ಯೋಯೇಲ 1:2 - ಕನ್ನಡ ಸತ್ಯವೇದವು J.V. (BSI)2 ವೃದ್ಧರೇ, ಕೇಳಿರಿ! ದೇಶನಿವಾಸಿಗಳೇ, ನೀವೆಲ್ಲರೂ ಕಿವಿಗೊಡಿರಿ! ಇಂಥ ಬಾಧೆಯು ನಿಮ್ಮ ಕಾಲದಲ್ಲಿಯಾಗಲಿ ನಿಮ್ಮ ತಂದೆಗಳ ಕಾಲದಲ್ಲಿಯಾಗಲಿ ಸಂಭವಿಸಿತ್ತೋ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ವೃದ್ಧರೇ, ಇದನ್ನು ಕೇಳಿರಿ, ದೇಶದ ನಿವಾಸಿಗಳೇ, ನೀವೆಲ್ಲರೂ ಕಿವಿಗೊಡಿರಿ. ಇಂಥ ಬಾಧೆಯು ನಿಮ್ಮ ಕಾಲದಲ್ಲಾಗಲಿ ನಿಮ್ಮ ಪೂರ್ವಿಕರ ಕಾಲದಲ್ಲಿಯಾಗಲಿ ಸಂಭವಿಸಿತ್ತೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ವೃದ್ಧರೇ ಕೇಳಿ: ನಾಡಿನ ನಿವಾಸಿಗಳೇ ಕಿವಿಗೊಡಿ. ನಿಮ್ಮ ಕಾಲದಲ್ಲಾಗಲೀ ನಿಮ್ಮ ಪೂರ್ವಿಕರ ಕಾಲದಲ್ಲಾಗಲೀ, ಇಂಥ ದುರ್ಘಟನೆ ಸಂಭವಿಸಿದ್ದುಂಟೇ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ನಾಯಕರೇ, ಈ ಸಂದೇಶಕ್ಕೆ ಕಿವಿಗೊಡಿರಿ. ದೇಶದಲ್ಲಿ ವಾಸಿಸುವ ಎಲ್ಲಾ ಜನರೇ, ನನ್ನ ಮಾತುಗಳನ್ನು ಆಲೈಸಿರಿ. ನಿಮ್ಮ ಜೀವಮಾನಕಾಲದಲ್ಲಿ ಇಂಥಾ ಸಂಗತಿ ಎಂದಾದರೂ ಸಂಭವಿಸಿದೆಯೋ? ಇಲ್ಲ! ನಿಮ್ಮ ತಂದೆಗಳ ಕಾಲದಲ್ಲಿಯಾದರೂ ಇಂಥಾ ಸಂಗತಿಗಳು ಸಂಭವಿಸಿದೆಯೋ? ಇಲ್ಲ! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಹಿರಿಯರೇ, ಇದನ್ನು ಕೇಳಿರಿ: ದೇಶದ ನಿವಾಸಿಗಳೇ, ಕಿವಿಗೊಡಿರಿ. ಇಂಥ ದುರ್ಘಟನೆಯು ನಿಮ್ಮ ದಿವಸಗಳಲ್ಲಾದರೂ ನಿಮ್ಮ ಪೂರ್ವಿಕರ ದಿವಸಗಳಲ್ಲಾದರೂ ಉಂಟಾಯಿತೋ? ಅಧ್ಯಾಯವನ್ನು ನೋಡಿ |