Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 9:29 - ಕನ್ನಡ ಸತ್ಯವೇದವು J.V. (BSI)

29 ನಾನು ಅಪರಾಧಿಯೆಂದು ನಿರ್ಣಯಿಸಲ್ಪಡಬೇಕಷ್ಟೆ. ನಾನು ವ್ಯರ್ಥವಾಗಿ ಪ್ರಯಾಸಪಡುವದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ನಾನು ಅಪರಾಧಿಯೆಂದು ನಿರ್ಣಯಿಸಲ್ಪಡಬೇಕಷ್ಟೆ. ನಾನು ವ್ಯರ್ಥವಾಗಿ ಪ್ರಯಾಸಪಡುವುದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಅಪರಾಧಿಯೆಂದೇ ನನಗೆ ನಿರ್ಣಯವಾಗಬೇಕಿದ್ದಲ್ಲಿ ನಾನೇಕೆ ಪ್ರಯಾಸಪಡಬೇಕು ವ್ಯರ್ಥವಾಗಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಅಪರಾಧಿಯೆಂದು ಈಗಾಗಲೇ ನನಗೆ ತೀರ್ಪಾಗಿದೆ. ಹೀಗಿರಲು ನಾನೇಕೆ ವ್ಯರ್ಥ ಪ್ರಯತ್ನ ಮಾಡಲಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ನಾನು ಈಗಾಗಲೇ ಅಪರಾಧಿ ಎಂದು ನಿರ್ಣಯವಾಗಿರುವಾಗ, ನಾನು ಏಕೆ ವ್ಯರ್ಥವಾಗಿ ಹೋರಾಡಬೇಕು?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 9:29
12 ತಿಳಿವುಗಳ ಹೋಲಿಕೆ  

ನೀನಾದರೆ - ನಾನು ನಿರ್ದೋಷಿ, ಆತನ ಕೋಪವು ನನ್ನ ಮೇಲಿಂದ ತೊಲಗಿ ಹೋಗಿದೆ ನಿಶ್ಚಯ ಎಂದುಕೊಂಡಿದ್ದೀ; ನಾನು ಪಾಪಮಾಡಲಿಲ್ಲವೆಂದು ನೀನು ಹೇಳಿದ ಕಾರಣ, ಇಗೋ ನಾನು ನಿನಗೆ ನ್ಯಾಯತೀರಿಸುವೆನು.


ನನ್ನ ಮನಸ್ಸನ್ನು ನಿರ್ಮಲಮಾಡಿಕೊಂಡದ್ದೂ ಶುದ್ಧತ್ವದಲ್ಲಿ ಕೈತೊಳಕೊಂಡದ್ದೂ ವ್ಯರ್ಥವೇ ಸರಿ.


ಆದರೆ ಯೆಹೋವನು ಅವನನ್ನು ಸಿಕ್ಕಗೊಡಿಸುವದಿಲ್ಲ; ಅವನನ್ನು ನ್ಯಾಯವಿಚಾರಣೆಯಲ್ಲಿ ಅಪರಾಧಿಯೆಂದು ಎಣಿಸುವದಿಲ್ಲ.


ಆಹಾ, ನಿಮ್ಮ ಯೋಚನೆಗಳನ್ನು ಬಲ್ಲೆ, ನೀವು ನನಗೆ ವಿರುದ್ಧವಾಗಿ ಮಾಡುವ ಕುಯುಕ್ತಿಗಳನ್ನು ತಿಳಿದುಕೊಂಡಿದ್ದೇನೆ.


ನಾನು ಅಪರಾಧಿಯಲ್ಲವೆಂದು ನಿನಗೆ ಗೊತ್ತಾಯಿತಲ್ಲಾ; ನಿನ್ನ ಕೈಯೊಳಗಿಂದ ಬಿಡಿಸತಕ್ಕವರು ಯಾರೂ ಇಲ್ಲವಷ್ಟೆ,


ನಾನು ದೇವರ ಮುಂದೆ - ನನ್ನನ್ನು ಅಪರಾಧಿಯೆಂದು ನಿರ್ಣಯಿಸಬೇಡ, ನನ್ನೊಡನೆ ಏಕೆ ವ್ಯಾಜ್ಯವಾಡುತ್ತೀ ತಿಳಿಸು ಅನ್ನುವೆನು.


ಎಲ್ಲಾ ಒಂದೇ ಸರಿ, ಆದಕಾರಣ ನಾನು - ನಿರ್ದೋಷಿಯನ್ನೂ ದೋಷಿಯನ್ನೂ ಆತನು ನಾಶಮಾಡುತ್ತಾನೆ ಎಂದು ಹೇಳುತ್ತೇನೆ.


ನಾನು ನೀತಿವಂತನಾಗಿದ್ದರೂ ನನ್ನ ಬಾಯೇ ನನ್ನನ್ನು ಅಪರಾಧಿಯೆಂದು ತೋರ್ಪಡಿಸುವದು. ನಾನು ನಿರ್ದೋಷಿಯಾಗಿದ್ದರೂ ಆತನು ನನ್ನನ್ನು ದುರ್ಮಾರ್ಗಿಯೆಂದು ನಿರೂಪಿಸುವನು.


ಆಹಾ, ಆತನು ನನ್ನಲ್ಲಿ ವಿರೋಧಕ್ಕೆ ಕಾರಣಗಳನ್ನು ಕಂಡುಹಿಡಿಯುತ್ತಾ ನನ್ನನ್ನು ಶತ್ರುವೆಂದೆಣಿಸಿಕೊಂಡಿದ್ದಾನೆ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು