ಯೋಬ 9:32 - ಕನ್ನಡ ಸತ್ಯವೇದವು J.V. (BSI)32 ಆತನು ನನ್ನಂಥವನಲ್ಲ, ಮನುಷ್ಯನಲ್ಲ, ನಾನು ಆತನೊಂದಿಗೆ ವಾದಿಸುವದು ಹೇಗೆ? ನಾವಿಬ್ಬರೂ ನ್ಯಾಯಾಸನದ ಮುಂದೆ ಕೂಡುವದು ಹೇಗೆ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ಆತನು ನನ್ನಂಥವನಲ್ಲ, ಮನುಷ್ಯನಲ್ಲ, ನಾನು ಆತನೊಂದಿಗೆ ವಾದಿಸುವುದು ಹೇಗೆ? ನಾವಿಬ್ಬರೂ ನ್ಯಾಯಾಸನದ ಮುಂದೆ ಕೂಡುವುದು ಹೇಗೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 ದೇವರು ನನ್ನಂಥ ನರನಲ್ಲ, ನಾನಾತನಿಗೆ ಉತ್ತರಿಸಲು ನಾವಿಬ್ಬರೂ ನ್ಯಾಯಾಲಯದಲ್ಲಿ ಕೂಡಿ ವಾದಿಸಲು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್32 ದೇವರು ನನ್ನಂಥ ಮನುಷ್ಯನಲ್ಲ; ನಾನು ಆತನಿಗೆ ಉತ್ತರಿಸಲಾರೆ. ನಾವು ನ್ಯಾಯಾಲಯದಲ್ಲಿ ಒಬ್ಬರನ್ನೊಬ್ಬರು ಸಂಧಿಸಲಾರೆವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ32 “ದೇವರು ನನ್ನಂಥ ಕೇವಲ ಮನುಷ್ಯನಲ್ಲ, ನಾನು ದೇವರೊಂದಿಗೆ ವಾದಿಸುವುದು ಹೇಗೆ? ನಾವಿಬ್ಬರೂ ನ್ಯಾಯಾಲಯದ ಮುಂದೆ ಕೂಡಿ ವಾದಿಸುವುದು ಹೇಗೆ? ಅಧ್ಯಾಯವನ್ನು ನೋಡಿ |
ಆಹಾ, ಒಬ್ಬನು ಸಿಂಹದೋಪಾದಿಯಲ್ಲಿ ಯೊರ್ದನಿನ ದಟ್ಟಡವಿಯಿಂದ [ಎದೋಮ್ಯರಿಗೆ] ನಿತ್ಯನೆಲೆಯಾದ ಗೋಮಾಳಕ್ಕೆ ಏರಿಬರುವನು; ಕ್ಷಣಮಾತ್ರದಲ್ಲಿ ನಾನು ಅವರನ್ನು ಅಲ್ಲಿಂದ ಓಡಿಸಿಬಿಡುವೆನು; ನಾನು ಆರಿಸಿಕೊಂಡವನನ್ನೇ ಅದನ್ನು ಕಾಯುವದಕ್ಕೆ ನೇವಿುಸುವೆನು; ನನ್ನ ಸಮಾನನು ಯಾವನು? ನನ್ನನ್ನು ನ್ಯಾಯವಿಚಾರಣೆಗೆ ಯಾವನು ಕರೆದಾನು? ಮಂದೆಯನ್ನು ಕಾಯುವ ಯಾವನು ನನ್ನೆದುರಿಗೆ ನಿಲ್ಲಬಲ್ಲನು?