ಬಿರುಕುಬಿಟ್ಟಿರುವದರಿಂದ ರೈತರು ನಾಚಿಕೆಪಟ್ಟು ಮೋರೆಮುಚ್ಚಿಕೊಳ್ಳುತ್ತಾರೆ.


ಯೆಹೋವನೇ, ಇಹಲೋಕವೇ ತಮ್ಮ ಪಾಲೆಂದು ನಂಬಿದ ನರರಿಗೆ ಸಿಕ್ಕದಂತೆ ನಿನ್ನ ಕೈಯಿಂದ ನನ್ನನ್ನು ತಪ್ಪಿಸು; ನಿನ್ನ ಐಶ್ವರ್ಯದಿಂದ ಅವರ ಹೊಟ್ಟೆಯನ್ನು ತುಂಬಿಸಿದ್ದೀಯಲ್ಲಾ. ಅವರು ಸಂತಾನವೃದ್ಧಿಹೊಂದಿ ವಿುಕ್ಕ ಆಸ್ತಿಯನ್ನು ತನ್ನ ಮಕ್ಕಳಿಗೆ ಬಿಡುತ್ತಾರೆ.


ಆಮೇಲೆ ಬೂಜ್ ಕುಲಕ್ಕೂ ರಾಮ್ ಗೋತ್ರಕ್ಕೂ ಸೇರಿದ ಬರಕೇಲನ ಮಗನಾದ ಎಲೀಹುವಿಗೆ ಸಿಟ್ಟೇರಿತು; ಯೋಬನು ದೇವರಿಗಿಂತಲೂ ತಾನೇ ನ್ಯಾಯವಂತನೆಂದು ಎಣಿಸಿಕೊಂಡದರಿಂದ ಅವನ ಮೇಲೆ ಎಲೀಹುವಿಗೆ ಸಿಟ್ಟು ಹತ್ತಿತು.


ಹೀಗಲ್ಲವೆಂದು ನೀವು ನಂಬಿದರೆ ನಾನು ಸುಳ್ಳುಗಾರನೆಂದೂ ನನ್ನ ಮಾತುಗಳು ನಿರರ್ಥಕವೆಂದೂ [ನಿಮ್ಮಲ್ಲಿ] ಯಾರು ಸ್ಥಾಪಿಸಬಲ್ಲರು?


ದೇವರು ನನ್ನನ್ನು ತುಂಟರಿಗೆ ಒಪ್ಪಿಸಿ ಕೆಟ್ಟವರ ಕೈಗೆ ಎಸೆದುಬಿಟ್ಟಿದ್ದಾನೆ.


ಮಂತ್ರಿಗಳನ್ನು ಸುಲಿಗೆಮಾಡಿ ಸಾಗಿಸಿಕೊಂಡು ಹೋಗುವನು, ನ್ಯಾಯಾಧಿಪತಿಗಳನ್ನು ಹುಚ್ಚರನ್ನಾಗಿ ಮಾಡುವನು.


ಅರಸನು ಅರಮನೆಯ ತೋಟದಿಂದ ತಾನು ದ್ರಾಕ್ಷಾರಸಪಾನ ಮಾಡಿದ ಗೃಹಕ್ಕೆ ತಿರಿಗಿ ಬಂದು ಎಸ್ತೇರಳು ಒರಗಿಕೊಳ್ಳುವ ಲೋಡಿನ ಮೇಲೆ ಹಾಮಾನನು ಬಿದ್ದುಕೊಂಡಿರುವದನ್ನು ಕಂಡು - ಇವನು ರಾಣಿಯನ್ನು ನನ್ನ ಮುಂದೆಯೇ ಅರಮನೆಯಲ್ಲಿ ಭಂಗಪಡಿಸಲೂ ಬೇಕೆಂದಿರುತ್ತಾನೋ ಅಂದನು. ಅರಸನ ಬಾಯಿಂದ ಈ ಮಾತು ಹೊರಟ ಕೂಡಲೇ ಸೇವಕರು ಹಾಮಾನನ ಮೋರೆಗೆ ಮುಸುಕು ಹಾಕಿದರು.


ಮೊರ್ದೆಕೈಯು ತಿರಿಗಿ ಅರಮನೆಯ ಬಾಗಲಿಗೆ ಹೋದನು. ಹಾಮಾನನಾದರೋ ಶೋಕಾರ್ತನಾಗಿ ಮೋರೆಮುಚ್ಚಿಕೊಂಡು ಶೀಘ್ರವಾಗಿ ಮನೆಗೆ ಹೋಗಿ


ಅರಸನು ತನ್ನ ಮೋರೆಯನ್ನು ಮುಚ್ಚಿಕೊಂಡು - ನನ್ನ ಮಗನಾದ ಅಬ್ಷಾಲೋಮನೇ, ಅಬ್ಷಾಲೋಮನೇ, ನನ್ನ ಮಗನೇ, ಮಗನೇ ಎಂದು ಬಹಳವಾಗಿ ಗೋಳಾಡಿದನು.


ದಾವೀದನು ಮೋರೆಯನ್ನು ಮುಚ್ಚಿಕೊಂಡು ಅಳುತ್ತಾ ಬರಿಗಾಲಿನಿಂದ ಎಣ್ಣೇಮರಗಳ ಗುಡ್ಡವನ್ನೇರಿದನು. ಅವನ ಜೊತೆಯಲ್ಲಿದ್ದ ಜನರೂ ಮೋರೆಮುಚ್ಚಿಕೊಂಡು ಅಳುತ್ತಾ ಏರಿದರು.


ಇಗೋ, ಬಲಾತ್ಕಾರವೆಂದು ನಾನು ಕೂಗಿಕೊಂಡರೂ ಯಾವ ಉತ್ತರವೂ ಇಲ್ಲ. ನಾನು ಮೊರೆಯಿಟ್ಟರೂ ನ್ಯಾಯವು ನೆರವೇರದು.


ಬಲಿಷ್ಟನಾದರೆ ದೇಶವೇ ಅವನದು, ಅಲ್ಲಿ ಸನ್ಮಾನಯೋಗ್ಯನಾಗಿ ವಾಸಿಸತಕ್ಕವನು ಅವನೇ.


ತುಂಬಿದ ಪಟ್ಟಣದಲ್ಲಿ ನರಳುವರು, ಗಾಯಪಟ್ಟವರು ಮೊರೆಯಿಡುವರು. ದೇವರಾದರೋ ಅದನ್ನು ಅಯುಕ್ತವೆಂದೆಣಿಸುವದಿಲ್ಲ.


ನೀವು ಯೆಹೋವನನ್ನು ನಿಮ್ಮ ಮಾತುಗಳಿಂದ ಬೇಸರಗೊಳಿಸಿದ್ದೀರಿ; ಯಾವ ವಿಷಯದಲ್ಲಿ ಆತನನ್ನು ಬೇಸರಗೊಳಿಸಿದ್ದೇವೆ ಅನ್ನುತ್ತೀರಾ? ಪ್ರತಿಯೊಬ್ಬ ದುರಾಚಾರಿಯು ಯೆಹೋವನ ದೃಷ್ಟಿಗೆ ಒಳ್ಳೆಯವನು, ಅವರೇ ಆತನಿಗೆ ಇಷ್ಟ, ನ್ಯಾಯತೀರಿಸುವ ದೇವರು ಎಲ್ಲಿಯೋ ಎಂದು ನೀವು ಅಂದುಕೊಳ್ಳುವದರಲ್ಲಿಯೇ.


ಆಮೇಲೆ ತಿರಿಗಿ ದೃಷ್ಟಿಸಿ ಲೋಕದಲ್ಲಿನ ಹಿಂಸೆಗಳನ್ನೆಲ್ಲಾ ನೋಡಿದೆನು; ಆಹಾ, ಹಿಂಸೆಗೊಂಡವರ ಕಣ್ಣೀರು ಏನೆಂದು ಹೇಳಲಿ! ಸಂತಯಿಸುವವರು ಯಾರೂ ಇರಲಿಲ್ಲ; ಹಿಂಸಕರಿಗೆ ಬಹು ಬಲ; ಸಂತಯಿಸುವವರೋ ಒಬ್ಬರೂ ಇರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು