Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಯೇಲ 1:16 - ಕನ್ನಡ ಸತ್ಯವೇದವು J.V. (BSI)

16 ನಮ್ಮ ಆಹಾರವು ನಮ್ಮ ಕಣ್ಣೆದುರಿಗೆ ಹಾಳಾಯಿತಲ್ಲಾ; ಹರ್ಷೋಲ್ಲಾಸಗಳು ನಮ್ಮ ದೇವರ ಆಲಯದೊಳಗಿಂದ ತೊಲಗಿದವಲ್ಲಾ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ನಮ್ಮ ಆಹಾರವು ನಮ್ಮ ಕಣ್ಣೆದುರಿಗೆ ಹಾಳಾಯಿತಲ್ಲಾ, ಸಂತೋಷವೂ ಹಾಗೂ ಉಲ್ಲಾಸವೂ ನಮ್ಮ ದೇವರ ಆಲಯವನ್ನು ಬಿಟ್ಟುಹೋಯಿತ್ತಲ್ಲಾ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ದವಸಧಾನ್ಯಗಳ ವಿನಾಶವನ್ನು ಕಣ್ಣಾರೆ ಕಾಣುತ್ತಿದ್ದೇವಲ್ಲವೆ? ದೇವಾಲಯದ ಹರ್ಷ ಉತ್ಸವಗಳು ನಿಂತುಹೋಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ನಮಗೆ ಆಹಾರವು ಇಲ್ಲದೆ ಹೋಯಿತು. ಆನಂದವೂ ಸಂತೋಷವೂ ನಮ್ಮ ದೇವಾಲಯದಿಂದ ಹೊರಟುಹೋದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ನಮ್ಮ ಕಣ್ಣೆದುರೇ ಆಹಾರವು ಹಾಳಾಯಿತಲ್ಲಾ. ಸಂತೋಷವೂ ಉಲ್ಲಾಸವೂ ನಮ್ಮ ದೇವರ ಆಲಯವನ್ನು ಬಿಟ್ಟುಹೋಯಿತಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಯೇಲ 1:16
11 ತಿಳಿವುಗಳ ಹೋಲಿಕೆ  

ದೇವರೇ, ನನ್ನ ದೇವರೇ, ಆಗ ನಾನು ನಿನ್ನ ಯಜ್ಞವೇದಿಯ ಬಳಿಗೆ, ನನ್ನ ಆನಂದನಿಧಿಯಾಗಿರುವ ನಿನ್ನ ಹತ್ತಿರಕ್ಕೆ, ಸೇರಿ ಕಿನ್ನರಿಯನ್ನು ಬಾರಿಸುತ್ತಾ ನಿನ್ನನ್ನು ಕೊಂಡಾಡುವೆನು.


ಯಾಜಕರೇ, ಗೋಣಿತಟ್ಟನ್ನು ಉಟ್ಟುಕೊಂಡು ಮೊರೆಯಿಡಿರಿ; ಯಜ್ಞವೇದಿಯ ಸೇವಕರೇ, ಗೋಳಾಡಿರಿ; ನನ್ನ ದೇವರ ದಾಸರೇ, ಬನ್ನಿರಿ, ಗೋಣಿತಟ್ಟನ್ನು ಸುತ್ತಿಕೊಂಡು ರಾತ್ರಿಯೆಲ್ಲಾ ಬಿದ್ದಿರ್ರಿ; ಧಾನ್ಯಪಾನನೈವೇದ್ಯಗಳು ನಿಮ್ಮ ದೇವರ ಆಲಯಕ್ಕೆ ಒದಗವು.


ಅಣ್ಣನು ಹೂಂಕರಿಸಿ ದೇಶದ ವ್ರಣವೈದ್ಯನಾಗಿರುವದಕ್ಕೆ ನನಗಿಷ್ಟವಿಲ್ಲ, ನನ್ನ ಮನೆಯಲ್ಲಿ ಅನ್ನವೆಲ್ಲಿ, ಅಂಗಿಯೆಲ್ಲಿ? ನನ್ನನ್ನು ಜನದೊಡೆಯನನ್ನಾಗಿ ಮಾಡಬೇಡಿರಿ ಎಂದು ಹೇಳುವನು.


ಆತನ ಪರಿಶುದ್ಧನಾಮದಲ್ಲಿ ಹಿಗ್ಗಿರಿ; ಯೆಹೋವನ ದರ್ಶನವನ್ನು ಕೋರುವವರ ಹೃದಯವು ಹರ್ಷಿಸಲಿ.


ನನ್ನಲ್ಲಿ ಸಂಭ್ರಮೋತ್ಸವದ ಧ್ವನಿ ಉಂಟಾಗುವಂತೆ ಮಾಡು; ಆಗ ನೀನು ಜಜ್ಜಿದ ಎಲುಬುಗಳು ಆನಂದ ಪಡುವವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು