Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಯೇಲ 1:15 - ಕನ್ನಡ ಸತ್ಯವೇದವು J.V. (BSI)

15 ಯೆಹೋವನ ದಿನವು ಸಮೀಪಿಸಿತು; ಅಯ್ಯೋ, ದಿನವೇ! ಅದು ಸರ್ವಶಕ್ತನಿಂದ ನಾಶನದಿನವಾಗಿಯೇ ಬರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಯೆಹೋವನು ಬರುವ ದಿನವು ಸಮೀಪಿಸಿತು. ಅದು ಸರ್ವಶಕ್ತನಾದ ಯೆಹೋವನಿಂದ ನಾಶವಾಗುವ ದಿನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಸರ್ವೇಶ್ವರಸ್ವಾಮಿಯ ದಿನ ಸಮೀಪಿಸಿದೆ. ಆ ದಿನ ಸರ್ವಶಕ್ತನಿಂದ ವಿನಾಶವನ್ನು ತರಲಿದೆ; ಎಂಥಾ ಭಯಂಕರ ದಿನವದು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಶೋಕಿಸಿರಿ. ಯಾಕೆಂದರೆ ಯೆಹೋವನ ಮಹಾದಿನವು ಹತ್ತಿರ ಬಂತು. ಆ ಸಮಯದಲ್ಲಿ ಸರ್ವಶಕ್ತನಾದ ದೇವರ ಸನ್ನಿಧಾನದಿಂದ ದಂಡನೆಯು ಬರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಆ ದಿನ ಭಯಂಕರವಾದದ್ದು! ಏಕೆಂದರೆ ಯೆಹೋವ ದೇವರ ದಿವಸವು ಸಮೀಪವಾಗಿದೆ. ಸರ್ವಶಕ್ತರ ಕಡೆಯಿಂದ ಇದು ನಾಶವಾದಂತೆ ಬರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಯೇಲ 1:15
18 ತಿಳಿವುಗಳ ಹೋಲಿಕೆ  

ಅಯ್ಯೋ, ಆ ದಿನವು ಘೋರವಾದದ್ದು, ಅದಕ್ಕೆ ಎಣೆಯಿಲ್ಲ; ಅದು ಯಾಕೋಬ್ಯರಿಗೆ ಇಕ್ಕಟ್ಟಿನ ದಿನ; ಆದರೂ ಅದರಿಂದ ಪಾರಾಗುವರು.


ಸೂರ್ಯನು ಕತ್ತಲಾಗುವನು, ಚಂದ್ರನು ರಕ್ತವಾಗುವನು.


ಯೆಹೋವನು ತನ್ನ ಸೈನ್ಯದ ಮುಂದೆ ದನಿಗೈಯುತ್ತಾನೆ; ಆತನ ದಂಡು ಬಹು ದೊಡ್ಡದು; ತನ್ನ ಮಾತನ್ನು ನೆರವೇರಿಸಿಕೊಳ್ಳುವಾತನು ಬಲಿಷ್ಟನಾಗಿದ್ದಾನೆ; ಯೆಹೋವನ ದಿನವು ಮಹತ್ತರವೂ ಅತಿ ಭಯಂಕರವೂ ಆಗಿದೆ; ಅದನ್ನು ತಾಳಿಕೊಳ್ಳುವವರು ಯಾರು?


ಅವರ ಕೋಪವು ಕಾಣಿಸುವ ಮಹಾದಿನ ಬಂದದೆ; ಅದರ ಮುಂದೆ ನಿಲ್ಲುವದಕ್ಕೆ ಯಾರು ಶಕ್ತರು ಎಂದು ಹೇಳಿದರು.


ಸಹೋದರರೇ, ನೀವು ಒಬ್ಬರಮೇಲೊಬ್ಬರು ಗುಣಗುಟ್ಟಬೇಡಿರಿ; ನ್ಯಾಯವಿಚಾರಣೆಗೆ ಗುರಿಯಾದೀರಿ. ಅಗೋ, ನ್ಯಾಯಾಧಿಪತಿಯು ಬಾಗಲಿನ ಹತ್ತಿರದಲ್ಲೇ ನಿಂತಿದ್ದಾನೆ.


ಆದರೆ ಕರ್ತನು ಅವನಿಗೆ ಶಿಕ್ಷಾಕಾಲ ಬರುತ್ತದೆಂದು ನಗುತ್ತಾನೆ.


ಆದರೆ ಆ ಯುದ್ಧದಿನವು ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ತನ್ನ ಶತ್ರುಗಳಿಗೆ ಮುಯ್ಯಿತೀರಿಸುವ ದಿನವಾಗಿದೆ; ಅದು ದಂಡನೆಯ ದಿವಸ; ಆಗ ಖಡ್ಗವು ನುಂಗಿ ನುಂಗಿ ತಣಿಯುವದು, ಅವರ ರಕ್ತವನ್ನು ತುಂಬಾ ಹೀರುವದು; ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಬಡಗಲಲ್ಲಿ ಯೂಫ್ರೇಟೀಸ್ ನದಿಯ ಹತ್ತಿರ ಬಲಿಮಾಡಬೇಕೆಂದಿದ್ದಾನಲ್ಲಾ.


ದಿನವು ಹತ್ತಿರವಾಯಿತು; ಹೌದು, ಯೆಹೋವನ ದಿನ, ಕಾರ್ಮುಗಿಲಿನ ದಿನ ಸಮೀಪಿಸಿತು; ಅದು ಜನಾಂಗಗಳಿಗೆ ನ್ಯಾಯ ತೀರಿಸತಕ್ಕ ಕಾಲ.


ಆಹಾ, ತೀರ್ಪಿನ ತಗ್ಗಿನಲ್ಲಿ ಗುಂಪು ಗುಂಪು! ತೀರ್ಪಿನ ತಗ್ಗಿನಲ್ಲಿ ಯೆಹೋವನ ದಿನವು ಸಮೀಪಿಸಿದೆ.


ಯೆಹೋವನ ದಿನವು ಸಮಸ್ತ ಜನಾಂಗಗಳಿಗೆ ಸಮೀಪಿಸಿದೆ; ನೀನು ಮಾಡಿದ್ದೇ ನಿನಗಾಗುವದು; ನಿನ್ನ ಕೃತ್ಯವೇ ನಿನ್ನ ತಲೆಗೆ ಬರುವದು.


ಕರ್ತನಾದ ಯೆಹೋವನ ಸನ್ನಿಧಿಯಲ್ಲಿ ಮೌನವಾಗಿರಿ; ಯೆಹೋವನ ದಿನವು ಸಮೀಪಿಸಿತು; ಯೆಹೋವನು ಯಜ್ಞದ ಔತಣವನ್ನು ಸಿದ್ಧಪಡಿಸಿದ್ದಾನೆ, ಕರೆದವರನ್ನು ಮಡಿಮಾಡಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು